ಅಶಕ್ತ ಶಿಶುಗಳಿಗೆ ಕಾಂಗರೂ ಮಾದರಿ ಆರೈಕೆ ಅತ್ಯವಶ್ಯ


Team Udayavani, May 17, 2019, 3:22 PM IST

belegavi-tdy-3..

ಬೆಳಗಾವಿ: ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಿಂದ ವಿಶ್ವ ಕಾಂಗರೂ ಮಾದರಿ ಆರೈಕೆ ದಿನ ಆಚರಿಸಲಾಯಿತು.

ಬೆಳಗಾವಿ: ನಮ್ಮ ದೆಶದಲ್ಲಿ ಶೇ. 45ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ರೋಗಗ್ರಸ್ತರಾಗಿ ಸಾವನ್ನಪ್ಪುತ್ತಿವೆ. ಆದ್ದರಿಂದ ತಾಯ್ತನದ ಬಂಧ ಬಿಗಿಗೊಳಿಸಲು ಕಾಂಗರೂ ಮಾದರಿ ಆರೈಕೆ ಅತ್ಯಗತ್ಯವಾಗಿದೆ ಎಂದು ಯುಎಸ್‌ಎಂ ಕೆಎಲ್ಇ ನಿರ್ದೇಶಕ ಡಾ|ಎಚ್ ಬಿ ರಾಜಶೇಖರ ಹೇಳಿದರು.

ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಚಿಕ್ಕಮಕ್ಕಳ ವಿಭಾಗ ಹಾಗೂ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಿಂದ ವಿಶ್ವ ಕಾಂಗರೂ ಮಾದರಿ ಆರೈಕೆ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ತಾಯಿ ಮಗುವಿನ ಬಾಂಧವ್ಯ ಗಟ್ಟಿಗೊಳಿಸಲು ಕಾಂಗರೂ ಮಾದರಿ ಆರೈಕೆ ಅತ್ಯಗತ್ಯ ಎಂದರು.

ಹಿಂದಿನಿಂದಲೂ ಈ ಪದ್ಧತಿ ರೂಢಿಯಲ್ಲಿದ್ದರೂ ಅದು ಪ್ರಗತಿ ಹೊಂದುತ್ತ, ಸಂಶೋಧನೆಗೊಳಪಟ್ಟು ಇಂದು ವಿಶಿಷ್ಟ ಪದ್ಧತಿಯಾಗಿ ಹೊರಹೊಮ್ಮಿದೆ. ಅದನ್ನು ಉಪಯೋಗಿಸಿ ಕೊಂಡು ಆರೋಗ್ಯಯುತ ತಾಯ್ತನದ ಸುಖ ಅನುಭವಿಸಲು ಅನುವು ಮಾಡಿಕೊಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ| ಎಸ್‌.ಸಿ. ಧಾರವಾಡ ಮಾತನಾಡಿ, ಆರೋಗ್ಯ ಶಿಕ್ಷಣವೆನ್ನುವುದು ಜೀವ ಉಳಿಸುವ ಜ್ಞಾನವಾಗಿದೆ. ಇದು ಶಿಶುವಿನ ಜನನದಿಂದ ಹಿಡಿದು ಬೆಳೆದು ದೊಡ್ಡದಾಗಿ ಆರೋಗ್ಯಯುತ ಜೀವನಹೊಂದಿ ಮರಣ ಹೊಂದುವವರೆಗಿನ ಪಯಣವನ್ನು ಸರಾಗಗೊಳಿಸುವ ದಾರಿದೀಪವಾಗಿದೆ ಎಂದರು . ಕಾಂಗರೂ ಮಾದರಿ ಆರೈಕೆ 2.5 ಕೆ.ಜಿಗಿಂತ ಕಡಿಮೆ ತೂಕ ಇರುವ ಮಕ್ಕಳು ಮತ್ತು ದಿನ ತುಂಬದೇ ಹೆರಿಗೆ ಆದ ಮಕ್ಕಳನ್ನು ತನ್ನ ಚರ್ಮಕ್ಕೆ ತಾಗುವಂತೆ ಎದೆಯ ಮೇಲೆ ಹಾಕಿಕೊಂಡು 6 ರಿಂದ 8 ಗಂಟೆಗಳ ಕಾಲ ಆರೈಕೆ ಮಾಡಬೇಕು ಇದರಿಂದ ತಾಯಿ ಮತ್ತು ಮಗುವಿನ ಬಾಂಧ‌ವ್ಯ ಹೆಚ್ಚುವುದಲ್ಲದೇ ಮಗುವಿನ ಉಸಿರಾಟ ಕ್ರಿಯೆಗೆ ಸಹಕಾರಿಯಾಗಿ ದೈಹಿಕ ಚಟುವಟಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಗುಣಾತ್ಮಕ ಬೆಳವಣಿಗೆಯಾಗುತ್ತದೆ ಎಂದು ಹೇಳಿದರು. ಕಾಂಗರೂ ಮಾದರಿ ಆರೈಕೆ ಎಂಬುದು ತಾಯ್ತನ ಸಾಕಾರಗೊಳಿಸುವ ಸೇತುವಾಗಿದೆ. ಮಗುವಿನ ಪಂಚೇಂದ್ರಿಯಗಳ ವಿಕಾಸ, ಸುಖ ನಿದ್ದೆ, ಬುದ್ದಿಶಕ್ತಿಯ ಬೆಳವಣಿಗೆ ಹೀಗೆ ಮುಂತಾದ ಅದ್ಬುತ ಗುಣಗಳನ್ನು ಹೊಂದಿದೆ. ಇದನ್ನು ಮಗುವು 2500 ಗ್ರಾಮ್‌ ತೂಕ ತಲುಪುವ ವರೆಗೆ ಅಥವಾ ಅದರ ನಂತರವೂ ಮಾಡಬಹುದಾಗಿದೆ ಎಂದರು.

ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ| ಎಂ.ಎಸ್‌ ಕಡ್ಡಿ, ಕಾಂಗರೂ ಮಾದರಿ ಆರೈಕೆಯ ಪರಿಚಯ, ಅಭಿವೃದ್ಧಿ, ಬೆಳವಣಿಗೆಗಳ ಬಗ್ಗೆ ಪರಿಚಯಿಸಿದರು. ಹಿರಿಯ ಮಕ್ಕಳ ಮಕ್ಕಳ ತಜ್ಞ ಡಾ| ಸುರೇಶ ಕಾಖಂಡಕಿ ಹಾಗೂ ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ ಮುಖ್ಯಸ್ಥೆ ಡಾ| ರಾಜೇಶ್ವರಿ ಕಡಕೋಳ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಉಪನ್ಯಾಸ ನೀಡಿದರು.

ಕೆಎಲ್ಇ ಹೋಮಿಯೋಪಥಿಕ್‌ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಎ. ಉಡಚನಕರ ಮತ್ತು ಕೆಎಲ್ಇ ಸೆಂಟೇನರಿ ಇನ್‌ಸ್ಟಿಟ್ಯೂಟ್ ಆಫ್‌ ನರ್ಸಿಂಗ ಸೈನ್ಸ್‌ ಪ್ರಾಂಶುಪಾಲ ವಿಕ್ರಾಂತ ನೆಸರಿಮ ಡಾ| ಅನಿತಾ ಮೋದಗೆ, ಸೌಮ್ಯ ವೇರ್ಣೇಕರ, ಡಾ| ಸಂತೋಷಕುಮಾರ ಕರಮಸಿ, ಡಾ| ಬಸವರಾಜ ಕುಡಸೋಮನ್ನವರ, ಸ್ತ್ರೀರೋಗ ತಜ್ಞೆ ಡಾ| ವಿದ್ಯಾ ಕಾಖಂಡಕಿ, ಡಾ| ಸತೀಶ ಧಾಮನಕರ, ಡಾ| ರವೀಂದ್ರ ನರಸಾಪುರೆ, ಡಾ| ಗೀತಾಂಜಲಿ ತೋಟಗಿ, ಡಾ| ದರ್ಶಿತ್‌ ಶೆಟ್ಟಿ, ಡಾ| ಮೋಹನ ಸುಂಕದ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಭಾವತಿ ಪಾಟೀಲ ನಿರೂಪಿಸಿದರು.

ಹಿರಿಯ ಮಕ್ಕಳ ತಜ್ಞ ಡಾ| ಸುರೇಶ ಕಾಖಂಡಕಿ ಸ್ವಾಗತಿಸಿದರು. ಡಾ| ಅನುರಾಧಾ ಉಗಲೆ ವಂದಿಸಿದರು.

ಟಾಪ್ ನ್ಯೂಸ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

Chikkodi; ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

Belagavi: ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲ್ಪಟ್ಟಿದ್ದ ಒಂದು ತಿಂಗಳ ಹಸುಗೂಸು ಮೃತ್ಯು

Belagavi: ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲ್ಪಟ್ಟಿದ್ದ ಒಂದು ತಿಂಗಳ ಹಸುಗೂಸು ಮೃತ್ಯು

ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು: ತಪ್ಪಿದ್ದ ಭಾರಿ ಅನಾಹುತ

ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು.. ತಪ್ಪಿದ್ದ ಭಾರಿ ಅನಾಹುತ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

4-sirsi

Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Udayavani Campaign: ಕಾರ್ಕಳ-ಮೊದಲು 70, ಈಗ 20!

Udayavani Campaign: ಕಾರ್ಕಳ-ಮೊದಲು 70, ಈಗ 20!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.