ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ
Team Udayavani, Dec 12, 2018, 6:00 AM IST
ಬೆಳಗಾವಿ: ಕಬ್ಬಿನ ಬಿಲ್ ಬಾಕಿ ಹಾಗೂ ಎಫ್‌ಆರ್‌ಪಿ ದರಕ್ಕಾಗಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ರೈತರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಕಬ್ಬಿನ ಸಮಸ್ಯೆ ಇತ್ಯರ್ಥಕ್ಕೆ ಕೂಡಲೇ ರಾಜ್ಯ ಸರಕಾರ ಸ್ಪಂದಿಸಬೇಕು. ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿದ್ದರೂ ಸರಕಾರ ಸ್ಪಂದಿಸುತ್ತಿಲ್ಲ. ರೈತರನ್ನು ಸಂಪೂರ್ಣ
ನಿರ್ಲಕ್ಷಿಸಿ ಅಧಿವೇಶನ ನಡೆಸಿದ್ದು ಏಕೆ ಎಂದು ಪ್ರಶ್ನಿಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದರೂ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ
ಕುರಬೂರು ಶಾಂತಕುಮಾರ ಅವರು, ವಾಪಸ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಉಪವಾಸ ಸತ್ಯಾಗ್ರಹ ನಿರತ ರೈತ ಮುಖಂಡ ಸಿದ್ದಗೌಡ ಮೋದಗಿ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಡಿ.13ರಂದು ಬೆಳಗಾವಿಯಿಂದ ಸುವರ್ಣ ವಿಧಾನಸೌಧದವರೆಗೂ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗುವುದು. ಹೋರಾಟವನ್ನು ಬೆಳಗಾವಿ ಬಾರ್ ಅಸೋಸಿಯೇಷನ್ ಹಾಗೂ ವಕೀಲರು ಬೆಂಬಲಿಸಿದ್ದಾರೆ. ಮುಂದಿನ ಅನಾಹುತಕ್ಕೆ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ