ಜನ ಸಂಕಲ್ಪಯಾತ್ರೆ: ಅಮಿತ್ ಶಾ ಬರುತ್ತಿದ್ದಂತೆ ಮೊಳಗಿದ ಜಯಘೋಷ
Team Udayavani, Jan 28, 2023, 6:48 PM IST
ಬೆಳಗಾವಿ: ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ಜನ ಸಂಕಲ್ಪಯಾತ್ರೆ ಬೃಹತ್ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ವೇದಿಕೆಗೆ ಬರುತ್ತಿದ್ದಂತೆ ಜಯಘೋಷ ಹಾಗೂ ಕರತಾಡನ ಮುಗಿಲು ಮುಟ್ಟಿತು.
ಎಂ.ಕೆ.ಹುಬ್ಬಳ್ಳಿಯ ಮೈದಾನದಲ್ಲಿ ವೇದಿಕೆ ಪಕ್ಕದಲ್ಲಿ ಹೆಪ್ಯಾಡ್ ನಲ್ಲಿ ಇಳಿದ ಅಮಿತ್ ಶಾ ನೇರವಾಗಿ ವೇದಿಕೆಗೆ ಬಂದರು. ಅಮಿತ್ ಶಾ ಬರುತ್ತಿದ್ದಂತೆ ನೆರೆದ ಜನರು ಎದ್ದು ನಿಂತು ಚಪ್ಪಾಳೆ ತಟ್ಟಿ, ಜಯಘೋಷ ಮೊಳಗಿಸಿ ಸ್ವಾಗತಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹಾಂತೇಶ ದೊಡಗೌಡ್ರ, ಪಿ.ರಾಜೀವ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಪ, ಅನಿಲ್ ಬೆನಕೆ, ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ: ಹಲವು ವಿಸ್ಮಯಗಳ ಆಗರ ನೆಲ್ಲಿತೀರ್ಥ- ವರ್ಷದಲ್ಲಿ ಆರು ತಿಂಗಳು ಮಾತ್ರ ಭೇಟಿಗೆ ಅವಕಾಶ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್
ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ
ಬಾತ್ ರೂಮ್ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು
Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?