ಜೆಡಿಎಸ್ ಗೆದ್ದು ಎಚ್‌ಡಿಕೆ ಸಿಎಂ ಆಗ್ತಾರೆ: ಇಬ್ರಾಹಿಂ
ಈ ಬಾರಿ ಜೆಡಿಎಸ್ ಗೆಲ್ಲಿಸಲು ಬೆಂಬಲಿಸಬೇಕು
Team Udayavani, Nov 30, 2022, 6:45 PM IST
ಖಾನಾಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಏನೆಂದು ತಿಳಿಯುತ್ತದೆ. ಎಚ್.ಡಿ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದರಲ್ಲಿ ಯಾವ ಸಂಶಯವೂ ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ಅವರು ಮಂಗಳವಾರ ಪಟ್ಟಣದ ಲೋಕಮಾನ್ಯ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಅತ್ಯಲ್ಪ ಅವಧಿಗೆ ಜೆಡಿಎಸ್ ಸರ್ಕಾರವಿದ್ದಾಗ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂಟರ್ ನ್ಯಾಶನಲ್ ಮಟ್ಟದ ಶಾಲೆ ಆರಂಭಿಸುವ ಯೋಜನೆ ಇದೆ.
5 ವರ್ಷಗಳಲ್ಲಿ 30 ಲಕ್ಷ ಕೋಟಿ ಹಣ ಖರ್ಚು ಮಾಡಿ ನೀರಾವರಿ ಮತ್ತು ರಸ್ತೆಗಳ ನಿರ್ಮಾಣ ಮಾಡುವ ಸಂಕಲ್ಪ ಹೊಂದಿದ್ದೇವೆ. ಪಂಚರತ್ನ ಯೋಜನೆಯಲ್ಲಿ ರೈತರು ಬೆಳೆದ ಆಹಾರ ಧಾನ್ಯಗಳಿಗೆ ಯೋಗ್ಯ ಬೆಲೆ ದೊರಕಿಸಲು 50 ಸಾವಿರ ಕೋಟಿ ಯೋಜನೆ ರೂಪಿಸಲಾಗುವುದು. ಗೋವಾದಲ್ಲಿ ಕೂಡ ಬಿಜೆಪಿ ಸರ್ಕಾರವಿದ್ದರೂ ಕಳಸಾ ಬಂಡೂರಿ ಯೋಜನೆ ಯಾಕೆ ಪೂರ್ಣಗೊಳಿಸಲಾಗುತ್ತಿಲ್ಲ ಎಂದು ಸರ್ಕಾರ ಯಾವ ಸ್ಥಿತಿಯಲ್ಲಿದೆ ನೋಡಿ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಸುಳ್ಳು ಯೋಜನೆಗಳನ್ನು ರೂಪಿಸಿ ಮೋಸ ಮಾಡುತ್ತಿದ್ದು ಶೆ.40 ಕಮಿಶನ್ ಪಡೆಯುವ ಸರ್ಕಾರವಾಗಿದೆ ಎಂದು ಟೀಕಿಸಿದರು. ನುಡಿದಂತೆ ನಡೆಯುವುದು ಜೆಡಿಎಸ್ ಪಕ್ಷ ಮಾತ್ರ ಎಂದರು. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳು ಸಾಲ ಕಟ್ಟಬೇಕಿಲ್ಲ ಸರ್ಕಾರವೇ ಅದನ್ನು ಭರಿಸಲಿದೆ ಎಂದರು. ಪ್ರಧಾನಿ ಮೋದಿಗೆ ಹೆಂಡತಿ, ಮಕ್ಕಳು, ಕುಟುಂಬದ ಯಾವ ಚಿಂತೆಯೂ ಇಲ್ಲ. ಹೀಗಾಗಿ ರಾಜ ವ್ಯಾಪಾರಿ, ಆದರೆ ಪ್ರಜೆಗಳು ಭಿಕಾರಿಯಾಗುತ್ತಿದ್ದಾರೆ ಎಂದರು.
ಜೆಡಿಎಸ್ ಕೋರ್ ಕಮೀಟಿ ಸದಸ್ಯ ನಾಸೀರ ಬಾಗವಾನ್ ಮಾತನಾಡಿ, ಯಾವ ಶಾಸಕರೂ ಮಾಡದಂತಹ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಿ ತೋರಿಸಿರುವೆ. ಎಲ್ಲ ಸಮಾಜದ ಜನರಿಗೆ ನ್ಯಾಯ ಒದಗಿಸಿರುವೆ. ಈ ಬಾರಿ ಜೆಡಿಎಸ್ ಗೆಲ್ಲಿಸಲು ಬೆಂಬಲಿಸಬೇಕು ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಪಕ್ಷದ ಆದೇಶದಂತೆ ಪ್ರತಿ ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮಾಡುವುದರ ಮೂಲಕ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದರು.
ಪ್ರತಾಪ ಪಾಟೀಲ, ನ್ಯಾಯವಾದಿ ಎಚ್. ಎನ್. ದೇಸಾಯಿ, ಪಪಂ ಸದಸ್ಯೆ ಮೇಘಾ ಕುಂದರಗಿ, ಬ್ಲಾಕ್ ಅಧ್ಯಕ್ಷ ಎಂ.ಎಂ.ಸಾಹುಕಾರ ಮಾತನಾಡಿದರು. ವೇದಿಕೆ ಮೇಲೆ ಜೆಡಿಎಸ್ ಉಪಾಧ್ಯಕ್ಷ ನಾಗರಾಜ ಹುಬ್ಬಳ್ಳಿ, ಫೈಜುಲ್ಲಾ ಮಾಡಿವಾಲೆ, ಅಲ್ಪ ಸಂಖ್ಯಾತ ಜಿಲ್ಲಾಧ್ಯಕ್ಷ ಸಂಜೀವ, ಉಪಾಧ್ಯಕ್ಷ ರವಿಂದ್ರ ಕಾಡಗಿ, ಪಪಂ ಸದಸ್ಯ ರಫೀಕ ವಾರಿಮನಿ ಮುಂತಾದವರು ಉಪಸ್ಥಿತರಿದ್ದರು. ಲಿಯಾಖಲಿ ಬಿಚ್ಚುಣ್ಣವರ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾರಕಿಹೊಳಿ ಕುಟುಂಬದ ಮುಂದೆ ಮಂಡಿಯೂರಿದ ರಾಷ್ಟ್ರೀಯ ಪಕ್ಷಗಳು
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ
ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ
ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್