ಕೊಂಡ ವಸ್ತುವಿನಲ್ಲಿ ಲೋಪವಿದ್ದರೆ ದೂರು ನೀಡಿ

ದೂರು ದಾಖಲಿಸಿದ 90 ದಿನದೊಳಗಾಗಿ ಪ್ರಕರಣ ಇತ್ಯರ್ಥ

Team Udayavani, Mar 30, 2022, 5:43 PM IST

consumer

ಬೆಳಗಾವಿ: ಗ್ರಾಹಕರು ವಸ್ತುಗಳನ್ನು ಪಡೆದುಕೊಂಡು ಅವುಗಳಲ್ಲಿ ಏನಾದರೂ ಲೋಪದೋಷಗಳು ಕಂಡುಬಂದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜಗಳ ಪರಿಹಾರ ವೇದಿಕೆಗೆ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಹಕ್ಕುಗಳು ಮತ್ತು ಅಗತ್ಯತೆಗಳ ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು, ಮಾರುಕಟ್ಟೆಯಲ್ಲಿನ ದುರುಪಯೋಗದ ಬಗ್ಗೆ ಅರಿವು ಮೂಡಿಸಲು ವಿಶ್ವ ಗ್ರಾಹಕರ ದಿನ ಆಚರಿಸಲಾಗುತ್ತಿದೆ ಎಂದರು.

ದೇಶದಲ್ಲಿ ಡಿಜಿಟಲ್‌ ಯುಗ ಪ್ರಾರಂಭವಾಗಿದ್ದು, ಪ್ರತಿನಿತ್ಯ ಸುಮಾರು 14 ಕೋಟಿಯಷ್ಟು ವ್ಯವಹಾರ ಡಿಜಿಟಲ್‌ ಹಣಕಾಸು ಮೂಲಕ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದ ಅವರು, ಪ್ರಸ್ತುತ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಿವಿಧ ಡಿಜಿಟಲ್‌ ವ್ಯವಹಾರಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ರಾಚಪ್ಪ ತಾಳಿಕೋಟಿ ಅವರು ಗ್ರಾಹಕರಿಗೆ ಉತ್ತಮ ಅವಕಾಶವಾಗಿರುವ ಗ್ರಾಹಕ ಸಂರಕ್ಷಣಾ ಕಾಯ್ದೆ ಬಗ್ಗೆ ತಿಳಿದುಕೊಂಡು ಕಡಿಮೆ ವೆಚ್ಚದಲ್ಲಿ ಪರಿಹಾರ ಕಂಡುಕೊಳ್ಳಬಹುದು. ಈ ಕಾಯ್ದೆಯಲ್ಲಿ ಸೆಕ್ಷನ್‌ 72ರ ಪ್ರಕಾರ ಆದೇಶ ಪಾಲಿಸದಿದ್ದಲ್ಲಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಗ್ರಾಹಕರ ಸಂರಕ್ಷಣ ಕಾಯ್ದೆ ಕುರಿತು ಉಪನ್ಯಾಸ ನೀಡಿದ ಬೆಳಗಾವಿ ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ ಎನ್‌.ಆರ್‌. ಲಾತೂರ ಪರಿಷ್ಕೃತ 2019ನೇ ಸಾಲಿನ ನೂತನ ಗ್ರಾಹಕ ಸಂರಕ್ಷಣೆ ಹಾಗೂ ಅದರಲ್ಲಿರುವ ಬದಲಾವಣೆಗಳ ಬಗ್ಗೆ ವಿವರಿಸಿದರು. ಹಣ ನೀಡಿ ಸೇವೆಗಳನ್ನು ಪಡೆದುಕೊಂಡ ಗ್ರಾಹಕರು ಯಾವುದಾದರೂ ಕುಂದುಕೊರತೆಗಳು ಕಂಡುಬಂದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರನ್ನು ಸಲ್ಲಿಸಬಹುದು. ಕಡಿಮೆ ಖರ್ಚಿನಲ್ಲಿ ನ್ಯಾಯವಾದಿಗಳ ಸಹಾಯವಿಲ್ಲದೆ ಕಡಿಮೆ ಅವಧಿಯಲ್ಲಿ ಗ್ರಾಹಕರೇ ನ್ಯಾಯವನ್ನು ಪಡೆಯಬಹುದಾಗಿದೆ ಎಂದರು.

ಐಒಸಿಎಲ್‌ಪಿಜಿ ಮುಖ್ಯ ವ್ಯವಸ್ಥಾಪಕ ಎಂ.ಎಸ್‌. ಜೋಶಿ ಅವರು ಎಲ್‌ಪಿಜಿ ಸುರಕ್ಷತೆ ಕುರಿತು ಉಪನ್ಯಾಸ ನೀಡಿ, ಎಲ್‌ಪಿಜಿ ಗ್ಯಾಸ್‌ ಬಳಕೆ, ಅವುಗಳ ತೂಕ, ಆನ್‌ಲೈನ್‌ ಬುಕಿಂಗ್‌ ಮತ್ತು ಡಿಜಿಟಲ್‌ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸಂಜೀವ ಕುಲಕರ್ಣಿ ಮಾತನಾಡಿ, ಗ್ರಾಹಕರು ಸರಕು ಖರೀದಿ, ಸೇವೆಗಳ ಗುಣಮಟ್ಟದ ನ್ಯೂನ್ಯತೆಗಳು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ, ರಾಜ್ಯಮಟ್ಟದ ಗ್ರಾಹಕರ ವ್ಯಾಜ್ಯಗಳ ಆಯೋಗ ಮತ್ತು ರಾಷ್ಟ್ರ ಮಟ್ಟದ ಗ್ರಾಹಕರ ವ್ಯಾಜ್ಯಗಳ ಆಯೋಗಗಳಲ್ಲಿ ದೂರುಗಳ ದಾಖಲಿಸುವ ಬಗ್ಗೆ ವಿವರಿಸಿ, ಗ್ರಾಹಕರು ದೂರು ದಾಖಲಿಸಿದ 90 ದಿವಸದೊಳಗಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ವಿ ಕೊಡ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸುನಂದಾ ಕಾದೊಳ್ಳಿಮಠ, ಬಿ.ಯು. ಗೀತಾ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಸ್‌. ಎಸ್‌. ಉಪ್ಪಾರ ಇದ್ದರು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಅಶೋಕ ಗುರಾಣಿ ವಂದಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಜೆ.ಸಿ. ಅಷ್ಟಗಿಮಠ ನಿರೂಪಿಸಿದರು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.