ಕೋವಿಡ್ ಪರಿಹಾರದ ವ್ಯಾಪ್ತಿ ವಿಸ್ತರಣೆಗೆ ಹೆಬ್ಟಾಳಕರ ಮನವಿ


Team Udayavani, May 21, 2020, 4:23 AM IST

BG-TDY-1

ಬೆಳಗಾವಿ: ಕೋವಿಡ್  ಸಂಕಷ್ಟದಲ್ಲಿರುವ ಕೆಲವು ವರ್ಗಗಳು ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದು ಅಂತಹವರಿಗೂ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಕೆಲವು ಪರಿಹಾರ ಪ್ಯಾಕೇಜ್‌ಗಳನ್ನು ನೀಡಲಾಗಿದೆ. ಆದರೆ ಈ ಪ್ಯಾಕೇಜ್‌ ಮತ್ತು ವಿಮಾ ಸೌಲಭ್ಯದಿಂದ ಕೆಲವರು ಹೊರಗುಳಿದಿದ್ದಾರೆ. ಅಂತವರನ್ನು ಗುರುತಿಸಿ ನೆರವಿಗೆ ಬರುವಂತೆ ಮನವಿ ಮಾಡಿದರು.

ಕೋವಿಡ್‌ -19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೋವಿಡ್ ಯೋಧರು ಎಂದು ಪರಿಗಣಿಸಿ ವೈದ್ಯಕೀಯ ವಿಮಾ ಯೋಜನೆಯನ್ನು ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್‌ ಅದಿಕಾರಿಗಳು, ಸಿಬ್ಬಂದಿ, ಹೋಮ್‌ ಗಾರ್ಡ್ಸ್‌, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಅವರ ಸಿಬ್ಬಂದಿ, ಬಂದಿಖಾನೆ ಸಿಬ್ಬಂದಿ, ಪೌರಕಾರ್ಮಿಕರು, ಸ್ಯಾನಿಟೆ„ಸರ್‌ ಕೆಲಸಗಾರರು ಮತ್ತು ಅವರಿಗೆ ಸಂಬಂಧಿಸಿದ ವಾಹನ ಚಾಲಕರು, ಲೋಡರ್‌ಗಳು ರೋಗದಿಂದ ಮƒತಪಟ್ಟಲ್ಲಿ 30 ಲಕ್ಷ ರೂ. ಪರಿಹಾರ ಒದಗಿಸುವ ಆದೇಶ ಹೊರಡಿಸಿರುವುದು ಶ್ಲಾಘನೀಯ ಎಂದು ಹೆಬ್ಟಾಳಕರ ಹೇಳಿದರು.

ಇದೇ ರೀತಿ ಕೋವಿಡ್‌ -19 ಕಾರ್ಯಾಚರಣೆಯಲ್ಲಿ ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯಿತಿ ರಾಜ್‌ ಇಲಾಖೆಯ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಗ್ರಾಮ ಮಟ್ಟದ ಕಾರ್ಯಪಡೆಯ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿಗಳಾದ ತಹಸಿಲ್ದಾರರು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಶಿಕ್ಷಣ ಇಲಾಖೆಯ ಶಿಕ್ಷಕ ವೃಂದದವರು ಮತ್ತಿತರ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ವಿದ್ಯುತ್‌ ಪ್ರಸರಣ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರ ಅನೇಕ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರಿಗೂ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ವೈದ್ಯಕೀಯ ವಿಮೆ ಯೋಜನೆಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ 6 ಲಕ್ಷ ಗಾಮೆಂìಟ್ಸ್‌ ನೌಕರರು, 3 ಲಕ್ಷ ಬೀಡಿ ಕಾರ್ಮಿಕರು, 25 ಲಕ್ಷ ಕೃಷಿ ಕೂಲಿಕಾರರು, 6 ಲಕ್ಷ ಹೆ„ನುಗಾರಿಕೆ ಕೆಲಸಗಾರರು, 5 ಲಕ್ಷ ಕಟ್ಟಡ ಕಾರ್ಮಿಕರು, 4 ಲಕ್ಷ ಬ್ಯೂಟಿ ಪಾರ್ಲರ್‌ ಸಿಬ್ಬಂದಿ, 8 ಲಕ್ಷ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿ ಸುಮಾರು 60 ಲಕ್ಷ ಮಹಿಳಾ ಉದ್ಯೋಗಿಗಳಿದ್ದು ಲಾಕ್‌ ಡೌನ್‌ ನಿಂದಾಗಿ ಇವರ ಉದ್ಯೋಗಕ್ಕೆ ತಡೆಬಿದ್ದಿದೆ. ಕಮ್ಮಾರರು ಹಾಗು ಬಡಿಗೇರ ಉದ್ಯೋಗಿಗಳ ಸಹ ಬದುಕು ಬೀದಿಗೆ ಬಿದ್ದಿದೆ. ಇವರಿಗೆ ವಿಶೇಷ ಭತ್ಯೆಯ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಹಲವಾರು ರೀತಿಯ ಸ್ವಯಂ ಉದ್ಯೋಗಿಗಳೂ ಲಾಕ್‌ ಡೌನ್‌ ನಿಂದಾಗಿ ಕಂಗೆಟ್ಟಿದ್ದಾರೆ. ಮಾಡಿದ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ. ಸರಕಾರ ತಕ್ಷಣ ಇಂತವರ ನೆರವಿಗೆ ಬಂದು ಧನಸಹಾಯ ನೀಡಬೇಕು ಎಂದು ಹೆಬ್ಟಾಳಕ ಮನವಿ ಮಾಡಿದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.