“ಗಾಂಧೀಜಿ ಕನಸು ನನಸು ಮಾಡಬೇಕಿದೆ’

ಎಲ್ಲ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ

Team Udayavani, Apr 29, 2022, 6:38 PM IST

“ಗಾಂಧೀಜಿ ಕನಸು ನನಸು ಮಾಡಬೇಕಿದೆ’

ಬೆಳಗಾವಿ: ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧೀಜಿಯವರು ಗ್ರಾಮಗಳ ಅಭಿವೃದ್ಧಿ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಆಗಬೇಕು ಎಂಬ ಆಶಯ ಹೊಂದಿದ್ದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಗಾಂಧೀಜಿಯವರ ಕನಸನ್ನು ನನಸು ಮಾಡಬೇಕಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ನಗರದ ಕಾಂಗ್ರೆಸ್‌ ಬಾವಿ (ವೀರ ಸೌಧ) ಆವರಣದಲ್ಲಿ ಅಂತೋದಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮಗಳ ಬೆಳವಣಿಗೆಯೇ ದೇಶದ ಬೆಳವಣಿಗೆ. ಗ್ರಾಮಗಳು ಬೆಳವಣಿಗೆ ಹೊಂದಬೇಕು, ರೈತರು, ಗುಡಿ ಕೈಗಾರಿಕೆಗಳು ಹಾಗೂ ಗ್ರಾಮೀಣ ವಿಭಾಗದಲ್ಲಿ ಶಿಕ್ಷಣಕ್ಕೆ ಮಹತ್ವವನ್ನು ನೀಡಬೇಕು. ಶಿಕ್ಷಣದಿಂದಲೇ ಹಳ್ಳಿಗಳ ಅಭಿವೃದ್ಧಿ ಸಾಧ್ಯ. ಆದ್ದರಿಂದ ಎಲ್ಲ ಅಧಿಕಾರಿಗಳು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸೂಚನೆ ನೀಡಿದರು.

90 ದಿನಗಳ ಕಾಲ ವಿವಿಧ 13 ಇಲಾಖೆಗಳ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆಶಯಗಳನ್ನು ಈಡೇರಿಸುವುದು ಎಲ್ಲ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು, 75 ವರ್ಷಗಳ ಕಾಲಘಟ್ಟದಲ್ಲಿ ಹಲವಾರು
ಮಹನೀಯರು ದೇಶಕ್ಕಾಗಿ ತಮ್ಮ ಬದುಕು ಸಮರ್ಪಣೆ ಮಾಡಿದ್ದಾರೆ. ಅವರ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದರು.

ನಂತರ ಅಂತೋದಯ ಕಾರ್ಯಕ್ರಮ ಅಡಿಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್‌ ವಿತರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ ಎಚ್‌.ವಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್‌ ಘಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಾಲಿಕೆಯ ಉಪ ಆಯುಕ್ತ(ಆಡಳಿತ)ರಾದ ಭಾಗ್ಯಶ್ರೀ ಹುಗ್ಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.