
ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಮುಖ್ಯಮಂತ್ರಿ
Team Udayavani, Nov 24, 2022, 7:10 PM IST

ಬೆಂಗಳೂರು: ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಅಭಿವೃದ್ಧಿ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಅಲ್ಲಿನ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು, ರಾಜ್ಯದ ಆರ್ಥಿಕ ಬೆಳವಣಿಗೆ ಹಾಗೂ ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಆಗಲಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಫೌಂಡ್ರಿ ಮತ್ತು ಹೈಡ್ರಾಲಿಕ್ಸ್ ಉದ್ಯಮಗಳಿಗೆ ಉತ್ತೇಜನ ನೀಡಲು ಫೌಂಡ್ರಿ ಪಾರ್ಕ್ ಸ್ಥಾಪಿಸುವಂತೆ ನಿಯೋಗವು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಭೂಮಿ ಗುರುತಿಸಿ, ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೆ ಎಂಎಸ್‌ಎಂಇಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸುವ ಶುಲ್ಕ ರಾಜ್ಯದಲ್ಲಿ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದರೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್‌ಐಸಿ ಆಸ್ಪತ್ರೆ ಸ್ಥಾಪಿಸುವ ಕುರಿತಂತೆ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸುವುದಾಗಿಯೂ ತಿಳಿಸಿದರು.
ಮುಂಬಯಿ-ಚೆನ್ನೈ ಕಾರಿಡಾರ್‌ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಟೌನ್‌ಶಿಪ್ ರಚಿಸಲಾಗುವುದು. ಇದರ ಸದುಪಯೋಗವನ್ನು ಉದ್ಯಮಿಗಳು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳಗಾವಿಯಲ್ಲಿ ಇಂಟೆಗ್ರೇಟೆಡ್ ಟೆಕ್ಸ್‌ಟೈಲ್ ಉದ್ಯಮ ಸ್ಥಾಪಿಸಲು ಮುಂದೆ ಬರುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಬೆಳಗಾವಿಯ ಕೈಗಾರಿಕೋದ್ಯಮಗಳ ಬೆಳವಣಿಗೆ ಕುರಿತಂತೆ ಬೆಳಗಾವಿಗೆ ಭೇಟಿ ನೀಡಿದಾಗ ಉದ್ಯಮಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
