ರಾಮದುರ್ಗ: ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ದಂಪತಿ ಆತ್ಮಹತ್ಯೆ
Team Udayavani, Jan 19, 2021, 2:37 PM IST
ಬೆಳಗಾವಿ: ತಮ್ಮ ಇಬ್ಬರು ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿದ ದಂಪತಿ ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಮದುರ್ಗ ದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪತಿ ಪ್ರವೀಣ್ ಶೆಟ್ಟರ್ (37), ಪತ್ನಿ ರಾಜೇಶ್ವರಿ (27) ಮಕ್ಕಳಾದ ಅಮೃತ (8) ಹಾಗೂ ಅದ್ವಿತ್ (6) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’
ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮೈಸೂರಿಗೆ ಬಂದು ಪಕ್ಷದಿಂದ ಹೊರಗೆ ಹಾಕುತ್ತೇನೆಂದು ಕುಮಾರಸ್ವಾಮಿ ಹೇಳಿದ್ದರು: ಜಿ.ಟಿ.ದೇವೇಗೌಡ