ಶಾಲಾ ವಾಹನಕ್ಕೆ ಸರಕಾರಿ ಬಸ್ ಢಿಕ್ಕಿ: 16 ಮಂದಿಗೆ ಗಾಯ
ನಾಲ್ವರ ಸ್ಥಿತಿ ಗಂಭೀರ
Team Udayavani, Jun 9, 2022, 12:01 PM IST
ಮೂಡಲಗಿ: ಪಟ್ಟಣದ ಖಾಸಗಿ ಕಾಲೇಜಿನ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಢಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುರುವಾರ ಬೆಳ್ಳಗೆ ಎಂದಿನಂತೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಜತ-ಜಾಂಬೋಟಿ ರಾಜ್ಯ ಹೆದ್ದಾರಿಯ ಗುರ್ಲಾಪುರ ಹತ್ತಿರ ಹಾರೂಗೇರಿ ಕ್ರಾಸ್ ಬಳಿ ಬಸ್ ನಿಂತ್ತಿತ್ತು. ಅಥಣಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸರ್ಕಾರಿ ಬಸ್ಸಿನಲ್ಲಿದ್ದ 11 ಜನರಿಗೆ ಹಾಗೂ ಕಾಲೇಜಿನ ಬಸ್ಸಿನಲ್ಲಿದ್ದ 5 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೂಡಲಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡ ನಾಲ್ವರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರಿ ಬಸ್ ಢಿಕ್ಕಿಯಾದ ರಭಸಕ್ಕೆ ಕಾಲೇಜು ಬಸ್ ಪಕ್ಕದ ಗದ್ದೆಗೆ ನುಗ್ಗಿದ್ದು, ಬಸ್ಸಿನಲ್ಲಿ ಸುಮಾರು 40 ವಿದ್ಯಾರ್ಥಿಗಳು ಅದೃಷ್ಠವಶ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ: 3 ಅಂಗಡಿಗಳು ಬೆಂಕಿಗಾಹುತಿ
ಘಟನಾ ಸ್ಥಳಕ್ಕೆ ಮೂಡಲಗಿ ಪಿಎಸ್ಐ ಎಚ್ ವೈ ಬಾಲದಂಡಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ