12 ಮಸೂದೆ ಮಂಡನೆ, 9 ಅಂಗೀಕಾರ: ಕಾಗೇರಿ

Team Udayavani, Dec 31, 2022, 7:05 AM IST

12 ಮಸೂದೆ ಮಂಡನೆ, 9 ಅಂಗೀಕಾರ: ಕಾಗೇರಿ

ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಈ ಪೈಕಿ 9 ಅಂಗೀಕಾರಗೊಂಡಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 9 ದಿನಗಳ ಅಧಿವೇಶನದಲ್ಲಿ 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ. ಶಾಸಕರ ಒಟ್ಟು ಹಾಜರಾತಿ ಶೇ.75ರಷ್ಟಿದ್ದು, ಇದು ತೃಪ್ತಿ ತಂದಿಲ್ಲ. ದಿನೇಶ್‌ ಗುಂಡೂರಾವ್‌, ಹರೀಶ್‌ ಪೂಂಜ, ಕೃಷ್ಣಪ್ಪ, ಜಮೀರ್‌ ಅಹ್ಮದ್‌ ಹಾಗೂ ಅನಿತಾ ಕುಮಾರಸ್ವಾಮಿ ಸಹಿತ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದರು.

ಕಲಾಪದಲ್ಲಿ ಒಟ್ಟು 2,125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನ ದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146ಕ್ಕೆ ಉತ್ತರಿಸಲಾಗಿದೆ. ಲಿಖೀತ ಉತ್ತರ ಬಯಸಿದ 1,923 ಪ್ರಶ್ನೆಗಳ ಪೈಕಿ 1,614 ಪ್ರಶ್ನೆಗಳಿಗೆ ಉತ್ತರ ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85ನ್ನು ಚರ್ಚಿ ಸಲಾಗಿದೆ. ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿ ರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಸದನವು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಎಂದು ಹೇಳಿದರು.

ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು.

ಸಭಾಧ್ಯಕ್ಷರಿಗೆ ಅಧಿಕಾರ
2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು ವಿಧಾನಸಭೆಯ ವಿವಿಧ ಸಮಿತಿಗಳನ್ನು ಪುನರ್‌ರಚನೆ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಂದು ಹಕ್ಕುಚ್ಯುತಿ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿದ್ದು, ಈ ಬಗ್ಗೆ ಚರ್ಚಿಸಿ ತಿರಸ್ಕರಿಸಲಾಗಿದೆ. ಸದನದಲ್ಲಿ ಹಿರಿಯ ಶಾಸಕರಾದ ಆರ್‌.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು ಹಾಗೂ 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿ ಮಂಡಿಸಿದ್ದು, ಡಿ.29ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ಹಿಂಪಡೆಯಲಾಗಿದೆ ಎಂದರು.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಪೊಲೀಸ್‌ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.