ಜಿಲ್ಲೆಯಲ್ಲಿ ಇನ್ನೂ ತಗ್ಗಿಲ್ಲ ಪ್ರವಾಹ ಆತಂಕ

Team Udayavani, Sep 11, 2019, 10:33 AM IST

ರಾಯಬಾಗ: ಬಾವನಸೌಂದತ್ತಿ ಗ್ರಾಮದ ಸುಗಂಧಾದೇವಿ ದೇವಸ್ಥಾನ ಜಲಾವೃತಗೊಂಡಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಸಾಕಷ್ಟು ಕಡಿಮೆಯಾಗಿದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಇನ್ನೂ ಧಾರಾಕಾರ ಮಳೆ ಮುಂದುವರಿದಿದ್ದು, ಕೃಷ್ಣಾ ಹಾಗೂ ವೇದಗಂಗಾ ನದಿಗಳ ಪ್ರವಾಹ ಹಾಗೆಯೇ ಮುಂದುವರಿದಿದೆ. ಈ ಎರಡೂ ನದಿಗಳ ನೀರಿನಮಟ್ಟ ಏರಿಕೆಯಾಗುತ್ತಲೇ ಇದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಮತ್ತಷ್ಟು ಹೆಚ್ಚಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ 1,65,250 ಕ್ಯೂಸೆಕ್‌ ಹಾಗೂ ವೇದಗಂಗಾ ನದಿಯಿಂದ 33792 ಕ್ಯೂಸೆಕ್‌ ಸೇರಿದಂತೆ ಚಿಕ್ಕೋಡಿ ಬಳಿ ಕೃಷ್ಣಾ ನದಿಗೆ 1,99,200 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕೃಷ್ಣಾ ನದಿ ಹರಿವು 10 ಸಾವಿರ ಕ್ಯೂಸೆಕ್‌ನಷ್ಟು ಏರಿಕೆಯಾಗಿದೆ. ಇದರಿಂದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಹೆಚ್ಚಿದೆ.

ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶ ಹಾಗೂ ಖಾನಾಪುರ ತಾಲೂಕಿನಲ್ಲಿ ಮಳೆ ಪ್ರಮಾಣ ತಗ್ಗಿದೆ. ಇದರಿಂದ ಒಂದು ವಾರದಿಂದ ಸಾಕಷ್ಟು ಹೆದರಿಕೆ ಹುಟ್ಟಿಸಿದ್ದ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಅಬ್ಬರ ಮಂಗಳವಾರ ಮತ್ತಷ್ಟು ಕಡಿಮೆಯಾಗಿದೆ.

ಘಟಪ್ರಭಾ ನದಿಗೆ ನಿರ್ಮಿಸಲಾಗಿರುವ ಹಿಡಕಲ್ ಜಲಾಶಯಕ್ಕೆ ಈಗ 21064 ಕ್ಯೂಸೆಕ್‌ ನೀರು ಬರುತ್ತಿದೆ. ಖಾನಾಪುರ ತಾಲೂಕಿನಲ್ಲಿ ಮಳೆಯ ಅಬ್ಬರ ತಗ್ಗಿರುವದರಿಂದ ಮಲಪ್ರಭಾ ನದಿ ನೀರಿನ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದ.

ಮಂಗಳವಾರ ಬೆಳಗ್ಗೆ ದಾಖಲಾದ ಅಂಕಿ ಅಂಶಗಳ ಪ್ರಕಾರ ಮಲಪ್ರಭಾ ಜಲಾಶಯಕ್ಕೆ 7,314 ಕ್ಯೂಸೆಕ್‌ ನೀರು ಬರುತ್ತಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ ಇಷ್ಟೇ ಪ್ರಮಾಣದ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ನೀರಿನ ಪ್ರಮಾಣ ಕಡಿಮೆಯಾಗಿರುವದರಿಂದ ರಾಮದುರ್ಗ ತಾಲೂಕಿನ ನದಿ ತೀರದ ಗ್ರಾಮಗಳಾದ ಸುನ್ನಾಳ, ಹಂಪಿಹೊಳಿ, ಬೆನ್ನೂರ, ಕಿಲಬನೂರ ಸುರೇಬಾನ ಮೊದಲಾದ ಗ್ರಾಮಗಳ ಜನರಲ್ಲಿ ಆತಂಕ ಕಡಿಮೆಯಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ರಾಮದುರ್ಗ: ನೆರೆ ಸಂತ್ರಸ್ತರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. ಪ್ರವಾಹ ಪೀಡಿತ ಎಲ್ಲ ಫಲಾನುಭವಿಗಳಿಗೂ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು...

  • ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಫೆ.28, 29ರಂದು ಬೆಳವಡಿ ಮಲ್ಲಮ್ಮನ ಉತ್ಸವ-2020 ಅದ್ಧೂರಿಯಾಗಿ...

  • ಮುನವಳ್ಳಿ: ಪಟ್ಟಣದ ಆರಾಧ್ಯ ದೈವ ಶ್ರೀ ಪಂಚಲಿಂಗೇಶ್ವರ ಮಹಾರಥೋತ್ಸವ ರವಿವಾರ ಸಂಜೆ ಸಂಭ್ರಮದಿಂದ ನಡೆಯಿತು.  ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು...

  • ಬೆಳಗಾವಿ: ಸಮಾಜದಲ್ಲಿರುವ ಹಿರಿಯ ನಾಗರಿಕರಿಗಾಗಿ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಲು ಪ್ರಯತ್ನ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ...

  • ರಾಯಬಾಗ: ತಾಲೂಕಿನ ಚಿಂಚಲಿ ಪಟ್ಟಣದ ಟೊಣ್ಣೆ ತೋಟದ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ವೆಚ್ಚದ ಸೇತುವೆ ಸಹಿತ ಬಾಂದಾರ ನಿರ್ಮಾಣಕ್ಕೆ ಶನಿವಾರ...

ಹೊಸ ಸೇರ್ಪಡೆ