ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆ; ಸಚಿವ ಗೋವಿಂದ ಕಾರಜೋಳ

ಮಹಿಳೆಯರ ಅನುಕೂಲಕ್ಕಾಗಿ ಈಗಾಗಲೇ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ

Team Udayavani, Mar 14, 2022, 6:01 PM IST

ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆ

ರಾಮದುರ್ಗ: ಮಹಿಳಾ ಸಬಲೀಕರಣ ಉದ್ದೆಶದೊಂದಿಗೆ ಸರಕಾರ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಗುಂಪುಗಳನ್ನು ಮಾಡಿ, ಮಹಿಳೆಯರನ್ನು ಸಂಘಟಿಸುವ ಮೂಲಕ ಅವರನ್ನು ಆರ್ಥಿಕವಾಗಿ ಬಲಗೊಳಿಸುವ ಕಾರ್ಯ ಮಾಡುತ್ತಿದೆ ಎಂದು ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಪಟ್ಟಣದ ಬಸವೇಶ್ವರ ಕಾಲೇಜು ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತನಗೆ ಎಷ್ಟೇ ಕಷ್ಟಗಳು ಬಂದರೂ ಇಡೀ ಕುಟುಂಬ ಸದಸ್ಯರ ಆಗುಹೋಗುಗಳನ್ನು ನೋಡಿಕೊಳ್ಳುವ ಮಹಿಳೆಯನ್ನು ಇನ್ನೂ ಸಮಾಜದ ಮುಖ್ಯವಾಹಿನಿಗೆ ತರಲು ಪುರುಷ ಸಮಾಜ ಬಿಡದೆ ಇರುವದು ಅತ್ಯಂತ ಖೇದಕರ. 900 ವರ್ಷಗಳಿಂದ ಇದನ್ನೇ ರೂಢಿಸಿಕೊಂಡು ಬರುತ್ತಿರುವ ಸಮಾಜದಲ್ಲಿ ಅದನ್ನು ಬದಲಾಯಿಸುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ರಾಜ್ಯ ಸರಕಾರ ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಹೇಳಿದರು.

ಮೋದಿ ಅವರು ಮಾತೃವಂದನ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರಾಜ್ಯ ಸರಕಾರವು ಭಾಗ್ಯಲಕ್ಷ್ಮಿ ಯೋಜನೆ, ಸಾಧನೆ ಮಾಡಿದವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಸದೃಢ ಪಡಿಸುತ್ತಿದೆ. ಅಲ್ಲದೆ ರಾಜ್ಯದಲ್ಲಿ 16 ಸಾವಿರ ಸ್ತ್ರೀಶಕ್ತಿ ಸಂಘದಿಂದ 167 ಕೋಟಿ ಕೋಟಿ ಹಣ ಉಳಿತಾಯ ಮಾಡಿ ಸಾಧನೆ ಮಾಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಕೌಟುಂಬಿಕ ಕಲಹಗಳಿಂದ ಹಿಂಸೆ ಅನುಭವಿಸಿದ ಮಹಿಳೆಯ ರಕ್ಷಣೆಗೆ ಸರಕಾರ ಹೊಸ ಕಾನೂನುಗಳನ್ನು ಜಾರಿಗೆ ತಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ತಾಲೂಕಿನ 137 ಹಳ್ಳಿಗೆ ನವೀಲು ತೀರ್ಥ ಜಲಾಶಯದಿಂದ ನಿರಂತರ ಶುದ್ಧ ಕುಡಿಯುವ ನೀರು ಪೂರೈಸುವ ರೂ. 340 ಕೋಟಿ ಯೋಜನೆಯ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿರುವುದಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರನ್ನು ಅಭಿನಂದಿಸಿದರು. ಮಹಿಳೆಯರ ಅನುಕೂಲಕ್ಕಾಗಿ ಈಗಾಗಲೇ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು
ತಿಳಿಸಿದರು.

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ, ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ, ಉಪ ವಿಭಾಗಾಧಿ ಕಾರಿ ಶಶಿಧರ ಬಗಲಿ, ಎಸ್‌. ಎಸ್‌. ಢವನ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಶಾಂತಯ್ಯ ಅರುಟಗಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಹಾದೇವಿ ರೊಟ್ಟಿ, ಬಿ.ಎಂ. ತುಪ್ಪದ, ತಾ.ಪಂ ಇಒ ಪ್ರವೀಣಕುಮಾರ ಸಾಲಿ, ಸಿಡಿಪಿಓ ಸಿಂಗಾರೆವ್ವ ವಂಟಮೂರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ವಿವಿಧ ಮಹಿಳಾ ತಂಡಗಳಿಂದ ಭಜನೆ ಹಾಗೂ ಸಂಗೀತ, ಮಕ್ಕಳಿಂದ ಸಾಂಸðತಿಕ ಕಾರ್ಯಕ್ರಮ ಹಾಗೂ ಮಹಿಳಾ ತಂಡದಿಂದ ದೀಪ ನೃತ್ಯ, ಲಂಬಾಣಿ ತಾಂಡಾದ ಮಹಿಳಾ ಸದಸ್ಯರಿಂದ ಸಾಂಪ್ರದಾಯಿಕ ಲಂಬಾಣಿ ನೃತ್ಯ ನಡೆದವು.

ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್‌ ವಿತರಣೆ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಪ್ರಾಸ್ತಾವಿಕ ಮಾತನಾಡಿದರು. ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಸ್ವಾಗತಿಸಿದರು. ಚಂದ್ರು ಕಲ್ಲೂರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.