ವೈಯಕ್ತಿಕ ವಿಚಾರಗಳಿಗಿಂತ ದೇಶವೇ ಮೊದಲು: ತೇಜಸ್ವಿನಿ

Team Udayavani, Apr 20, 2019, 1:51 PM IST

gad-1

ಬೆಳಗಾವಿ: ದೇಶ ಮೊದಲು, ನಂತರ ಪಕ್ಷ ಹಾಗೂ ಕೊನೆಯದಾಗಿ ವೈಯಕ್ತಿಕ ವಿಚಾರಗಳು ಬರುತ್ತವೆ. ಹೀಗಾಗಿ ನಾನು ಮೊದಲಿನಿಂದಲೂ ದೇಶ ಮೊದಲು ಎಂಬ ಧೋರಣೆಯಿಂದ ಬೆಳೆದವಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಹೇಳಿದರು.

ನಗರದ ಟಿಳಕವಾಡಿಯ ಮಿಲೇನಿಯಂ ಗಾರ್ಡನ್‌ದಲ್ಲಿ ಶುಕ್ರವಾರ ನಡೆದ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶ ಮೊದಲು ಎನ್ನುವ ಅರಿವಿದ್ದರೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಸಾಧ್ಯವಿದೆ. ಹೀಗಾಗಿ ಪ್ರತಿಯೊಬ್ಬರೂ ದೇಶದತ್ತ ಗಮನಹರಿಸಿದರೆ ಸುಂದರ ಪರಿಸರ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ದೊಡ್ಡ ಹಬ್ಬ(ಚುನಾವಣೆ) ನಮ್ಮ ಮುಂದೆ ಬಂದಿದೆ. ಹಬ್ಬ ಅಂದರೆ ಮಹಿಳೆಯರಿಗೆ ಹೆಚ್ಚಿನ ಕೆಲಸ ಇರುತ್ತದೆ. ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಪ್ರತಿ ಚುನಾವಣೆಯಲ್ಲಿ ನಮ್ಮ ಅಧಿಕಾರ(ಮತದಾನ)ವನ್ನು ಸರಿಯಾದ ರೀತಿಯಲ್ಲಿ ಕೊಡುತ್ತ ಬಂದಿದ್ದೇವೆ. ಈಗಲೂ ಮತ್ತೂಮ್ಮೆ ಮೋದಿ ಅವರನ್ನು 300 ಪ್ಲಸ್‌ ಎಂಬ ಘೋಷಣೆಯೊಂದಿಗೆ ಮುಂದೆ ಸಾಗಬೇಕಿದೆ. ರಾಜ್ಯ ಹಾಗೂ ದೇಶಾದ್ಯಂತ ಮೋದಿ ಅಲೆ ಜೋರಾಗಿದೆ. ಹೀಗಾಗಿ ಇಂಥ ಮಹಾನ್‌ ವ್ಯಕ್ತಿತ್ವದ ಮೋದಿ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಮತ ಚಲಾಯಿಸಬೇಕಿದೆ ಎಂದರು.

ನಾಯಕತ್ವ ಗುಣ ಹೊಂದಿದ್ದ ಪತಿ ದಿ| ಅನಂತಕುಮಾರ ಬಿಜೆಪಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಜನೌಷಧಿ ಕೇಂದ್ರಗಳ ಮೂಲಕ ಎಲ್ಲರಿಗೂ ಕಡಿಮೆ ದರದಲ್ಲಿ ಔಷಧ ನೀಡುವ ಕಾರ್ಯ ಆರಂಭಿಸಿದ ಶ್ರೇಯಸ್ಸು ಮೋದಿ ಹಾಗೂ ಅನಂತಕುಮಾರ ಅವರಿಗೆ ಸಲ್ಲುತ್ತದೆ ಎಂದ ಅವರು, ದೇಶದ ಇತಿಹಾಸದಲ್ಲಿ 70 ವರ್ಷಗಳ ಅವಧಿಯಲ್ಲಿ ಆಗದಿರುವುದನ್ನು ಐದೇ ವರ್ಷದಲ್ಲಿ ಮನೆ, ಮನೆಗೆ ಸಿಲಿಂಡರ್‌ ತಲುಪಿಸುವ ಕಾರ್ಯ ಮೋದಿ ಸರ್ಕಾರ ಮಾಡಿದೆ ಎಂದರು.

ಶಾಸಕ ಅಭಯ ಪಾಟೀಲ ಮಾತನಾಡಿ, ಕಾರ್ಯಕರ್ತರ ರೂಪದಲ್ಲಿ ಬಂದವರು ನಾವು ಈಗಲೂ ಕಾರ್ಯಕರ್ತರಾಗಿಯೇ ಇದ್ದೇವೆ. ಬೆಳಗಾವಿಯಲ್ಲಿ ಮಹಿಳಾ ಶಕ್ತಿ ಹೆಚ್ಚಾಗಿದೆ ಎಂದ ಅವರು, ಅಂಗಡಿ ಕಳೆದ ಸಲ 72 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಅದರಲ್ಲಿ ದಕ್ಷಿಣ ಕ್ಷೇತ್ರದಲ್ಲಿಯೇ 65 ಸಾವಿರ ಅಂತರ ಆಗಿತ್ತು. ಈಗ ಗೆಲುವು ನಮ್ಮ ಕ್ಷೇತ್ರದಲ್ಲಿ ಅಷ್ಟೇ 75 ಸಾವಿರ ಮತಗಳ ಅಂತರ ಇರಲಿದೆ ಎಂದರು.

ಶಾಸಕ ಅನಿಲ ಬೆನಕೆ ಮಾತನಾಡಿ, ಪ್ರತಿ ಯಶಸ್ವಿ ಪುರುಷರ ಹಿಂದೆ ಮಹಿಳೆ ಇರುತ್ತಾರೆ. ತೇಜಸ್ವಿನಿ ಅನಂತಕುಮಾರ, ಮಂಗಲಾ ಅಂಗಡಿ, ಶಿಲ್ಪಾ ಶೆಟ್ಟರ ಹಾಗೂ ಅಭಯ ಪಾಟೀಲರ ಪತ್ನಿ ಆದರ್ಶರಾಗಿದ್ದಾರೆ ಎಂದು ಬಣ್ಣಿಸಿದರು.

ಮಂಗಲಾ ಅಂಗಡಿ ಮಾತನಾಡಿ, ಮೂರು ಬಾರಿ ಸಂಸದರನ್ನಾಗಿ ಸುರೇಶ ಅಂಗಡಿ ಅವರನ್ನು ಆಯ್ಕೆ ಮಾಡಿರುವ ಜನರಿಗೆ ನಾನು ಚಿರಋಣಿ. ನಾಲ್ಕನೇ ಬಾರಿಗೆ ಗೆಲ್ಲಿಸಿ ಕೊಡುವ ಜವಾಬ್ದಾರಿ ಜಿಲ್ಲೆಯ ಜನರ ಮೇಲಿದೆ ಎಂದು ಪತಿ ಪರ ಮತಯಾಚಿಸಿದರು. ಶಾಸಕ ರಘುಪತಿ ಭಟ್, ಜಗದೀಶ ಶೆಟ್ಟರ ಪತ್ನಿ ಶಿಲ್ಪಾ ಶೆಟ್ಟರ, ಬಿಜೆಪಿ ಮುಖಂಡ ಎಂ.ಬಿ. ಜಿರಲಿ ಸೇರಿದಂತೆ ದಕ್ಷಿಣ ಕ್ಷೇತ್ರದ ಮಹಿಳೆಯರು ಇದ್ದರು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.