
ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ
Team Udayavani, May 31, 2023, 10:16 AM IST

ಬೆಳಗಾವಿ: ಯಾವ ನಾಯಕರು ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೋ ಅಂತಹ ನಾಯಕರನ್ನು ಕಾಂಗ್ರೆಸ್ ಎಂದಿಗೂ ಕೈಬಿಡುವುದಿಲ್ಲ. ಪಕ್ಷ ಅವರ ಜೊತೆಗೆ ಸದಾ ನಿಲ್ಲುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಭಯ ನೀಡಿದರು.
ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಕಷ್ಟ ಕಾಲದಲ್ಲಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷಕ್ಕೆ ಬಂದು, ನಮಗೆ ಶಕ್ತಿ ತುಂಬಿದ್ದಾರೆ. ಚುನಾವಣೆ ಮುಗಿದ ಮೇಲೆ
ಅವರ ಜೊತೆಗೆ ಮಾತನಾಡಲು ನನಗೆ ಸಮಯವೇ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಅವರ ಭೇಟಿಗೆ ಬಂದಿದ್ದೇನೆ ಎಂದರು.
ಸವದಿ ಮತ್ತು ಶೆಟ್ಟರ ನಾಯಕರು ಕಾರ್ಯಕರ್ತರಲ್ಲ. ಪಕ್ಷಕ್ಕೆ ಕಷ್ಟ ಕಾಲದಲ್ಲಿ ಶಕ್ತಿ ತುಂಬಿದ್ದಾರೆ. ಹೀಗಿರುವಾಗ ನಾವು ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬೇಸರ ಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ
ಯಾರಿಗೂ ಬೇಸರವಿಲ್ಲ.ಲಕ್ಷ್ಮಣ ಸವದಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು ಎಂಬ ವಿಚಾರ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಯಾರನ್ನೂ ಕೈ ಬಿಡುವುದಿಲ್ಲ ಅಷ್ಟು ಮಾತ್ರ ಹೇಳುತ್ತೇನೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ

Lingayat ; ಸಿದ್ದರಾಮಯ್ಯನವರಿಂದ ಗೆದ್ದಿದ್ದೀರಿ..:ಶಾಮನೂರು ವಿರುದ್ಧ ಎಚ್.ವಿಶ್ವನಾಥ್ ಕಿಡಿ

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ

JK Cement ಕಂಪನಿಯ ಬ್ಯುಸಿನೆಸ್ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್ ವಾಲ್ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

Ragini Dwivedi; ‘ಗಜರಾಮ’ ಸ್ಪೆಷಲ್ ಹಾಡಿಗೆ ರಾಗಿಣಿ ಮಸ್ತ್ ಸ್ಟೆಪ್ಸ್!