ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

Team Udayavani, Jun 14, 2024, 6:15 PM IST

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಉದಯವಾಣಿ ಸಮಾಚಾರ
ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಪುತ್ಥಳಿಗಳ ಮೆರವಣಿಗೆ, ವೀರಗಾಸೆ ಕಲಾಪ್ರದರ್ಶನ, ಸುಮಾರು 250 ಜನ ನಿರಾಶ್ರಿತರಿಗೆ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಗೀತ ರಸಮಂಜರಿ
ಕಾರ್ಯ ಕ್ರಮಗಳನ್ನೊಳಗೊಂಡಂತೆ ಉಸಿರುಗನ್ನಡ ಕನ್ನಡ ಉತ್ಸವವನ್ನು ಇತ್ತೀಚೆಗೆ ಅರ್ಥಪೂರ್ಣ ವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಪೀಠಾಧಿಪತಿಗಳಾದ ಡಾ. ಅಲ್ಲಮಪ್ರಭು ಸ್ವಾಮಿಗಳು, ಬೆಳಗಾವಿ ಕರ್ನಾಟಕದ ಭಾಗವಾಗಿ ಉಳಿಯಲು, ಕನ್ನಡ ಗಟ್ಟಿಯಾಗಿ ನೆಲೆನಿಲ್ಲಲು ಕಾರಣ ನಾಗನೂರು ರುದ್ರಾಕ್ಷಿಮಠ ಹಾಗೂ ಡಾ. ಶಿವಬಸವ ಅಜ್ಜನವರು. ಹೀಗಾಗಿ ಬೆಳಗಾವಿ ಕರ್ನಾಟಕದ ಎರಡನೆಯ ರಾಜಧಾನಿ ಆಗಬೇಕು ಎಂಬುದು ಬೆಳಗಾವಿ ಜನತೆಯ ಬಹುದಿನಗಳ ಬೇಡಿಕೆಯಾಗಿದೆ. ಈ ಬೇಡಿಕೆಯನ್ನು ಕರ್ನಾಟಕ ಸರ್ಕಾರ ಕಚೇರಿಗಳ ಸ್ಥಳಾಂತರದ ಜೊತೆಗೆ ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕು ಎಂದರು.

ಗಡಿ ಪ್ರದೇಶಗಳು ಗಟ್ಟಿಯಾಗಿದ್ದಾರೆ ರಾಜ್ಯಗಳು ಸಂಪದ್ಭರಿತವಾಗಿರುತ್ತವೆ. ಗಡಿಗಳ ಅಭಿವೃದ್ಧಿಯನ್ನು ಸರ್ಕಾರ ನಿರ್ಲಕ್ಷಿಸಿದರೆ ಈ ಕೆಲಸವನ್ನ ನಾಗನೂರು ರುದ್ರಾಕ್ಷಿಮಠವು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಜೊತೆಗೂಡಿ ಮಾಡಬೇಕಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷರಾದ ಅಶೋಕ ಚಂದರಗಿ ಅವರು ಮಾತನಾಡಿ, ನಾಗನೂರು ರುದ್ರಾಕ್ಷಿಮಠದ ಇನ್ನೊಂದು ಹೆಸರು ಕನ್ನಡ ಮಠ. ಶಿವಬಸವ ಅಜ್ಜನವರ 1960ರ ದಶಕದ ಕನ್ನಡ ಹೋರಾಟ, ಕನ್ನಡ ದಾಸೋಹ ಈಗಿನ ಯುವಪೀಳಿಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಶಿವಬಸವ ಸ್ವಾಮಿಗಳು, ಪ್ರಭು ಸ್ವಾಮಿಗಳು, ಜಗದ್ಗುರು ತೋಂಟದ ಸಿದ್ಧಾರಾಮ ಸ್ವಾಮಿಗಳು ಹಾಗೂ ಅಲ್ಲಮಪ್ರಭು ಸ್ವಾಮಿಗಳ ಜೊತೆಗೆ ನಿರಂತರವಾಗಿ ಕನ್ನಡ ನಾಡು ನುಡಿಯ ಸೇವೆ ಮಾಡುತ್ತಿರುವುದು ನನ್ನ ಸೌಭಾಗ್ಯ ಎಂದರು.

ಕನ್ನಡ ರ್ಯಾಪರ್‌ ಎಂದೇ ಪ್ರಸಿದ್ಧಿ ಪಡೆದ ಬೆಳಗಾವಿಯ ಪಿ. ಎಸ್‌. ಪ್ರವೀಣ್‌, ಗಾಯಕಿ ಸನ್ನಿ ಶೆಟ್ಟಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು ಹಾಗೂ ಕರ್ನಾಟಕದ ಸುಪ್ರಸಿದ್ಧ ಪ್ರಾಣಿ ಸಂರಕ್ಷಕ ಸೌರಭ ಕಮ್ಮಾರ ಅವರನ್ನು ಸನ್ಮಾನಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ಆರ್‌. ಪಟಗುಂದಿ ಸ್ವಾಗತಿಸಿದರು. ವೃಂದಾ ಕಮತೆ ಮತ್ತು ಸಂಗಡಿಗರು ನಾಡಗೀತೆ ಪ್ರಸ್ತುತ ಪಡಿಸಿದರು. ಪ್ರಾಧ್ಯಾಪಕಿ ಪ್ರೊ. ಅನಿತಾ ಪಾಟೀಲ  ಪರಿಚಯಿಸಿದರು. ಪ್ರೊ. ಮಂಜುನಾಥ ಶರಣಪ್ಪನವರ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಡಾ. ಬಸಯ್ಯ ಮಠದ ವಂದಿಸಿದರು, ದೀಪಾ ಮತ್ತು ಸುದೀಪ ನಿರೂಪಿಸಿದರು.

ಟಾಪ್ ನ್ಯೂಸ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

swimmer dhinidhi

Paris Olympics; ನೀರಿಗಿಳಿಯಲು ಹೆದರುತ್ತಿದ್ದ ಧಿನಿಧಿ ಈಗ ಒಲಿಂಪಿಕ್ಸ್‌ನಲ್ಲಿ ಈಜುಪಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Heavy Rain… ಬೆಳಗಾವಿ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 25, 26 ರಂದು ರಜೆ

Heavy Rain… ಬೆಳಗಾವಿ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 25, 26 ರಂದು ರಜೆ

ಎಡೆ ಬಿಡದೆ ಸುರಿದ ಮಳೆ; ಗಡಿ ಭಾಗದಲ್ಲಿ ಉಕ್ಕಿ ಹರಿಯುತ್ತಿವೆ ನದಿಗಳು

ಎಡೆ ಬಿಡದೆ ಸುರಿದ ಮಳೆ; ಗಡಿ ಭಾಗದಲ್ಲಿ ಉಕ್ಕಿ ಹರಿಯುತ್ತಿವೆ ನದಿಗಳು

8-belagavi

Belagavi: ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

belaHeavy Rain; Holiday announced for schools in four taluks of Belagavi district

Heavy Rain; ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.