ಕಾಂಗ್ರೆಸ್ ಬಿಡಲ್ಲ, ಬಿಜೆಪಿ ಸೇರಲ್ಲ: ಲಖನ್
Team Udayavani, Apr 5, 2018, 6:40 AM IST
ಗೋಕಾಕ: “ಬಿಜೆಪಿಯವರು ನನ್ನನ್ನು ಸಿಎಂ ಮಾಡುವುದಾಗಿ ಹೇಳಿದರೂ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ’ ಎಂದು ಉದ್ಯಮಿ ಲಖನ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಬಿಡದಂತೆ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಿದ್ದಾರೆ.
ಹೀಗಾಗಿ ಅವರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ನಲ್ಲೇ ಉಳಿಯುವ ನಿರ್ಧಾರ ಮಾಡಿದ್ದೇನೆ. ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ತೆರಳಿ ಸಿಎಂ ಜತೆ ಚರ್ಚಿಸುತ್ತೇನೆ. ಬಳಿಕ ನಿರ್ಧಾರ ಪ್ರಕಟಿಸುತ್ತೇನೆ’ ಎಂದರು. ಇದೇ ವೇಳೆ ಮಾತನಾಡಿದ ರಮೇಶ ಜಾರಕಿಹೊಳಿ, ಲಖನ್ ಗೋಕಾಕ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ