ಕಾಗವಾಡ-ಅಥಣಿಯಲ್ಲಿ ಅಕ್ರಮ ಮರಳುಗಾರಿಕೆ

•ಅಧಿಕಾರಿಗಳ ಜಾಣ ಕುರುಡು: ಜನರ ಆರೋಪ•ಮಹಾರಾಷ್ಟ್ರಕ್ಕೂ ಹೋಗುತ್ತಿದೆ ಕಪ್ಪು ಬಂಗಾರ

Team Udayavani, Jul 27, 2019, 1:50 PM IST

bg-tdy-n4

ಅಥಣಿ: ಕೊಕಟನೂರ ಭಾಗದಲ್ಲಿ ಸಂಗ್ರಹಿಸಲಾದ ಅಕ್ರಮ ಮರಳು.

ಅಥಣಿ: ಕಾಗವಾಡ ಹಾಗೂ ಅಥಣಿ ಕ್ಷೇತ್ರದಲ್ಲಿ ಅನಧಿಕೃತ ಮರಳಿನ ದಂಧೆ ಕೃಷ್ಣಾ ನದಿ ತಟ ಹಾಗೂ ಅಗ್ರಾಣಿ ನದಿಯಲ್ಲಿ ಎಗ್ಗಿಲ್ಲದೇ ನಡೆದರೂ ಸಂಬಂಧ ಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆಂದು ಆ ಭಾಗದ ರೈತರು ಹಾಗೂ ಸಾರ್ವಜನಿಕರ ಆರೋಪವಾಗಿದೆ.

ಅಕ್ರಮ ಮರಳು ಎನ್ನುವ ಈ ಕಪ್ಪು ಬಂಗಾರದ ಬೆಲೆಯನ್ನು ತಾರಕಕ್ಕೆ ಏರಿಸುವ ಮೂಲಕ ಅಕ್ರಮ ಹಣವನ್ನು ಸಂಗ್ರಹಿಸಲಾಗುತ್ತಿದೆ. ಅಧಿಕಾರಿಗಳ ಕಣ್ಣ ಕೆಳಗೆ ಈ ಧಂದೆ ನಡೆಯುತ್ತಿದ್ದು, ಅದು ಕಾಗವಾಡ ಮತ್ತು ಅಥಣಿ ಕ್ಷೇತ್ರಗಳಲ್ಲಿ ಖೀಳೇಗಾಂವ, ಆಜೂರ ಶೀರುರ ಪಾಂಡೇಗಾಂವ, ಕಲೋತಿ, ಮಸರಗುಪ್ಪಿ, ಕೋಕಟನೂರ, ಶಂಬರಗಿ, ಸುಟ್ಟಟ್ಟಿ, ಸವದಿ, ಕೃಷ್ಣಾ ಕಿತ್ತೂರ, ಮಹೇಶವಾಡಗಿ, ಝುಂಜರವಾಡ, ಕಕಮರಿ ಕೊಟ್ಟಲಗಿ, ಜಂಬಗಿ, ಮೈನಟಿ, ಹುಲಗಬಾಳಿ ಸೇರಿದಂತೆ ಹತ್ತು ಹಲವು ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ಇಂತಹ ಮರಳು ಮಾಫಿಯಾ ತಡೆಯುವಲ್ಲಿ ಪೊಲೀಸ್‌ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತಾಲೂಕಾ ಆಡಳಿತ ಸಂಪೂರ್ಣವಾಗಿ ವೀಫಲವಾಗಿದೆ ಎನ್ನುವುದು ಜನರ ಆರೋಪವಾಗಿದೆ.

ಕೃಷ್ಣಾ ನದಿಯಿಂದ ಅನಧಿಕೃತ ಮರಳು ಎತ್ತುವುದು ನದಿ ತಟದ ಭೂ ಕುಸಿತಕ್ಕೆ ಕಾರಣವಾಗಿದೆ. ಇದರಿಂದ ನದಿಗೆ ಮಹಾಪೂರ ಬಂದರೆ ಗ್ರಾಮಗಳಿಗೆ ನದಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸುವ ಅಪಾಯವೂ ಇದೆ. ಅನಾಹುತ ಸಂಭವಿಸುವುಕ್ಕಿಂತ ಮುಂಚೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಮರಳನ್ನು ತಡೆಯುವಂತೆ ಗ್ರಾಮಸ್ಥರು ಹಾಗೂ ರೈತರು ಆಗ್ರಹಿಸಿದ್ದಾರೆ.

ಒಂದು ಟಿಪ್ಪರ್‌ ಮರಳಿಗೆ 60 ರಿಂದ 80 ಸಾವಿರದವರೆಗೆ ಮರಳು ಮಾರಾಟವಾಗುತ್ತಿದೆ. ಈ ಭಾಗದ ಅಕ್ರಮ ಮರಳು ಮಹಾರಾಷ್ಟಕ್ಕೂ ಅಕ್ರಮವಾಗಿ ಸಾಗಾಟವಾಗುತ್ತಿರುವುದರಿಂದ ಮಧ್ಯಮ ವರ್ಗದವರಿಗೆ ಮರಳು ಕೈಗೆ ಸಿದಂತಾಗಿದೆ. ಬಡ ಮತ್ತು ಮಧ್ಯಮ ವರ್ಗದವರು ಮನೆ ಕಟ್ಟುವ ಕನಸು ಕನಸಾಗಿ ಉಳಿದಿದೆ.

ಇದರೊಂದಿಗೆ ಅನಧಿಕೃತವಾಗಿ ಸಂಗ್ರಹಿಸಿ ಇಡಲಾದ ಮರಳನ್ನು ಕಳ್ಳ ಮಾರ್ಗವಾಗಿ ಮಹಾರಾಷ್ಟ್ರ ಮತ್ತು ಇತರ ಕಡೆ ಸಾಗಿಸಲಾಗುತ್ತಿದೆ. ಅಧಿಕಾರಿಗಳು ತಕ್ಷಣ ಅಕ್ರಮ ಮರಳು ದಂಧೆ ತಡೆಯುವ ಮೂಲಕ ಅನಧಿಕೃತವಾಗಿ ಸಂಗ್ರಹಿಸಿಡಲಾದ ಮರಳು ವಶಪಡಿಸಿಕೊಳ್ಳುವಂತೆ ಸಮಾಜ ಸೇವಕ ಮಾಂತೇಶ ಬಾಡಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಅಥಣಿ ತಹಶೀಲ್ದಾರ ಬಿ.ಎನ್‌.ಬಳಿಗಾರ ಅವರನ್ನು ಸಂಪರ್ಕಿಸಿದಾಗ, ಅಕ್ರಮ ಮರಳು ಸಂಗ್ರಹ ವಶಪಡಿಸಿಕೊಂಡು ಅದನ್ನು ಸರ್ಕಾರಿ ದರದಲ್ಲಿ ಸವಾಲವನ್ನು ಮಾಡಿ ಬಂದ ಹಣವನ್ನು ಸರ್ಕಾರದ ಬೊಕ್ಕಸಕ್ಕೆ ಹಾಕಲಾಗಿದೆ. ಅದೇ ರೀತಿ ಅಕ್ರಮ ಮರಳು ಧಂದೆ ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

 

•ವಿಜಯಕುಮಾರ ಅಡಹಳ್ಳಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.