ರೈತರು ಆತ್ಮಹತ್ಯೆಗೆ ಶರಣಾಗದೆ ಇತರರಿಗೆ ಮಾದರಿಯಾಗಲಿ

ರಾಜ್ಯ ಮಟ್ಟದ ಜಾನಪದ ಮಹಾಸಮ್ಮೇಳನ ಸಮಾರೋಪ

Team Udayavani, Mar 25, 2022, 3:31 PM IST

15

ರಾಮದುರ್ಗ: ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಯನ್ನು ತಡೆಯಬಹುದಾಗಿದೆ ಎಂದು ಮಾಜಿ ಸಚಿವ ಶಶಿಕಾಂತ ನಾಯಕ ಹೇಳಿದರು.

ಪಟ್ಟಣದ ವಿದ್ಯಾಚೇತನ ಶಾಲಾ ಆವರಣದ ಈಶ್ವರ ಮಂಟೂರ ಮತ್ತು ಶಂಕರ ನಾಯಕ ವೇದಿಕೆಯಲ್ಲಿ ಅವರಾದಿ ಶಿವಪೇಟೆಯ ಓಂ ಶಿವ ಮೇಳದ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಜಾನಪದ ಮಹಾಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಕ್ಕೆ ಅನ್ನ ನೀಡುವ ರೈತ ಸಾಲದ ಶೂಲಕ್ಕೆ ಹೆದರಿ ಸಾಯುವ ಬದಲು ಜಾನಪದ ಸೊಗಡಿನ ಒಳಾರ್ಥವನ್ನು ಅರಿತು ಉತ್ತಮ ಬದುಕನ್ನು ಸಾಗಿಸಿ ಇತರರಿಗೆ ಮಾದರಿಯಾಗಬೇಕು ಎಂದು ಅವರು ರೈತರಿಗೆ ಕಿವಿಮಾತು ಹೇಳಿದರು.

ಜಾನಪದ ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯೆ ಲಕ್ಷ್ಮೀ ಆರಿಬೆಂಚಿ ಮಾತನಾಡಿ, ಮನುಷ್ಯನ ಹುಟ್ಟಿನಿಂದ ಸಾಯುವವರೆಗೂ ಜಾನಪದ ಜೊತೆಗೆ ನಂಟಿದೆ. ಆಧುನಿಕ ಯುಗದಲ್ಲಿ ಯುವಕರು ಜಾಪದದ ಹೆಸರಿನಲ್ಲಿ ಜನಪ್ರಿಯ ಗೀತೆಗಳಿಗೆ ಜೋತುಬಿದ್ದಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ, ಬೆಂಬಳಗಿ ಕಾಲೇಜು ಪ್ರಾಂಶುಪಾಲೆ ಡಾ| ರಾಜಶ್ರೀ ಗುದಗನವರ, ಪ್ರಾಧ್ಯಾಪಕ ಪ್ರೊ| ಎಸ್‌.ಎಂ. ಸಕ್ರಿ, ಮೀರಾ ಮೋಟೆ ಮಾತನಾಡಿದರು. ಜಾನಪದ ವಿದ್ವಾಂಸ ಪ್ರೊ| ಪಿ.ಎಲ್‌. ಮಿಸಾಳೆ ವಿಶೇಷ ಉಪನ್ಯಾಸ ನೀಡಿದರು. ನರೇಗಲ್ಲ ಸರಕಾರಿ ಕಾಲೇಜಿನ ಪ್ರಾದ್ಯಾಪಕ ಶಿವಮೂರ್ತಿ ಕುರೇರ ಪ್ರಾಸ್ತಾವಿಕ ಮಾತನಾಡಿದರು. ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜ ಶಿಗ್ಗಾಂವಿ, ಮುನವಳ್ಳಿಯ ತಾನಾಜಿ ಮುರಂಕರ ಮತ್ತು ಜಾನಪದ ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯೆ ಲಕ್ಷ್ಮೀ ಆರಿಬೆಂಚಿ ಅವರಿಗೆ ಜಾನಪದ ಶಿವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸಂಗಪ್ಪ ಹೂಗಾರ, ಪುಂಡಲೀಕ ನಡಗಡ್ಡಿ, ಚನ್ನಪ್ಪ ಮಾದರ, ಈರನಗೌಡ ಪಾಟೀಲ ಇತರರು ಇದ್ದರು. ಮಂಜುನಾಥ ಕೊಳದೂರ ಸ್ವಾಗತಿಸಿದರು. ರವಿ ಕಮ್ಮಾರ ನಿರೂಪಿಸಿದರು. ಕಲಾವಿದ ಸಿದ್ದು ಮೋಟೆ ವಂದಿಸಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.