ರೈತರಿಗೆ ಯೋಗ್ಯ ದರ ಕೊಡಿ: ಸತೀಶ


Team Udayavani, May 20, 2019, 11:57 AM IST

bel-1

ಬೆಳಗಾವಿ: ಬೆಳಗಾವಿ ನೂತನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತರಕಾರಿ ತೆಗೆದುಕೊಂಡು ಬರುವ ಸುತ್ತಮುತ್ತಲಿನ ಭಾಗಗಳ ರೈತರಿಗೆ ಯೋಗ್ಯ ಬೆಲೆ ನೀಡುವ ಮೂಲಕ ವ್ಯಾಪಾರಸ್ಥರು ಸಹಕರಿಸಬೇಕು ಎಂದು ಅರಣ್ಯ ಹಾಗೂ ಪರಿಸರ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಸಗಟು ತರಕಾರಿ ವ್ಯಾಪಾರ ಮಳಿಗೆಗಳನ್ನು ರವಿವಾರ ವೀಕ್ಷಿಸಿ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರೊಂದಿಗೆ ಸಮಾಲೋಚನೆ ನಡೆಸಿ, ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ರೈತರು ನಿತ್ಯ ತರಕಾರಿ ಈ ಮಾರುಕಟ್ಟೆಗೆ ತೆಗೆದುಕೊಂಡು ಬರುತ್ತಾರೆ. ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ವ್ಯಾಪಾರಸ್ಥರ ಮೇಲಿದೆ. ಬೆಳಗಾವಿ ಸುತ್ತಲಿನ ಅನೇಕ ಭಾಗಗಳಲ್ಲಿ ತರಕಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ನಿತ್ಯ ತರಕಾರಿ ಈ ಮಾರುಕಟ್ಟೆಗೆ ಬರುತ್ತದೆ. ಹೀಗಾಗಿ ಯೋಗ್ಯ ದರ ರೈತರಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ವ್ಯಾಪಾರ- ವಹಿವಾಟು ನಡೆಸಬೇಕು ಎಂದರು.

ಸಮಸ್ಯೆಯಾಗದಂತೆ ನಿಗಾವಹಿಸಿ: ಈಗಾಗಲೇ 132 ಮಳಿಗೆಗಳನ್ನು ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗಿದೆ. ಕೆಲವು ತಿಂಗಳ ಹಿಂದೆ ಇದನ್ನು ಉದ್ಘಾಟಿಸಲಾಗಿದ್ದು, ಸದ್ಯ ಎಲ್ಲ ಅಂಗಡಿ ಟೆಂಡರ್‌ ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಲಾಗಿದೆ. ಆರು ತಿಂಗಳಲ್ಲಿ ಇನ್ನೂ 60 ಅಂಗಡಿ ನಿರ್ಮಾಣ ಕಾರ್ಯ ಮುಗಿಯಲಿದ್ದು, ಅಲ್ಲಿಯೂ ಇನ್ನುಳಿದ ವ್ಯಾಪಾರಸ್ಥರು ವಹಿವಾಟು ನಡೆಸಬೇಕು. ಯಾವುದೇ ಸಮಸ್ಯೆಯಾಗದಂತೆ ಎಪಿಎಂಸಿ ಅಧಿಕಾರಿಗಳು ನಿಗಾವಹಿಸಬೇಕು ಎಂದು ಹೇಳಿದರು.

ಕೃಷಿ ಮಾರುಕಟ್ಟೆ ಜಂಟಿ ಕಾರ್ಯದರ್ಶಿ ಹಾಗೂ ಬಾಜಿ ಮಾರ್ಕೆಟ್ ಅಧ್ಯಕ್ಷರು ಸೇರಿ ವ್ಯಾಪಾರಿಗಳ ಸಮಸ್ಯೆ ಬಗೆಹರಿಸಿ ನಮ್ಮ ಹತ್ತಿರ ಇನ್ನೊಮ್ಮೆ ಬರದಂತೆ ನೋಡಿಕೊಳ್ಳಿ. ವ್ಯಾಪಾರಿಗಳು ತಮ್ಮ ಸಮಸ್ಯೆ ಮಾರುಕಟ್ಟೆ ಅಧಿಕಾರಿಗಳೊಂಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ. ನಾನು ಸಹ ಸದಾ ವ್ಯಾಪಾರಸ್ಥರೊಂದಿಗೆ ಇರುತ್ತೇನೆ ಎಂದು ವ್ಯಾಪಾರಸ್ಥರಿಗೆ ಭರವಸೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಗುರುಪ್ರಸಾದ ಮಾತನಾಡಿ, ಎಲ್ಲ ವ್ಯಾಪಾರಿಗಳನ್ನು ಒಂದೇ ದೃಷ್ಟಿಯಿಂದ ನೋಡಲಾಗುತ್ತಿದೆ. ಬೆಳಗಾವಿಯಲ್ಲಿ ಸಗಟು ತರಕಾರಿ ಮಾರುಕಟ್ಟೆಯನ್ನು ವಿಶಾಲ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದ್ದು, ಎಲ್ಲರಿಗೂ ಅನುಕೂಲಕರ ವಾತಾವರಣ ನಿರ್ಮಿಸಲಾಗಿದೆ. ದೇಶದಲ್ಲಿಯೇ ಮಾದರಿ ಮಾರುಕಟ್ಟೆಯನ್ನಾಗಿಸಲು ಎಲ್ಲರೂ ಸಹಕಾರ ನೀಡಬೇಕು. ವ್ಯಾಪಾರಸ್ಥರು ಅನೇಕ ಬೇಡಿಕೆಗಳನ್ನಿಟ್ಟಿದ್ದು, ಇವುಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ದಂಡು ಮಂಡಳಿ ಪ್ರದೇಶದಲ್ಲಿ ತರಕಾರಿ ಮಾರುಕಟ್ಟೆ ನಡೆಸುತ್ತಿದ್ದ ಕೆಲವು ವ್ಯಾಪಾರಸ್ಥರು ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಳಲು ತೋಡಿಕೊಂಡರು. ಅನೇಕ ವರ್ಷಗಳಿಂದ ಮಾರುಕಟ್ಟೆ ನಡೆಸಿಕೊಂಡು ಬರಲಾಗುತ್ತಿದ್ದು, ಏಕಾಏಕಿ ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ 102 ಅಂಗಡಿ ಹಂಚಿಕೆ ಮಾಡಿದ್ದಾರೆ. ಆದರೆ ನಾವು ಅತಂತ್ರವಾಗಿದ್ದೇವೆ. 240 ಮಂದಿ ವ್ಯಾಪಾರಸ್ಥರಿಗೆ ಅಂಗಡಿ ನೀಡಬೇಕು. ಅದೇ ರೀತಿ ಪರವಾನಗಿ ಪತ್ರವನ್ನು ಎಪಿಎಂಸಿಯಿಂದ ನೀಡಬೇಕು. ಶಾಶ್ವತವಾಗಿ ವ್ಯಾಪಾರ ವಹಿವಾಟು ಮಾಡಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಎಪಿಎಂಸಿ ಅಧ್ಯಕ್ಷ ಆನಂದ ಪಾಟೀಲ, ಉಪಾಧ್ಯಕ್ಷ ಸುಧೀರ ಗಡ್ಡಿ, ಎಸಿಪಿ ಎನ್‌.ವಿ. ಭರಮಣಿ, ಸಗಟು ತರಕಾರಿ ಮಾರುಕಟ್ಟೆ ಅಸೋಸಿಯೇಷನ್‌ ಅಧ್ಯಕ್ಷ ಭಾವು ಶಹಾಪುರಕರ, ಸದಾನಂದ ಹುಂಕರಿಪಾಟೀಲ, ಮಹೇಶ ಕುಗಜಿ, ಆರ್‌.ಎಸ್‌. ಪಾಟೀಲ, ಬಸನಗೌಡ ಪಾಟೀಲ, ಸತೀಶ ಪಾಟೀಲ, ಎ.ಕೆ. ಬಾಗವಾನ, ದಿವಾಕರ ಪಾಟೀಲ, ವಿಶ್ವನಾಥ ಪಾಟೀಲ, ಅನಂತರಾವ್‌ ಸೇರಿದಂತೆ ಇತರರು ಇದ್ದರು.

ಸಚಿವರಿಗೆ ವ್ಯಾಪಾರಸ್ಥರಿಂದ ಸನ್ಮಾನ

ಅನೇಕ ವರ್ಷಗಳಿಂದ ಹೊಸ ತರಕಾರಿ ಮಾರುಕಟ್ಟೆಗಾಗಿ ಇದ್ದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಆರಂಭವಾದ ನೂತನ ಸಗಟು ತರಕಾರಿ ಮಾರುಕಟ್ಟೆಯಲ್ಲಿಯ ವ್ಯಾಪಾರಸ್ಥರು ರವಿವಾರ ಸಚಿವರನ್ನು ಸನ್ಮಾನಿಸಿದರು. ಮಾರುಕಟ್ಟೆಗೆ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ವ್ಯಾಪಾರಸ್ಥರು ಶಾಲು ಹೊದಿಸಿ ಸತ್ಕರಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.