ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಮಾನ್ಯತೆ ನೀಡಿ

Team Udayavani, Jan 15, 2020, 1:25 PM IST

bg-tdy-1

ಬೆಳಗಾವಿ: ಗುಡಿ ಗುಂಡಾರಗಳಲ್ಲಿ ತಂದಿರಿಸಲಾಗಿರುವ ಕಲ್ಪಿತ ದೇವರುಗಳ ಬದಲಾಗಿ, ಬಸವಣ್ಣನವರ ನೇತೃತ್ವದಲ್ಲಿ ಅಗೋಚರ ದೇವರನ್ನೇ ತಮ್ಮ ಬಳಿ ಕರೆಸಿಕೊಂಡು ತಾವೇ ದೇವ ಮಾನವರಾದ ಶೋಷಿತ ಸಮುದಾಯಗಳ ಅಗಣಿತ ಮಹಾನ್‌ ಶರಣರು ಕಟ್ಟಿಕೊಟ್ಟಿರುವ ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ಸಿಗಬೇಕು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಆಗ್ರಹಿಸಿದರು.

ಬಸವಭೀಮ ಸೇನೆಯ ವತಿಯಿಂದ ನಗರದ ಶ್ರೀ ಬಸವೇಶ್ವರ ಉದ್ಯಾನದಲ್ಲಿಯ ಬಸವಣ್ಣನವರ ಪ್ರತಿಮೆಯ ಬಳಿ ಮಂಗಳವಾರ ಆಯೋಜಿಸಲಾಗಿದ್ದ ಲಿಂಗಾಯತ ಧರ್ಮದ 866 ನೇ ಧರ್ಮ ಸಂಸ್ಥಾ‌ಪನಾ ದಿನ ಹಾಗೂ ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ದೊರಕಿಸಿಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 1.96 ಲಕ್ಷ ಪತ್ರ ಬರೆಯುವ ಪತ್ರ ಚಳವಳಿಗೆಚಾಲನೆ ನೀಡಿ ಮಾತನಾಡಿದ ಅವರು, ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ದೊರೆಯಬೇಕು. ನಾವುಮತ್ತೆ ಕಾಯಕ ಜೀವಿಗಳೊಂದಿಗೆ ನಮ್ಮ ಧರ್ಮವನ್ನು ಸಂಭ್ರಮಿಸಬೇಕು ಎಂದರು.

ಧರ್ಮಗುರು ಬಸವಣ್ಣನವರು 1155 ರಲ್ಲಿಯೇ ಇಷ್ಟಲಿಂಗವನ್ನು ಗುರುವಾಗಿಸಿ, ಅವೈದಿಕ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದಾರೆ. ಲಿಂಗಾಯತ ಧರ್ಮದ ಸ್ಥಾಪನೆಯಾಗಿ ಇಂದಿಗೆ 866 ವರ್ಷಗಳಾಗಿವೆ. ಲಿಂಗಾಯತ ಹೊಸ ಧರ್ಮ ಅಲ್ಲ ಎಂಬುದನ್ನು ಧರ್ಮ ವಿರೋಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ನ್ಯಾಯವಾದಿ ಚನ್ನಬಸಪ್ಪಬಾಗೇವಾಡಿ ಮಾತನಾಡಿ, ಬಸವಣ್ಣವರು ಸ್ಥಾಪಿಸಿರುವ ಲಿಂಗಾಯತ ಧರ್ಮವು ಸಮಾನತೆ ಸಾರುವ ಮಾನವೀಯ ಧರ್ಮ. ಈ ಸಮಾನತೆಯ ಧರ್ಮಕ್ಕೆ ಸಂವಿಧಾನದ ಮಾನ್ಯತೆ ಕೊಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವ ಸಮಾಜದ ಋಣ ತೀರಿಸಬೇಕು ಎಂದರು.

ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಬಿ.ಜಿ.ಕುಂಬಾರ ಮಾತನಾಡಿ, ಧರ್ಮಗಳಿಂದ ದೂರ ತಳ್ಳಲ್ಪಟ್ಟಿದ್ದ ಶೋಷಿತ ಸಮುದಾಯಗಳ ಕಾಯಕ ಜೀವಿಗಳನ್ನು ಬಸವಣ್ಣನವರು ಒಂದುಗೂಡಿಸಿ ಕಟ್ಟಿಕೊಟ್ಟಿರುವ ಲಿಂಗಾಯತ ಧರ್ಮವು ಕಾಯಕ ಜೀವಿಗಳ ಧರ್ಮವಾಗಿದೆ. ಲಿಂಗಾಯತ ಧರ್ಮಕ್ಕೆ ಸಂವಿಧಾನದ ಮಾನ್ಯತೆ ನೀಡುವ ಮೂಲಕ ಅದನ್ನು ವಿಶ್ವ ಧರ್ಮವನ್ನಾಗಿಸಬೇಕು ಎಂದು ಹೇಳಿದರು.

ಪರಿಶಿಷ್ಟ ಜಾತಿ-ಜನಾಂಗ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರಾಜು ಕೋಲ್ಕಾರ ಮಾತನಾಡಿದರು. ಬಿ.ಎ.ಪಾಟೀಲ, ಬಿ.ಡಿ.ಪಾಟೀಲ, ಅಪ್ಪಾಸಾಹೇಬ ದೇಸಾಯಿ, ಅಶೋಕ ಬೆಂಡಿಗೇರಿ, ಮೋಹನ ಗುಂಡೂÉರ, ಸಿದ್ದರಾಮ ಸಾವಳಗಿ, ಬಸವರಾಜಪಾಟೀಲ, ಅಡಿವೆಪ್ಪ ಕುಂದರಗಿ, ಜಿ.ಎಂ. ಬಳ್ಳಾರಿ, ಬಿ.ಸಿ.ಹುಮನಾಬಾದಿಮಠ, ಆಕಾಶ ಹಲಗೇಕರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.