ಧರ್ಮ-ಧರ್ಮಗಳಲ್ಲಿ ಸಾಮರಸ್ಯ ಸಾಧಿಸಿದ ಸಂತ


Team Udayavani, Dec 30, 2019, 12:16 PM IST

bg-tdy-2

ಬೆಳಗಾವಿ: ಉಡುಪಿಯ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ನಮ್ಮ ರಾಷ್ಟ್ರಕಂಡ ಅಪರೂಪದ ಸಂತರಾಗಿದ್ದರು. ಇಡೀ ರಾಷ್ಟ್ರದ ಜನರ ಮೇಲೆ ಅವರಷ್ಟು ಪ್ರಭಾವವನ್ನು ಬೀರಿದ ಸಂತರು ಬಹಳ ವಿರಳ. ಸಂಪ್ರದಾಯಬದ್ಧ ಮಠಾಧೀಶರಾಗಿದ್ದೂ ಅವರು ಪ್ರಗತಿಪರ ವಿಚಾರಧಾರೆಯನ್ನು ಮೈಗೂಡಿಸಿಕೊಂಡಿದ್ದರು ಎಂದು ಗದುಗಿನ ಜಗದ್ಗುರು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಕಂಬನಿ ಮಿಡಿದಿದ್ದಾರೆ.

ಸಂಪ್ರದಾಯಗಳನ್ನು ಮೀರಿ ಎಲ್ಲ ಸಮುದಾಯದ ಮಠಗಳಿಗೆ ಆಗಮಿಸಿ ಧರ್ಮ-ಧರ್ಮಗಳಲ್ಲಿ ಸಾಮರಸ್ಯವನ್ನು ಸಾಧಿಸುವ ನಿರಂತರ ಪ್ರಯತ್ನ ಅವರದಾಗಿತ್ತು. ರಾಷ್ಟ್ರದ ಸಮಗ್ರತೆ ಹಾಗೂ ಐಕ್ಯತೆಯ ವಿಷಯದಲ್ಲಿ ಅವರ ಕಾಳಜಿ ಅನನ್ಯ. ಹಾಗಾಗಿ ರಾಷ್ಟ್ರಸಂತರೆಂಬ ಅಭಿದಾನಕ್ಕೆ ಅವರು ಅನ್ವರ್ಥಕವಾಗಿದ್ದರು. ಇಂತಹ ಮಹಾನ್‌ ಸಂತರನ್ನು ಕಳೆದುಕೊಂಡ ನಮ್ಮ ರಾಷ್ಟ್ರವು ಬಡವಾದಂತಾಗಿದೆ. ಅವರ ಅಗಲುವಿಕೆಯ ನೋವು ನಮ್ಮನ್ನು ನಿರಂತರ ಬಾಧಿಸದೇ ಇರದು ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ್ವರ ತೀರ್ಥರ ಸಂಬಂಧವನ್ನು ಮೆಲುಕು ಹಾಕಿದ ಶ್ರೀಗಳು ಜಾತಿ ಮತ ಪಂಥಗಳ ಭೇದವಿಲ್ಲದೆ ಎಲ್ಲರನ್ನೂ ಪ್ರೀತಿಸುವ, ಸಮರಸಗೊಳಿಸುವ ಅವರ ಔದಾರ್ಯ ಇತರ ಮಠಾಧೀಶರಿಗೆ ಆದರ್ಶ ಪ್ರಾಯವಾದುದು ಎಂದಿದ್ದಾರೆ. ಇತರ ಸಂಪ್ರದಾಯಬದ್ಧ ಮಠಾಧೀಶರ ವಿರೋಧದ ಮಧ್ಯೆಯೂ ಅವರು ತಮ್ಮ ಸಂಪ್ರದಾಯವನ್ನು ಬದಿಗಿರಿಸಿ, ಪ್ರಪ್ರಥಮವಾಗಿ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀಮಠ ಮಾಡುತ್ತಿರುವ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡು ಪ್ರಶಂಸಿಸಿರುವುದು ಅವರು ಸದಾ ಒಳ್ಳೆಯದನ್ನು ಗೌರವಿಸುತ್ತಿದ್ದರು ಎಂಬುದಕ್ಕೆ ನಿದರ್ಶನವಾಗಿದೆ.

ಲಿಂಗಾಯತ ಮಠಗಳು ಮತ್ತು ಮಠಾಧೀಶರು ಬಸವಾದಿ ಶರಣರ ಕಾಯಕ-ದಾಸೋಹ-ಸಮಾನತೆಯ ತಣ್ತೀಗಳನ್ನು ಅಳವಡಿಸಿಕೊಂಡು ತಮ್ಮ ತಮ್ಮ ಮಠಗಳಲ್ಲಿ ಜಾತಿ ಮತ ಪಂಥ ಪ್ರದೇಶಗಳ ಭೇದವಿಲ್ಲದೆ ಬಡವಿದ್ಯಾರ್ಥಿಗಳಿಗೆ ಅನ್ನ-ಆಶ್ರಯ ನೀಡಿ ಶೈಕ್ಷಣಿಕ ಅಭಿವೃದ್ಧಿ ಸಾಧಿಸುತ್ತಿರುವುದನ್ನು ಅವರು ಬಹುವಾಗಿ ಮೆಚ್ಚಿಕೊಂಡಿದ್ದರು ಎಂದು ಗದಗದ ಶ್ರೀಗಳು ಸ್ಮರಿಸಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿರುವ ಈ ಕ್ರಮದಿಂದಾಗಿ ಲಿಂಗಾಯತ ಮಠಗಳು ದೇಶದ ಎಲ್ಲ ಮಠ-ಮಠಾಧೀಶರಿಗೆ ಮಾದರಿಯಾಗಿವೆ ಎಂದು ಅಭಿಮಾನದಿಂದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು.

ಹಿಂದೂ ಧರ್ಮದ ವರ್ಣಾಶ್ರಮ ಭೇದಗಳ ಮಧ್ಯೆಯೂ ಉಡುಪಿಯ ಪೇಜಾವರ ಮಠಾಧೀಶರು ದೇಶದ ಜನರ ಐಕ್ಯತೆ ಹಾಗೂ ಸಮಗ್ರತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ನಿರಂತರ ಶ್ರಮಿಸಿರುವುದನ್ನು ಈ ರಾಷ್ಟ್ರವು ಎಂದೂ ಮರೆಯಲು ಸಾಧ್ಯವಿಲ್ಲ. ಧರ್ಮದ ಸಂವಿಧಾನದ ಜೊತೆಗೆ ರಾಷ್ಟ್ರದ ಸಂವಿಧಾನವನ್ನು ಗೌರವಿಸಿ ರಾಷ್ಟ್ರ ದ ಜನತೆಗೆ ಉದಾತ್ತ ಸಂದೇಶ ನೀಡಿದ ಮಹಾನ್‌ ಸಂತರಾಗಿದ್ದರು ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ ಸ್ವಾಮೀಜಿ: ಅಷ್ಟ ಮಠಗಳಲ್ಲಿ ಒಂದಾದ ಉಡುಪಿಯ ಪೇಜಾವರ ಮಠದ 32ನೇ ಯತಿಯಾಗಿದ್ದ ವಿಶ್ವೇಶತೀರ್ಥ ಸ್ವಾಮೀಜಿಯ ಅಗಲಿಕೆಗೆ ಹುಕ್ಕೇರಿ ಹಿರೇಮಠದ ಚಂದ್ರಶೇಖರಶಿವಾಚಾರ್ಯ ಸ್ವಾಮೀಜಿ ಕಂಬನಿ ಮಿಡಿದಿದ್ದಾರೆ. ಅನುಕರಣಿಯ ಸಂತ, ಕ್ರಾಂತಿಕಾರಿ ಯತಿಯಾಗಿದ್ದ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಕೇವಲ ಬ್ರಾಹ್ಮಣ ಸಮುದಾಯದ ಸ್ವಾಮೀಜಿಯಾಗದೆ ಇಡೀ ವಿಶ್ವದ ಸಮುದಾಯ ಹಾಗೂ ವೀರಶೈವದವರೊಂದಿಗೂ ಅವಿನಾಭಾವ ಸಂಬಂಧ ಹೊಂದಿದ್ದಲ್ಲದೆ ಎಲ್ಲ ಸಮುದಾಯವನ್ನು ಪ್ರೀತಿಯಿಂದ ಕಾಣುವ ಅಪರೂಪದ ವ್ಯಕ್ತಿತ್ವ ಹೊಂದಿದ್ದ ಅವರ ಅಗಲಿಕೆಯಿಂದ ಕೋಟ್ಯಂತರ ಭಕ್ತರಲ್ಲಿ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ. ಸಾಮರಸ್ಯ ಸಹಬಾಳ್ವೆಯ ಪ್ರತೀಕವಾಗಿದ್ದ ಅವರು, ದೇಶ ಕಂಡ ಅಪರೂಪದ ಸಂತ.

ತಮ್ಮದೆಯಾದ ವಿಚಾರವನ್ನು ನಾಡಿನ ಜನತೆಗೆ ತಿಳಿಸುವ ಮೂಲಕ ಕೃಷ್ಣನ ಪ್ರೀತಿಗೆ ಪಾತ್ರರಾಗಿದ್ದರು. ಸಾಕಷ್ಟು ವಿದ್ಯಾರ್ಥಿಗಳಿಗೆ ತಮ್ಮ ಅಪಾರವಾದ ಜ್ಞಾನ ಕೊಟ್ಟ ಶ್ರೇಯ ಅವರಿಗೆ ಸಲ್ಲುತ್ತದೆ ಎಂದು ಹುಕ್ಕೇರಿ ಶ್ರೀಗಳು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.