ಸ್ಮಾರ್ಟ್ ವ್ಯವಸ್ಥೆಯ ಕಂಟ್ರೋಲ್ ಸೆಂಟರ್ ಲೋಕಾರ್ಪಣೆ ಮಾಡಿದ ಬಿಎಸ್ ವೈ
Team Udayavani, Jan 29, 2020, 2:15 PM IST
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ 76.80 ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ (ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ಲೋಕಾರ್ಪಣೆಗೊಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅಶೋಕ ನಗರದಲ್ಲಿರುವ ಈಜುಕೊಳ ಹಾಗೂ ವ್ಯಾಯಾಮ ಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ (ಕಚೇರಿ ಸಂಕೀರ್ಣ) ಮತ್ತು ಆಂಗ್ಲ ಮಾಧ್ಯಮ ಶಾಲೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್