ಫಸಲಿಗೆ ಕೊಡಲಿ ಏಟು, ರೈತರಿಗೆ ಪೊಲೀಸರೇಟು

•ಭೂಸ್ವಾಧೀನಕ್ಕೆ ವಿರೋಧ; ಪೊಲೀಸ್‌ ದರ್ಪ •ಕಾಲಾವಕಾಶ ಕೇಳಿದರೂ ಒಪ್ಪದ ಎನ್‌ಎಚ್ಎಐ

Team Udayavani, May 18, 2019, 11:32 AM IST

belegavi-tdy-1…

ಬೆಳಗಾವಿ: ಮಳೆ ಬಂದು ಇಡೀ ಭೂಮಿ ಫಸಲು ತುಂಬಿ ರೈತರ ಮೊಗದಲ್ಲಿ ಸಂತಸ ಕಾಣುವ ಮುನ್ನವೇ ಬೈಪಾಸ್‌ ರಸ್ತೆಯ ಮಹಾಮಾರಿಯಿಂದಾಗಿ ರೈತರು ಜಮೀನು ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಭೂಮಿ ಬಿಟ್ಟು ಕೊಡಲು ಒಪ್ಪದ ರೈತರನ್ನು ಪೊಲೀಸರು ಏಟು ನೀಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದಲ್ಲಿ ಹಾಯ್ದು ಹೋಗುವ ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ದಿನ ದಿನವೂ ರೈತರ ವಿರೋಧ ಹೆಚ್ಚಾಗುತ್ತಲೇ ಇದೆ. ಫಲವತ್ತಾದ ಭೂಮಿ ಕೊಟ್ಟು ಹೊಟ್ಟೆಗೆ ಏನು ತಿನ್ನುವುದು ಎಂಬ ಆಕ್ರೋಶದ ಮಾತುಗಳನ್ನಾಡುತ್ತಿದ್ದಾರೆ. ಶುಕ್ರವಾರ ಬೆಳಗ್ಗೆ ಜೆಸಿಬಿ ಮೂಲಕ ಭೂಮಿ ಕಸಿದುಕೊಳ್ಳಲು ಧಾಮಣೆ ಬಳಿ ಬಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತೀವ್ರ ಪ್ರತಿರೋಧ ಒಡ್ಡಿದ ರೈತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಗರದ ವಡಗಾಂವ ರೈತ ಗಲ್ಲಿಯ ಉಮೇಶ ಬಿರ್ಜೆ, ಈತನ ಪತ್ನಿ ನೀಲಮ್‌ ಬಿರ್ಜೆ, ಪ್ರದೀಪ ಬಿರ್ಜೆ, ತಾನಾಜಿ ಹಲಗೇಕರ, ಪಿಂಟು ಕಂಗ್ರಾಳಕರ ಹಾಗೂ ಪ್ರಕಾಶ ನಾಯಿಕ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಮುಚ್ಚಳಿಕೆ ಪತ್ರ ಬರೆದು ವಾಪಸ್ಸು ಕಳುಹಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಬಿರ್ಜೆ ಎಂಬವರ ಹೊಲದಲ್ಲಿ ಅಧಿಕಾರಿಗಳು ಜೆಸಿಬಿ ತೆಗೆದುಕೊಂಡು ಭೂ ಸ್ವಾಧೀನ ಪಡಿಸಿಕೊಳ್ಳಲು ಆಗಮಿಸಿದ್ದರು. ಹೊಲದಲ್ಲಿ ಕಬ್ಬು ಹಾಕಲಾಗಿತ್ತು. 3-4 ಅಡಿಗಳವರೆಗೆ ಕಬ್ಬು ಬೆಳೆದು ನಿಂತಿತ್ತು. 2-3 ದಿನಗಳ ಕಾಲ ಬಳಿಕ ತೆರವು ಕಾರ್ಯಾಚರಣೆ ನಡೆಸುವಂತೆ ಬಿರ್ಜೆ ಕುಟುಂಬದವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಪ್ರಾಧಿಕಾರ ಜೆಸಿಬಿ ಮೂಲಕ ಹೊಲದಲ್ಲಿ ಬೆಳೆ ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಇದನ್ನು ಕಂಡ ರೈತರ ಪತ್ನಿ ನೀಲಮ್‌ ತಡೆಯಲು ಹೋಗಿದ್ದಾಳೆ. ಆಗ ರೈತ ಮಹಿಳೆಯನ್ನು ಪೊಲೀಸರು ತಡೆದು ಜಡೆ ಹಿಡಿದು ಏಟು ನೀಡಿದ್ದಾರೆ. ಇದರಿಂದ ಕುಪಿತಗೊಂಡ ಇನ್ನುಳಿದ ರೈತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕೂಡಲೇ ರೈತ ಮಹಿಳೆ ಸೇರಿದಂತೆ ಇನ್ನುಳಿದವರನ್ನು ಪೊಲೀಸರು ತಮ್ಮ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಶಾಂತಿ ಭಂಗವಾಗಬಾರದೆನ್ನುವ ಉದ್ದೇಶದಿಂದ ರೈತರ ಕಡೆಯಿಂದ ಮುಚ್ಚಳಿಕೆ ಪತ್ರ ಬರೆದು ವಾಪಸ್ಸು ಕಳುಹಿಸಿದ್ದಾರೆ.

ರೈತರನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಇತ್ತ ಜೆಸಿಬಿ ಮೂಲಕ ಹೊಲ ತೆರವು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಫಲವತ್ತಾಗಿ ಬೆಳೆದು ನಿಂತಿದ್ದ ಬೆಳೆಗೆ ಜೆಸಿಬಿ ಮೂಲಕ ತೆರವು ಮಾಡುತ್ತಿರುವುದನ್ನು ಕಂಡು ರೈತರು ಮರುಗಿದರು. ಬೆಳೆ ಬರಬೇಕಾದರೆ ರೈತರು ಎಷ್ಟು ಕಷ್ಟ ಪಡಬೇಕಾಗುತ್ತದೆ. ಆದರೆ ಅಧಿಕಾರಿಗಳು ರೈತರಿಗೆ ಕಾಲಾವಕಾಶ ನೀಡದೇ ತುಂಬಿದ ಫಸಲನ್ನು ನಿರ್ದಯೆಯಿಂದ ಕಿತ್ತೂಗೆಯುತ್ತಿರುವುದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರೂ ಪ್ರಾಧಿಕಾರ ಮಾತ್ರ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.