ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ


Team Udayavani, Aug 22, 2020, 3:01 PM IST

ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ

ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್‌ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ ಸ್ಥಾಪನೆಗೆ ಸ್ಥಳ ಪ್ರಾಶಸ್ತ್ಯವಾಗಿದೆ. ಇಲ್ಲಿ ರಫ್ತು ಕೇಂದ್ರ ಸ್ಥಾಪಿಸಿದರೆ ಅನುಕೂಲತೆಗಳು ಹೆಚ್ಚು ಎಂದು ಶಾಸಕರು ಸಭೆಯ ನಂತರ ತಾವು ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯುವಕರಿಗೆ ಉದ್ಯೋಗಾವಕಾಶ: ಕೇಂದ್ರ ಸ್ಥಾಪನೆಯಿಂದ ರಫ್ತು ಸಾಮರ್ಥ್ಯದೊಂದಿಗೆ ಹೆಚ್ಚಿನ ಆದಾಯ ಪಡೆಯಲು ಸಾಧ್ಯ. ಇದರ ಜೊತೆಗೆ ಯುವಕರಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಸಾಧ್ಯ. ಈ ವಿಷಯ ತಾವು ಸಭೆಯಲ್ಲಿ ಪ್ರಸ್ತಾಪಿಸಿರುವುದಾಗಿ ಹಾಗೂ ಸರ್ಕಾರದ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಚಿಸಿದ ರಫ್ತು ಪ್ರಮೋಷನ್‌ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದಾಗಿ ಶಾಸಕರು ತಿಳಿಸಿದರು.

ಶಾಲೆ ಶತಮಾನೋತ್ಸವಕ್ಕೆ  ಕಾಣಿಕೆ : ತಾವು ಕಲಿತ ಶಾಲೆಯಲ್ಲಿ ಕೆಲ ವರ್ಷಗಳ ಹಿಂದೆ ಗುರುವಂದನೆ ಕಾರ್ಯಕ್ರಮ ನಡೆಸಿ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಈಗ ಇದೇ ಶಾಲೆ ಶತಮಾನೋತ್ಸವಕ್ಕೆ ವಿಶೇಷ ಕಾಣಿಕೆ ನೀಡಲು ಮುಂದಾಗಿದ್ದಾರೆ. ನಗರದ ಶಹಾಪುರದಲ್ಲಿರುವ ಮೀರಾಪುರ ಗಲ್ಲಿಯ ಚಿಂತಾಮಣರಾವ್‌ ಶಾಲೆಯಲ್ಲಿ ಅಭಯ ಪಾಟೀಲ ಕಲಿತಿದ್ದು ಶತಮಾನೋತ್ಸವ ಸಂಭ್ರಮದಲ್ಲಿರುವ ಶಾಲೆ ಅಭಿವೃದ್ಧಿಗೆ ಎರಡೂವರೆ ಕೋಟಿ ರೂ. ಅನುದಾನ ವೆಚ್ಚ ಮಾಡಿದ್ದಾರೆ. ಇದೇ ವರ್ಷ ನಡೆಯಲಿರುವ ಶಾಲೆ ಶತಮಾನೋತ್ಸವ ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಅಭಯ ಪಾಟೀಲ ನಿರ್ಧರಿಸಿದ್ದಾರೆ. ಶುಕ್ರವಾರ ಶಾಲೆಗೆ ಭೇಟಿ ನೀಡಿದ ಶಾಸಕರು ಶತಮಾನೋತ್ಸವ ಆಚರಣೆ ಕುರಿತು ಶಿಕ್ಷಕರ ಜೊತೆ ಚರ್ಚೆ ನಡೆಸಿದರಲ್ಲದೆ 1.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶಾಲೆ ಸಭಾಗೃಹದ ಅಭಿವೃದ್ಧಿಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.