ಸತೀಶ ಹಂತಕರಿಗೆ ಗಲ್ಲು ಶಿಕ್ಷೆಯಾಗಲಿ

ನ್ಯಾಯಯುತ ಹೋರಾಟ ನಡೆಸಿದ್ದಕ್ಕೆ ಹತ್ಯೆ: ಪತ್ನಿಯ ಆರೋಪ ; ಹಂತಕರ ವಿರುದ್ಧ ಗೌಂಡವಾಡ ಗ್ರಾಮಸ್ಥರ ಆಕ್ರೋಶ

Team Udayavani, Jun 23, 2022, 2:18 PM IST

13

ಬೆಳಗಾವಿ: ದೇವಸ್ಥಾನ ಜಾಗ ಕಬಳಿಸುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಸಿದ್ದ ಗೌಂಡವಾಡ ಗ್ರಾಮದ ಸತೀಶ ಪಾಟೀಲನನ್ನು ಕೊಲೆ ಮಾಡಿದ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ಸತೀಶ ಪಾಟೀಲನ ಪತ್ನಿ ಪೂಜಾ ಪಾಟೀಲ ಬಿಕ್ಕಿ ಬಿಕ್ಕಿ ಅತ್ತರು. ಸತೀಶನ ತಂದೆ, ತಾಯಿ, ಕುಟುಂಬಸ್ಥರು, ಸಂಬಂಧಿಕರು ಸೇರಿದಂತೆ ಗ್ರಾಸ್ಥರು ಅಪಾರ ಸಂಖ್ಯೆಯಲ್ಲಿ ಜಮಾಯಿಸಿ, ನ್ಯಾಯಯುತ ಹೋರಾಟ ನಡೆಸಿದ ನನ್ನ ಪತಿ ಸತೀಶನನ್ನು ದುರುಳರು ಕೊಲೆ ಮಾಡಿದ್ದಾರೆ. ನ್ಯಾಯ ಸಿಗಬೇಕಾದರೆ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ನನ್ನ ಪತಿಯನ್ನು ಸುರಕ್ಷಿತವಾಗಿ ತಂದು ಕೊಡಿ ಎಂದು ಆಗ್ರಹಿಸಿದರು.

ನನ್ನ ಪತಿ ದೇವಸ್ಥಾನದ ಜಾಗ ಉಳಿಸಲು ನ್ಯಾಯಯುತ ಹೋರಾಟ ನಡೆಸಿದ್ದಕ್ಕೆ ಕೊಲೆ ಮಾಡಲಾಗಿದೆ. ದೇವರ ಜಾಗದಲ್ಲಿ ಪ್ಲಾಟ್‌ ಹಾಕಿ ಹಣ ಗಳಿಸುವ ಹುನ್ನಾರ ನಡೆಸಿದ್ದರು. ಈ ಜಾಗ ದೇವಸ್ಥಾನಕ್ಕೇ ಸಿಗಬೇಕು ಎಂದು ಕಾನೂನು ಹೋರಾಟ ನಡೆಸಿದ್ದರು. ಸಮಾಜದ ಪರವಾಗಿ ನಿಂತ ನನ್ನ ಪತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಇದು ನ್ಯಾಯವೇ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು.

ಕೊಲೆ ಹಂತಕರನ್ನು ಸುಮ್ಮನೆ ಬಿಡಬಾರದು. ಗೌಂಡವಾಡ ಗ್ರಾಮದ ಶ್ರೇಯೋಭಿವೃದ್ಧಿಗಾಗಿ ಸದಾ ಕನವರಿಸುತ್ತಿದ್ದ ಸತೀಶ ಪಾಟೀಲ ಗ್ರಾಮದ ಆಶಾಕಿರಣವಾಗಿದ್ದರು. ನ್ಯಾಯಕ್ಕೆ ಬೆಲೆ ಇಲ್ಲ ಎಂಬುದು ಈಗ ಅರ್ಥವಾಗುತ್ತಿದೆ. ನ್ಯಾಯದ ಪರವಾಗಿ ಹೋರಾಟ ನಡೆಸಿದವರ ಕೊಲೆ ಆಗುತ್ತ ಹೋದರೆ ಸಮಾಜದಲ್ಲಿ ಪಾಪಿಗಳಿಗೆ ಪೊಲೀಸರ ಭಯ ಇಲ್ಲವಾದಂತಾಗುತ್ತದೆ. ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಸತೀಶ ಪಾಟೀಲ ಕುಟುಂಬಕ್ಕೆ ನ್ಯಾಯ ಒದಗಿಸಿ, ಕೊಲೆ ಹಂತಕರು ಹಾಗೂ ಜಾಗ ಕಬಳಿಸುತ್ತಿರುವವರಿಗೆ ಶಿಕ್ಷೆ ವಿಧಿಸಬೇಕು ಎಂದು ಗ್ರಾಮದ ಮಹಿಳೆಯರು ಆಗ್ರಹಿಸಿದರು.

ಸರ್ಕಾರ ಇದೆಯೋ ಇಲ್ಲವೋ ಎಂಬುದು ನಮಗೆ ತಿಳಿಯುತ್ತಿಲ್ಲ. ಸತೀಶ ಹಂತಕರಿಗೆ ಶಿಕ್ಷೆ ಆಗದಿದ್ದರೆ ಮುಂದೆ ಮತ್ತೆ ಇಂತಹ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಶ್ರೀ ಕಾಳಭೈರವನಾಥ, ಲಕ್ಷ್ಮೀ ಹಾಗೂ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ 27 ಎಕರೆ ಜಮೀನನ್ನು ಕಬಳಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಜಾಗಕ್ಕೆ ತಡೆಯಾಜ್ಞೆ ನೀಡಬೇಕು. ಕೊಲೆ ಮಾಡಿದ ಮುಖ್ಯ ಆರೋಪಿ ಓಡಾಡುತ್ತಿದ್ದು, ಈತನನ್ನು ಸೇರಿ ಒಟ್ಟು 25 ಜನರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ವಕೀಲರಾದ ಪ್ರಿಯಂಕಾ ರಾಜಗೋಳಕರ ಒತ್ತಾಯಿಸಿದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.