ಮಾಜಿ ಸಂಸದ ಪ್ರಕಾಶ ಹುಕ್ಕೇರಿಯಿಂದ ಸ್ವಂತ ಖರ್ಚಿನಲ್ಲಿ 14 ವೈದ್ಯಕೀಯ ಸಿಬ್ಬಂದಿ ನೇಮಕ
Team Udayavani, May 8, 2021, 5:50 PM IST
ಚಿಕ್ಕೋಡಿ: ಗಡಿ ಭಾಗದಲ್ಲಿ ಕೊರೊನಾ ಎರಡನೆ ಅಲೆ ಅವ್ಯಾಹತವಾಗಿ ಹಬ್ಬುತ್ತಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಸಿಗಬೇಕೆನ್ನುವ ಉದ್ದೇಶದಿಂದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 14 ಜನ ಆರೋಗ್ಯ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಂಡು ಕೊರೊನಾ ನಿಯಂತ್ರಿಸಲು ಮುಂದಾಗಿದ್ದಾರೆ.
ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಆರೋಗ್ಯ ಸಿಬ್ಬಂದಿಗಳ ನೇಮಕ ಮಾಡಿಕೊಂಡು ಅವರೊಂದಿಗೆ ಮಾತುಕತೆ ನಡೆಸಿದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಕೊರೊನಾ ಸೋಂಕಿತರು ಹಾಗೂ ಇತರೆ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಕಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಬ್ಬರು ಎಂಬಿಬಿಎಸ್ ವೈದ್ಯಾಧಿಕಾರಿಗಳು, 6 ನರ್ಸ್‌ಗಳು ಹಾಗೂ 6 ಜನ ಡಿ-ಗ್ರುಪ್ ಸಿಬ್ಬಂದಿಗಳು ಹೀಗೆ ಒಟ್ಟು 14 ಜನ ಸಿಬ್ಬಂದಿಯನ್ನು ಶ್ರೀ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ನೇಮಕಾತಿ ಮಾಡಿಕೊಂಡಿದ್ದು, ವೈದ್ಯರು ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದರು.
ಅಲ್ಲದೇ ಯಕ್ಸಂಬಾ ಆರೋಗ್ಯ ಕೇಂದ್ರದಲ್ಲಿ ಔಷಧಿಗಳು ಲಭ್ಯವಿಲ್ಲದೆ ಇದ್ದಲ್ಲಿ ಮಾನೆ, ಭೋಪಳೆ ಮೆಡಿಕಲ್ ಅಂಗಡಿಗಳಲ್ಲಿ ಆಸ್ಪತ್ರೆಯಲ್ಲಿನ ಚೀಟಿ ತೋರಿಸಿ ಉಚಿತವಾಗಿ ಔಷಧಿ ಪಡೆದುಕೊಳ್ಳಲು ಸೂಚಿಸಬೇಕು. ಈಗಾಗಲೇ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಚಿಕ್ಕೋಡಿ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದರಂತೆ ಯಕ್ಸಂಬಾ, ಅಂಕಲಿ ಆರೋಗ್ಯ ಕೇಂದ್ರಗಳಲ್ಲಿಯೂ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಸಾರ್ವಜನಿಕರಿಗೆ ಮಾಹಿತಿ ನೀಡಲು ಒತ್ತಾಯ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರಗಳಲ್ಲಿ ದಿನನಿತ್ಯ ಹೊಸದಾಗಿ ದಾಖಲಾಗುತ್ತಿರುವ, ಗುಣಮುಖರಾಗಿ ಡಿಸಾcರ್ಜ್ ಆಗುತ್ತಿರುವ ಹಾಗೂ ಸಾವಿನ ಸಂಖ್ಯೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಸಾರ್ವಜನಿಕರಿಗೆ ತಲುಪುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಕೂಡ ರಸ್ತೆ-ಬೀದಿಗಳಲ್ಲಿ ಸೋಂಕು ಹರಡುವ ಭಯವಿಲ್ಲದೆ ನಿರ್ಲಕ್ಷವಾಗಿ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವುದು ಕೂಡ ಎದ್ದು ಕಾಣುತ್ತಿದೆ. ಆದ್ದರಿಂದ ದಿನನಿತ್ಯ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರಗಳಲ್ಲಿನ ಸೋಂಕಿತರ ವಿವರಗಳನ್ನು ಪತ್ರಿಕಾ ಮಾಧ್ಯಮಗಳಲ್ಲಿ ಬಿತ್ತರಿಸಿ ಸಾರ್ವಜನಿಕರಿಗೆ ಮಾಹಿತಿ ತಲುಪುವಂತೆ ಮಾಡಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಲು ಆರೋಗ್ಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ
ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಮನೋಜ್ ಜೈನ್
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ