ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ


Team Udayavani, Oct 9, 2020, 5:06 PM IST

ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ

ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎ.ಪಿ.ಎಂ.ಸಿ ಮತ್ತುಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ಕುರಿತು ವಿಚಾರ ಸಂಕೀರಣ ಕರ್ನಾಟಕ ನವ ನಿರ್ಮಾನ ಸೇನೆಯ ಮೂಡಲಗಿ ತಾಲೂಕಾ ಘಟಕ ಆಶ್ರಯದಲ್ಲಿ ನಾಗನೂರ ಅರ್ಬನ್‌ ಸೊಸೈಟಿ ಸಭಾ ಭವನದಲ್ಲಿ ಜರುಗಿತು.

ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಜಾರಿ ಆಗಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯು ಮಧ್ಯವರ್ತಿಗಳಿಂದ ಮುಕ್ತಗೊಳಿಸುವ ನೆಪದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಕಬ್ಬನ್ನು ಖಾಸಗಿ ಕಂಪನಿಗಳಿಗೆ ನೀಡಿ ರೈತರು ಅನುಭವಿಸುತ್ತಿರುವ ಗೋಳು ಕೇಳುವವರಿಲ್ಲ. ತಿದ್ದುಪಡಿ ಅನಿವಾರ್ಯವೇ ಆಗಿದ್ದರೆ ಬೆಳೆಯನ್ನು ಖರೀದಿಸುವ ಕಾರ್ಪೊರೇಟ್‌ ಕಂಪನಿಗಳ ಮೇಲೆ ಸರ್ಕಾರ ಪೂರ್ಣ ಹಿಡಿತ ಹೊಂದಿರಬೇಕು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವೇ ಸರಿ. ಕೃಷಿ ಹೆಸರಿನಲ್ಲಿ ಭೂಮಿಖರೀದಿಸುವ ಕಾರ್ಪೊರೇಟ್‌  ಕಂಪನಿಗಳು ಕಾಲಕ್ರಮೆಣ ಉದ್ಯಮಕ್ಕೆ ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿವೆ ಎಂದರು. ಮಲ್ಲಪ್ಪ ಮದಗುಣಕಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಮುಕ್ತರಾಗಿ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಕ್ಕಾನಟ್ಟಿ ಬರ್ಡ್ಸ ಸಂಸ್ಥೆಯ ಅಧ್ಯಕ್ಷ ಎ.ಆರ್‌ ಪಾಟೀಲ್‌ ಮಾತನಾಡಿ, ಕರ್ನಾಟಕ ನವನಿರ್ಮಾಣ ಸೇನೆಯ ಪ್ರಯತ್ನ ಶ್ಲಾಘಿಸಿ ಈ ಚರ್ಚೆಯನ್ನು ಸರ್ಕಾರಕ್ಕೆ ಮುಟ್ಟಿಸುವುದಾಗಿ ತಿಳಿಸಿದರು.

ಉಮೇಶ ಬೆಳಕೂಡ, ಬಿಜೆಪಿ ರೈತಮೋರ್ಚಾ ಅರಭಾಂವಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ ಮಾತನಾಡಿದರು.ಈಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ತಾಲೂಕು ಉಪಾಧ್ಯಕ್ಷ ಮಹಾಂತೇಶ ಮುಗಳಖೋಡ, ಪ್ರಧಾನ ಕಾರ್ಯದರ್ಶಿ ಶಾನೂರ ಕುರಬೇಟ, ಬಸವರಾಜ ನಾಯ್ಕ, ಶಿವಾನಂದ ಮೇಣಸಿ, ಸಾಗರ ಢವಳೇಶ್ವರ, ರಾಘವೇಂದ್ರ ಮುನ್ಯಾಳ, ಸುರೇಶ ಪಾಟೀಲ, ರೈತ ಮುಖಂಡ ಶ್ರೀಶೈಲ ಅಂಗಡಿ, ಮಂಜುನಾಥ ಗದಾಡಿ, ಈರಪ್ಪ ಇದ್ದರು.

 

 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.