ಬೆಳಗಾವಿ:ಗ್ರಾಮ ಪಂಚಾಯತ್‌ ಸದಸ್ಯನ ಬರ್ಬರ ಹತ್ಯೆ 

Team Udayavani, Dec 14, 2018, 3:04 PM IST

ಬೆಳಗಾವಿ: ಜಿಲ್ಲೆಯ ಹೊಸವಂಟಮೂರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. 

ಬನ್ನೆಪ್ಪ ಪಾಟೀಲ್‌ ಎನ್ನುವ ಪಂಚಾಯತ್‌ ಸದಸ್ಯ ಬರ್ಬರವಾಗಿ ಹತ್ಯೆಯಾಗಿದ್ದು, ಪಂಚಾಯತ್‌ ಅಧ್ಯಕ್ಷ ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಅಧ್ಯಕ್ಷ ಶಿವಾಜಿ ವಣ್ಣೂರ ದ್ವೇಷದಲ್ಲಿ ಬೆಂಬಲಿಗರಿಂದ ಕೃತ್ಯ ಮಾಡಿಸಿದ್ದಾನೆ ಎಂದು ಆರೋಪ ಮಾಡಲಾಗಿದೆ.

ಶಿವಾಜಿ ವಿರುದ್ಧ ಗ್ರಾಮ ಪಂಚಾಯತ್‌ನ ಕೆಲ  ಸದಸ್ಯರು ಕಳೆದ ಕೆಲ ದಿನಗಳಿಂದ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದರು. 

ಬನ್ನೆಪ್ಪ  ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಶಿವಾಜಿ ಪ್ರಶ್ನಿಸಿದ್ದು ತೀರ್ಪು ಹೊರ ಬರುವ ಮುನ್ನವೇ ಹತ್ಯೆ ನಡೆದಿದೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಪ್ರತಿನಿಧಿಸುತ್ತಿರುವ ಯುಮಕನ ಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಕಾಕಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ