ಬೇಸಿಗೆಯಲ್ಲಿ ಕೃಷ್ಣಾಗೆ ಮಹಾ ನೀರು


Team Udayavani, Mar 16, 2020, 3:29 PM IST

ಬೇಸಿಗೆಯಲ್ಲಿ ಕೃಷ್ಣಾಗೆ ಮಹಾ ನೀರು

ಚಿಕ್ಕೋಡಿ: ಬೇಸಿಗೆಯಲ್ಲಿ ಕೃಷ್ಣಾ, ವೇಧಗಂಗಾ ಮತ್ತು ದೂಧಗಂಗಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲ ಅವರ ಜೊತೆ ಸಮಾಲೋಚಿಸಿದ್ದು, ಬೇಸಿಗೆಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಅನುಕೂಲವಾಗಲು ಕೃಷ್ಣಾ ನದಿಗೆ ನೀರು ಹರಿಸುವ ಭರವಸೆ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಿಪ್ಪಾಣಿ ತಾಲೂಕಿನ ಕೊಗನ್ನೋಳ್ಳಿ ಗ್ರಾಮದಲ್ಲಿ ಬೋರಗಾಂವನ ಅರಿಹಂತ ಸೌಹಾರ್ದ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಸಿಕ್ಕಿರುವ ಜಲಸಂಪನ್ಮೂಲ ಖಾತೆಯ ಉಪಯೋಗ ಸಾಮಾನ್ಯ ರೈತನಿಗೂ ಆಗಬೇಕೆನ್ನುವ ಉದ್ದೇಶದಿಂದ ನಾನು ಈ ಖಾತೆ ಪಡೆದುಕೊಂಡಿದ್ದು, ಈ ಖಾತೆಯಲ್ಲಿ ಇರುವವರಿಗೂ ಪ್ರಾಮಾಣಿಕವಾಗಿ ಉತ್ತರ ಕರ್ನಾಟಕ ಹಾಗೂ ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ ಮಾಡಲಾಗುತ್ತದೆ ಎಂದರು.

ಚಿಕ್ಕೋಡಿ ತಾಲೂಕಿನ ಬಹುದಿನಗಳ ಬೇಡಿಕೆಯಾದ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ಶೀಘ್ರವಾಗಿ ಪೂರ್ಣಗೊಳಿಸಲಾಗುತ್ತದೆ. ಈ ಭಾಗದ ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಶೇಷ ಮಹತ್ವ ನೀಡಲಾಗಿದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ 18 ವಿಧಾನಸಭೆ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ವಿಶ್ವವನ್ನೇ ಆತಂಕದ ಕೂಪಕ್ಕೆ ತಳ್ಳಿರುವ ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲೂ ಭಯದ ವಾತಾವರಣ ಸೃಷ್ಟಿಸಿದ್ದು, ಸೋಂಕಿಗೆ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ. ನಾಗರಿಕರು ಸೋಂಕು ಬಗ್ಗೆ ಜಾಗೃತಿ ವಹಿಸಬೇಕು ಎಂದರು.

ಸಚಿವ ಶ್ರೀಮಂತ ಪಾಟೀಲ, ಸಹಕಾರ ಧುರೀಣ ರಾವಸಾಹೇಬ ಪಾಟೀಲ, ಶಾಸಕ ಗಣೇಶ ಹುಕ್ಕೇರಿ, ಮಹೇಶ ಕುಮಟಳ್ಳಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಅಭಿನಂದನ ಪಾಟೀಲ, ಮಾಜಿ ಶಾಸಕ ಸುಭಾಷ ಜೋಶಿ, ಲಕ್ಷ್ಮಣರಾವ ಚಿಂಗಳೆ, ಜಿಪಂ ಸದಸ್ಯ ರಾಜೇಂದ್ರ ಪವಾರ, ಅಮೋಲ ನಾಯಿಕ್‌, ಸುಜಯ ಪಾಟೀಲ, ಚಂದ್ರಕಾಂತ ಕೋಠಿವಾಲೆ, ವಿಶ್ವನಾಥ ಕಮತೆ, ಅಶೋಕಕುಮಾರ ಅಸೂದೆ,ರಾಜೇಶ ಕದಂ, ಮುಖಂಡ ಉತ್ತಮ ಪಾಟೀಲ ಸೇರಿದಂತೆ ಇತರರು ಇದ್ದರು. ಉತ್ತಮ ಪಾಟೀಲ ಸ್ವಾಗತಿಸಿದರು. ವಿಠಲ ಕೋಳೆಕರ ನಿರೂಪಿಸಿದರು. ಉಮೇಶ ಪಾಟೀಲ ವಂದಿಸಿದರು

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಂಥಪಾಲಕರಿಗೆ ತಾಂತ್ರಿಕ ಪರಿಣತಿ ಮುಖ್ಯ: ಪ್ರೊ| ಕರಿಸಿದ್ದಪ್ಪ

1-dk

ಯಾರು ಮುಳುಗುತ್ತಿದ್ದಾರೆ? ಬಿಜೆಪಿಗೆ ಡಿ.ಕೆ. ಶಿವಕುಮಾರ್ ಪ್ರಶ್ನೆ

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

16growers

ತೊಗರಿ ಬೆಳೆಗಾರರ ಸಹಾಯಕ್ಕೆ ಧಾವಿಸಿ

15bjp

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.