ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ

•ಮತ್ತೆ ಮಳೆರಾಯನ ಆರ್ಭಟ ಆರಂಭ•ಸೇತುವೆ ಮೇಲೆ ಹರಿದ ನೀರು

Team Udayavani, Jul 17, 2019, 10:19 AM IST

bg-tdy-2..

ಚಿಕ್ಕೋಡಿ: ಕಲ್ಲೋಳ ಹತ್ತಿರ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆರಾಯ ಮಂಗಳವಾರ ಮತ್ತೆ ಆರಂಭವಾಗಿದ್ದು, ಇದರಿಂದ ಇಳಿಕೆ ಕಂಡಿದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ನೀರು ಹೆಚ್ಚಳಗೊಂಡಿದೆ.

ಜಲಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರಿಸಿ ಕೊಂಚ ಕಡಿಮೆಯಾಗಿದ್ದರಿಂದ ಗಡಿ ಭಾಗದ ನದಿ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ ಕಂಡಿದ್ದವು. ಇದರಿಂದ ತಾಲೂಕಿನಲ್ಲಿ ಮುಳುಗಡೆಗೊಂಡಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿದ್ದವು. ಆದರೆ ಮಂಗಳವಾರ ಮತ್ತೆ ಮಳೆ ಆರಂಭವಾಗಿರುವ ಹಿನ್ನೆಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯ ತೊಡಗಿದೆ.

ಮಳೆ ನೀರಿನಿಂದ ಮುಳುಗಡೆಗೊಂಡಿದ್ದ ತಾಲೂಕಿನ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ, ಜತ್ರಾಟ-ಬಿವಸಿ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಿವೆ. ಸೋಮವಾರ ರಾತ್ರಿ ಮತ್ತು ಮಂಗಳವಾರ ಮತ್ತೆ ಮಳೆ ಸುರಿಯುವುದರಿಂದ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 33317 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 9801 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 43118 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 53ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ ಎಂದು ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ ತಿಳಿಸಿದರು.

ಸೇತುವೆಗಳ ನೀರಿನ ಮಟ್ಟ: ಕೃಷ್ಣಾ ನದಿಯ ಅಂಕಲಿ-ಮಾಂಜರಿ ಸೇತುವೆ ಅಪಾಯ ಮಟ್ಟ 537 ಮೀ. ಇಂದಿನ ನೀರಿನ ಮಟ್ಟ 528.01, ದೂಧಗಂಗಾ ನದಿಯ ಸದಲಗಾ-ಬೋರಗಾಂವ ಸೇತುವೆ ಅಪಾಯ ಮಟ್ಟ 538 ಮೀ. ಇಂದಿನ ನೀರಿನ ಮಟ್ಟ 532.390 ಮೀ., ಹಿಪ್ಪರಗಿ ಬ್ಯಾರೇಜ್‌ ಅಪಾಯ ನೀರಿನ ಮಟ್ಟ 524 ಮೀ.ಇಂದಿನ ನೀರಿನ ಮಟ್ಟ 520.05 ಮೀ.

ಮಹಾರಾಷ್ಟ್ರದ ಮಳೆ ಪ್ರಮಾಣ: ಕೊಯ್ನಾ-41 ಮಿಮೀ, ವಾರಣಾ-65ಮಿಮೀ, ಕಾಳಮ್ಮವಾಡಿ- 59ಮಿಮೀ, ನವಜಾ-44 ಸಾಂಗ್ಲಿ-2 ಮಿಮೀ, ರಾಧಾನಗರಿ-64 ಮಿಮೀ, ಪಾಟಗಾಂವ-55ಮಿಮೀ, ಮಹಾಬಲೇಶ್ವರ-37 ಮಿಮೀ, ಕೊಲ್ಲಾಪುರ-11 ಮಿಮೀ, ಈ ರೀತಿ ಮಹಾರಾಷ್ಟ್ರದಲ್ಲಿ ಮಳೆ ಆಗಿದೆ.

ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-3.2 ಮಿಮೀ, ಅಂಕಲಿ-4.0 ಮಿಮೀ, ನಾಗರಮುನ್ನೋಳ್ಳಿ-1.4 ಮಿಮೀ, ಸದಲಗಾ-4.1 ಮಿಮೀ, ಗಳತಗಾ-4.0 ಮಿಮೀ, ಜೋಡಟ್ಟಿ-3.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-0.2 ಮಿಮೀ, ನಿಪ್ಪಾಣಿ ಎಆರ್‌ಎಸ್‌-0.2 ಮಿಮೀ, ಸೌಂದಲಗಾ-12.3 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.