ಹೈದರಾಬಾದ್ ಪಾಲಿಕೆ ಫಲಿತಾಂಶ ಬಿಜೆಪಿಯ ವಿಶ್ವಾಸವನ್ನು ಹೆಚ್ಚಿಸಿದೆ: ಸಿ.ಟಿ ರವಿ
Team Udayavani, Dec 4, 2020, 8:19 PM IST
ಬೆಳಗಾವಿ: ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಯ ವಿಶ್ವಾಸ ಹೆಚ್ಚಿದೆ. ಇದರೊಂದಿಗೆ ಭಾಗ್ಯ ನಗರವಾಗುವತ್ತ ದಿಟ್ಡ ಹೆಜ್ಜೆ ಇಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈದರಾಬಾದ್ ಪಾಲಿಕೆಯಲ್ಲಿ ಬಿಜೆಪಿ ಸ್ಥಾನ 10 ಪಟ್ಟು ಹೆಚ್ಚಾಗಿದೆ. ಈ ಫಲಿತಾಂಶ ಮುಂದೆ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸುಳಿವು ನೀಡಿದೆ ಎಂದರು.
ಹೈದರಾಬಾದ್ ಪಾಲಿಕೆಯ ಚುನಾವಣೆಯಲ್ಲಿ ಕಠಿಣ ಶ್ರಮಪಟ್ಟ ಕಾರ್ಯಕರ್ತರು ಯಶಸ್ವಿ ಸೀಮೋಲ್ಲಂಘನೆ ಮಾಡಿದ್ದಾರೆ. ಇದರೊಂದಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಸಾಧನೆ ಮತ್ತಷ್ಟು ವಿಸ್ತಾರಗೊಳ್ಳುವ ಅವಕಾಶ ಹೆಚ್ಚಿದೆ ಎಂದು ಸಿ ಟಿ ರವಿ ಹೇಳಿದರು.
ರಾಜ್ಯದ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಕಿತ್ತಾಟ ಆರಂಭವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರ,ಇದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ: ಅರುಣ್ ಸಿಂಗ್
ಇದನ್ನೂ ಓದಿ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444