ಗಡಿ ಭಾಗದ ಕನ್ನಡಿಗರ ಮೇಲೆ ಮಹಾ ಕಣ್ಣು

ಕನ್ನಡ ಬಳಸುವ ಹಳ್ಳಿಗಳ ಪಟ್ಟಿ ನೀಡಲು ಆದೇಶ, ಜತ್ತ ತಾಲೂಕು ಪಂಚಾಯ್ತಿಯಿಂದ ಗಡಿ ಗ್ರಾಪಂಗಳಿಗೆ ಪತ್ರ

Team Udayavani, Feb 21, 2021, 5:01 PM IST

ಗಡಿ ಭಾಗದ ಕನ್ನಡಿಗರ ಮೇಲೆ ಮಹಾ ಕಣ್ಣು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಕನ್ನಡಿಗರು ಮುಂಬೈ ಬೇಡಿಕೆ ಇಟ್ಟಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಫುಲ್‌ ಅಲರ್ಟ್‌ ಆಗಿದ್ದು, ಮರಾಠಿ ಹೊರತುಪಡಿಸಿ ಶೇ.50ರಷ್ಟು ಬೇರೆಭಾಷೆ ಬಳಕೆ ಆಗುತ್ತಿರುವ ಗಡಿ ಭಾಗದ ಹಳ್ಳಿಗಳ ಪಟ್ಟಿ ನೀಡುವಂತೆ ಆದೇಶಿಸಿದೆ.

ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಪಂವತಿಯಿಂದ ಎಲ್ಲ ಗ್ರಾಪಂಗಳಿಗೆ ಸೂಚನೆ ನೀಡಲಾಗಿದೆ.ಮರಾಠಿ ಬಿಟ್ಟು ಕನ್ನಡ ಭಾಷೆ ಬಳಕೆ ಆಗುತ್ತಿರುವ ಹಳ್ಳಿಗಳ ಮಾಹಿತಿಯನ್ನು ಲಿಖೀತ ರೂಪದಲ್ಲಿ ನೀಡುವಂತೆ ಆದೇಶಿದೆ. ಗಡಿ ಭಾಗದಲ್ಲಿ ಮರಾಠಿ ಭಾಷೆ ಪ್ರಚಾರಮಾಡಲು ಉಪವಿಭಾಗಾ ಧಿಕಾರಿಯಿಂದ ಆದೇಶಬಂದಿದ್ದು, ಹೀಗಾಗಿ ತಾಲೂಕಿನ ಪ್ರತಿ ಹಳ್ಳಿಗಳಲ್ಲಿ ಮರಾಠಿ ಹೊರತುಪಡಿಸಿ ಶೇ.50ಕ್ಕಿಂತ ಹೆಚ್ಚು ಇತರೆಭಾಷೆ ಬಳಕೆ ಆಗುತ್ತಿದ್ದರೆ, ಶಾಲೆಗಳಲ್ಲಿಯೂ ಇತರೆ ಭಾಷೆ ಬಳಸುತ್ತಿದ್ದರೆ  ಅಂಥ ಗ್ರಾಮಗಳ ಬಗ್ಗೆ ಮಾಹಿತಿ ನೀಡುವಂತೆ ತಾಪಂ ಸೂಚನೆ ನೀಡಿದೆ.

ಉದ್ಧವ ಉದ್ಧಟತನ: ತಿಂಗಳ ಹಿಂದೆಯಷ್ಟೇ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಕರ್ನಾಟಕದ ವಿರುದ್ಧವಿಷ ಕಾರಿದ್ದರು. ಗಡಿ ಭಾಗದ ಸಂಘರ್ಷದ ಬಗ್ಗೆ ಪುಸ್ತಕ ಬಿಡುಗಡೆ ಮಾಡಿದ್ದರು. ಜತೆಗೆ ಮರಾಠಿಗರ ಹೋರಾಟದ ಇತಿಹಾಸ ಸಾರುವ ಸಾಕ್ಷéಚಿತ್ರ ಬಿಡುಗಡೆಗೊಳಿಸಿ ವಿವಾದ ಸೃಷ್ಟಿಸಿದ್ದರು. ಈಗ ಮತ್ತೆ ದಾಖಲೆ, ಮಾಹಿತಿ ಕ್ರೋಡೀಕರಿಸಲು ಸಜ್ಜಾಗಿದ್ದಾರೆ. ಮಹಾರಾಷ್ಟ್ರದ ಜತ್ತ ತಾಲೂಕು ಬಹುತೇಕ ಕನ್ನಡ ಪ್ರದೇಶವಾಗಿದ್ದು, ಇಲ್ಲಿ ಹೆಚ್ಚಾಗಿ ಕನ್ನಡ ಬಳಕೆ ಆಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿದ್ದಾರೆ. ಈ ಭಾಗದಲ್ಲಿ ಕನ್ನಡ ಶಾಲೆಗಳೂ ಇವೆ. ಇಲ್ಲಿ ಕನ್ನಡ ಬಳಕೆ ಆಗುತ್ತಿರುವ ಬಗ್ಗೆ ಮಾಹಿತಿ ಕೇಳಲಾಗಿದೆ. ಇದನ್ನೇ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಗ್ರಾಪಂಗಳಿಗೆ ಪತ್ರ ಬರೆದು ಲಿಖೀತ ರೂಪದಲ್ಲಿ ವರದಿ ನೀಡುವಂತೆ ಜತ್ತ ತಾಪಂ ಆದೇಶಿಸಿದೆ.

ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾ ಸರ್ಕಾರ:

ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಕನ್ನಡ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪಮೊದಲಿನಿಂದಲೂ ಇದೆ. ಈಗ ಕನ್ನಡ ಬಳಸುತ್ತಿರುವಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ಮರಾಠಿ ಭಾಷೆ ಪ್ರಚಾರಕ್ಕಾಗಿ ಅಲ್ಲಿನ ಸರ್ಕಾರ ವರದಿ ಕೇಳಿದ್ದು ಕನ್ನಡಿಗರನ್ನು ಕೆರಳಿಸುವಂತೆ ಮಾಡಿದೆ. ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಅಲ್ಲಿನ ಸರ್ಕಾರ ತನ್ನ ಶಿವಸೇನೆಯ ಕಾರ್ಯಕರ್ತರನ್ನು ಬಿಟ್ಟಿತ್ತು. ಗಡಿಭಾಗದ ಶಿನೋಳಿ ಮೂಲಕ ದಾಟಿ ಬರುತ್ತಿದ್ದಾಗ ನಮ್ಮಪೊಲೀಸರು ತಡೆದು ಒಂದಿಂಚೂ ಒಳ ಬರದಂತೆ ಖಾಕಿ ಖದರ್‌ ತೋರಿಸಿದ್ದರು. ಒಂದು ತಿಂಗಳಿಂದಗಡಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಪೊಲೀಸರುನಿಗಾ ಇಟ್ಟಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಉಭಯ ರಾಜ್ಯದ ಪೊಲೀಸರು ಹಿಂದೆ ಸರಿದಿದ್ದಾರೆ.

ಸವದಿ ಏಟಿಗೆ ಕಂಗಾಲು: ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಾಡುತ್ತಿರುವುದನ್ನು ಸಹಿಸಿಕೊಳ್ಳಲು ಆಗದೇ ಮಹಾರಾಷ್ಟ್ರ ಸರ್ಕಾರ ನಡೆಸಿದ ಕಿತಾಪತಿಗೆ ತಿರುಗೇಟು ನೀಡಿದ್ದ ಡಿಸಿಎಂ ಲಕ್ಷ್ಮಣ ಸವದಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇನ್ನು ಮುಂದೆ ಮುಂಬೈ ಕರ್ನಾಟಕಕ್ಕೆ ಸೇರಿಸಿಕೊಳ್ಳಲುನಾವೆಲ್ಲರೂ ಹೋರಾಟ ನಡೆಸಬೇಕಾಗಿದೆ ಎಂದುಎಚ್ಚರಿಸಿದ್ದರು. ಇದೇ ಅಸ್ತ್ರವಾಗಿಟ್ಟುಕೊಂಡು ಗಡಿ ಭಾಗದ ಕನ್ನಡ ಪ್ರದೇಶಗಳ ಮೇಲೆ ಮಹಾ ಸರ್ಕಾರ ಕಣ್ಣಿಟ್ಟಿದೆ. ಕನ್ನಡ ಬಳಕೆ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗದ್ದಕ್ಕೆ ಬೇರೆಯವರ ತಟ್ಟೆಗೆ ಕೈ ಹಾಕುವ ಕೆಲಸ ಮಾಡುತ್ತಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.