ಕಾರ್ಖಾನೆ ಅಭಿವೃದ್ಧಿ ಗೆ ಎಲ್ಲರೂ ಕೈಜೋಡಿಸಿ

Team Udayavani, Jul 15, 2021, 10:46 PM IST

eಅದಸ್ಜಕಜಗ್ದಅಸದಅ್ಹಜಕಜಹ

ಗೋಕಾಕ: ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಗತಿಗಾಗಿ ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು.

ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ ಆಡಳಿತ ಮಂಡಳಿಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಹಕಾರಿ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಜೀವನಾಡಿಯಾಗಿದೆ. ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಕೊಡುಗೆ ಅಪಾರವಾಗಿದೆ. ಜೊತೆಗೆ ಕಾರ್ಮಿಕರ ಸಹಕಾರವೂ ಕೂಡ ಅಗತ್ಯವಾಗಿದೆ.

ಕಾರ್ಖಾನೆಯಲ್ಲಿ ಕಬ್ಬು ವಿಭಾಗವು ಅಷ್ಟೇನೂ ಜವಾಬ್ದಾರಿ ಅರಿಯದೇ ಇರುವುದರಿಂದ ಕಾರ್ಖಾನೆಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಿದೆ ಎಂದು ತಿಳಿಸಿದರು. ಇಳುವರಿ ಕಬ್ಬನ್ನು ಕಾರ್ಖಾನೆಗೆ ರೈತರು ಪೂರೈಕೆ ಮಾಡಬೇಕು. ಅದಕ್ಕಾಗಿಯೇ ಆಡಳಿತದಲ್ಲಿ ಬದಲಾವಣೆಗೆ ಮುಂದಾಗಿದ್ದು, ಅಧಿ ಕ ಇಳುವರಿ ಕಬ್ಬನ್ನು ಕಾರ್ಖಾನೆಗೆ ಪೂರೈಸಲು ಆಡಳಿತ ಮಂಡಳಿಯವರು ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು. ಹಿಂದಿನ ಕಹಿ ಘಟನೆಗಳು ಮರುಕಳಿಸಬಾರದು. ಕಾರ್ಖಾನೆಯ ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಹೇಳಿದರು. ಈ ಹಿಂದಿನ ಕಬ್ಬು ವಿಭಾಗದ ಅ ಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರಿಂದ ನಮಗೆ ಹಾನಿಯಾಗಿದೆ.

ಇಳುವರಿ ಕಬ್ಬಿನ ಬದಲಾಗಿ ಕಡಿಮೆ ಇಳುವರಿ ಕಬ್ಬನ್ನು ರೈತರಿಂದ ಪಡೆಯುತ್ತಿದ್ದರಿಂದ ಸಮರ್ಥವಾಗಿ ನಿಭಾಯಿಸಲು ಹೊಸ ಸಿಇಓ ಹಾಗೂ ಸಿಡಿಓ ಸಹಿತ ನಾಲ್ವರನ್ನು ನಿಯೋಜಿಸಲಾಗಿದೆ. ಯಾವುದೇ ಸಮಸ್ಯೆಗಳು ಇದ್ದರೆ ತುರ್ತಾಗಿ ಪರಿಹರಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಿದರೆ ಕಾರ್ಖಾನೆಗೆ ಒಳಿತಾಗಲಿದೆ. ಕಾರ್ಖಾನೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಲಾಭದ ಜೊತೆಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ, ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕರಾದ ಕೆಂಚನಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಲಕ್ಷ್ಮಣ ಗಣಪ್ಪಗೋಳ, ಶಿದ್ಲಿಂಗ ಕಂಬಳಿ, ಶಿವಲಿಂಗ ಪೂಜೇರಿ, ಗಿರೀಶ ಹಳ್ಳೂರ, ಮಅಹಾದೇವಪ್ಪ ಭೋವಿ, ಭೂತಪ್ಪ ಗೊಡೇರ, ಮಲ್ಲಿಕಾರ್ಜುನ ಕಬ್ಬೂರ, ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.