ಜೀವಕ್ಕೇ ಎರವಾಯ್ತು ಹಾರ್ಮೋನ್‌ ಸಮಸ್ಯೆ

Team Udayavani, Aug 18, 2019, 1:07 PM IST

bg-tdy-3

ಬೆಳಗಾವಿ: ವಯಸ್ಸು ಐದಾಗಿದ್ದರೂ ಅಸ್ವಾಭಾವಿಕವಾಗಿ ಹಾರ್ಮೋನ್‌ ಪ್ರಮಾಣ ಏರುತ್ತ ತೂಕ ಹೆಚ್ಚುವ ಸಮಸ್ಯೆ ಹೊಂದಿದ್ದ ಬಾಲಕ ಸಂಕೇತ ಮೋರಕರ ಚಿಕಿತ್ಸೆ ಫಲಿಸದೇ ಶನಿವಾರ ಕೊನೆಯುಸಿರೆಳೆದಿದ್ದಾನೆ.

ಮೊದಲಿನಂತೆ ಆಹಾರ ಸೇವನೆಯಿದ್ದರೂ ಆಡ್ರೆನಾಲಿನ್‌ ಗ್ರಂಥಿಯಲ್ಲಿ ಕಾರ್ಟಿಸೋಲ್ ಪ್ರಮಾಣ ಜಾಸ್ತಿಯಾಗಿ ಈತನ ತೂಕ ದಿನಕ್ಕೆ 300 ಗ್ರಾಂ ಹೆಚ್ಚುತ್ತಿತ್ತು.

ತಾಲೂಕಿನ ಸುಳೇಭಾವಿ ಗ್ರಾಮದ ಸಂಕೇತ ಕಾಶೀನಾಥ ಮೋರಕರ ಎಂಬ ಬಾಲಕನಿಗೆ ಈ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯ ಅಗತ್ಯವೂ ಇತ್ತು. ಇನ್ನೆನೂ ಕೆಲವು ದಿನಗಳಲ್ಲಿ ಶಸ್ತ್ರ ಚಿಕಿತ್ಸೆಗೆ ತಯಾರಿ ಮಾಡಿಕೊಂಡಿದ್ದ ಪಾಲಕರಿಗೆ ಮಗನ ಸಾವು ಆಘಾತ ತಂದಿಟ್ಟಿದೆ. ಗುರುವಾರ ರಾತ್ರಿ ಏಕಾಏಕಿ ಬಾಲಕ ಸಂಕೇತನಿಗೆ ಫಿಟ್ಸ್‌ ಬಂದಿದೆ. ಕೂಡಲೇ ಭಯಭೀತರಾದ ಪಾಲಕರು ಸಂಕೇತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೆದುಳಿಗೆ ರಕ್ತ ಸಂಚಾರ ಆಗುವ ನರದಲ್ಲಿ ಸಮಸ್ಯೆ ಕಂಡು ಬಂದಿದ್ದರಿಂದ ಹೃದಯ ಬಡಿತವೂ ಇಳಿಕೆಯಾಗಿದೆ. ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರೂ ಫಲಿಸದೇ ಬಾಲಕ ಸಂಕೇತ ಸಾವನ್ನಪ್ಪಿದ್ದಾನೆ.

ಬೆಳಗಾವಿಯ ಖಾಸಗಿ ವೈದ್ಯರ ಬಳಿ ಬಾಲಕ ಸಂಕೇತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕನ ಆರೋಗ್ಯ ಸಮಸ್ಯೆ ಬಗ್ಗೆ ಉದಯವಾಣಿಯಲ್ಲಿ ಆಗಸ್ಟ್‌ 2ರಂದು, ಅಡ್ರೆನಾಲಿನ್‌ ಕಾಟ: ತೂಕ ನಾಗಾಲೋಟ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ತ್ವರಿತವಾಗಿ ಬಾಲಕನಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಿರುವ ಬಗ್ಗೆ ವರದಿ ಎಚ್ಚರಿಸಿತ್ತು. ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಶಸ್ತ್ರಚಿಕಿತ್ಸೆಗೆ ಸಿದ್ಧ ಮಾಡಿಕೊಂಡಿದ್ದರೂ ವಿಧಿ ಕೈ ಹಿಡಿಯಲಿಲ್ಲ. ಮಗುವನ್ನು ಕಳೆದುಕೊಂಡಿರುವ ತಂದೆ-ತಾಯಿ ದುಃಖ ಶಮನವಾಗದಂಥದು. ಶನಿವಾರ ಬೆಳಗ್ಗೆ ವಿಧಿ-ವಿಧಾನದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಹಾರ್ಮೋನ್‌ಗಳ ಪ್ರಮಾಣ ದಿನ ದಿನಕ್ಕೂ ಹೆಚ್ಚಾಗುತ್ತ ಹೋದಂತೆ ಮಗುವಿನ ದೇಹದ ಪ್ರತಿ ಅಂಗದ ಮೇಲೂ ಪರಿಣಾಮ ಬೀರುತ್ತದೆ. ರಕ್ತ ನಾಳಗಳು ಬ್ಲಾಕ್‌ ಆಗುವ ಸಾಧ್ಯತೆಯೂ ಹೆಚ್ಚು. ಹೃದಯ, ಮೆದುಳಿನ ರಕ್ತನಾಳಗಳು ಬ್ಲಾಕ್‌ ಆಗುತ್ತವೆ. ಇದೇ ಕಾರಣದಿಂದಲೇ ಬಾಲಕ ಸಂಕೇತನ ವಯಸ್ಸು ಕಡಿಮೆ ಇದ್ದಾಗ ಹಾರ್ಮೋನ್‌ ಗ್ರಂಥಿಗಳ ಪ್ರಮಾಣ ಹೆಚ್ಚಾಗಿ ಜೀವಕ್ಕೆ ಎರವಾಗಿದೆ.•ಡಾ| ವಿಕ್ರಾಂತ ಘಟನಟ್ಟಿ, ವೈದ್ಯರು

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.