ಶೀಘ್ರ ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ: ಸತೀಶ ಜಾರಕಿಹೊಳಿ
Team Udayavani, Dec 31, 2021, 11:15 PM IST
ಬೆಳಗಾವಿ: ಬಿಜೆಪಿ ಹಾಗೂ ಜೆಡಿಎಸ್‌ನ ಪ್ರಭಾವಿ ನಾಯಕರು ಕಾಂಗ್ರೆಸ್‌ಗೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ನ ಹಲವಾರು ನಾಯಕರು ತಮ್ಮ ಸೇರ್ಪಡೆ ಕುರಿತಂತೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದಾರೆ. ಆದರೆ ಅವರ ಹೆಸರನ್ನು ಈಗ ಬಹಿರಂಗಪಡಿಸುವುದಿಲ್ಲ ಎಂದರು.
ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಆರಂಭವಾಗಿದೆ. ಜನರು ನಿಧಾನವಾಗಿ ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಇದಕ್ಕೆ ಈಗ ಬಂದಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಸಾಕ್ಷಿ. ಈ ಫಲಿತಾಂಶ ನಮಗೆ ಮುಂಬರುವ ಜಿಪಂ, ತಾಪಂ ಹಾಗೂ ವಿಧಾನಸಭಾ ಚುನಾವಣೆಗಳಿಗೆ ಹೊಸ ಶಕ್ತಿ ನೀಡಿದೆ.
ಇದನ್ನೂ ಓದಿ:ಮಹೀಂದ್ರಾ ಜೈಲೋ ವಾಹನವನ್ನು ಕಚ್ಚಿ ಎಳೆದ ಹುಲಿ- ವಿಡಿಯೋ ವೈರಲ್
ಶೀಘ್ರದಲ್ಲೇ ತಾಪಂ ಮತ್ತು ಜಿಪಂ ಚುನಾವಣೆ ಬರಲಿದೆ. ಅಭ್ಯರ್ಥಿಗಳ ಗೆಲುವಿಗಾಗಿ ಸಿದ್ಧತೆಗಳು ನಡೆದಿವೆ. ಹೆಚ್ಚಿನ ಜನರು ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ ಎಂದು ಸಂತಸ ಪಡುವಂತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಬೇಕಾದ ಅನಿವಾರ್ಯತೆ ಇದೆ. ಕಿತ್ತೂರು ಪಪಂ ಚುನಾವಣೆಯಲ್ಲಿ ಕಾರ್ಯಕರ್ತರ ನಡುವಿನ ಮೈನಸ್ಸಿನಿಂದ ಅಲ್ಪ ಹಿನ್ನಡೆಯಾಗಿದೆ. ಅದನ್ನು ಸರಿಪಡಿಸಲಾಗುವುದು. ಸ್ಥಳೀಯ ಸಂಸ್ಥೆಗಳ ಒಟ್ಟಾರೆ ಫಲಿತಾಂಶ ಸಂತಸ ತಂದಿದೆ.
ರಾಜ್ಯದಲ್ಲಿ ನಿರೀಕ್ಷೆ ಮೀರಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಲ್ಪ್ ಕೋರ್ಸ್ ನಲ್ಲಿ ಕಾಮರಾ ಕಣ್ಣಿಗೆ ಬಿತ್ತು ಚಿರತೆ: ಅರಣ್ಯ ಇಲಾಖೆಯಿಂದ ಫೋಟೊ ಬಿಡುಗಡೆ
ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬ ಇಲ್ಲದಿದ್ದರೂ, ಹಿಂದೂಗಳೇ ಸೇರಿ ಮೊಹರಂ ಹಬ್ಬ ಆಚರಿಸುತ್ತಾರೆ
ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ ನಗರದಲ್ಲಿ ಚಿರತೆ ಪ್ರತ್ಯಕ್ಷ : ಇಂದು ಹಲವು ಶಾಲೆಗಳಿಗೆ ರಜೆ ಘೋಷಿಸಿದ ಡಿಡಿಪಿಐ
ಎಲ ಹಳ್ಳಿಗಳಲ್ಲೂ ಜೆಜೆಎಂ ಕಾಮಗಾರಿ ಪ್ರಗತಿ: ಯಾದವಾಡ