ರಸ್ತೆ ತಡೆದು ರೈತರ ಬೃಹತ್‌ ಪ್ರತಿಭಟನೆ

ಅಧಿಕಾರಿಗಳ ಮನವೊಲಿಕೆ: ಧರಣಿ ಹಿಂದಕ್ಕೆ•ರಾಜಕಾರಣಿಗಳು ಜನರ ಸಮಸ್ಯೆಗೆ ಸ್ಪಂದಿಸಲಿ

Team Udayavani, May 7, 2019, 12:03 PM IST

belegavi-3-tdy..

ಅಥಣಿ: ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಚಿಕ್ಕೋಡಿ ಎ.ಸಿ. ಗೆಣ್ಣೂರ ಅವರಿಗೆ ಮನವಿ ಸಲ್ಲಿಸಲಾಯಿತು.

ಅಥಣಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಒತ್ತಾಯಿಸಿ ರೈತ ಸಂಘಟನೆ ನೇತೃತ್ವದಲ್ಲಿ ಸಾವಿರಾರು ರೈತರು ದರೂರ ಹಲ್ಯಾಳ ಬಳಿ ಕೃಷ್ಣಾ ನದಿ ಸೇತುವೆ ಮೇಲೆ ಸೋಮವಾರ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯನ್ನು ಸುಮಾರು ನಾಲ್ಕು ಗಂಟೆಗಳ ಕಾಲ ತಡೆದು ಬೃಹತ್‌ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ಐದು ದಿನಗಳಿಂದ ರೈತ ಸಂಘಟನೆ ತಾಲೂಕು ಅಧ್ಯಕ್ಷ ಮಹಾದೇವ ಮಡಿವಾಳ ನೇತೃತ್ವದಲ್ಲಿ ನಡೆದ ಅಹೋರಾತ್ರಿ ಧರಣಿಯನ್ನು ಚಿಕ್ಕೋಡಿ ಎ.ಸಿ. ಸೋಮಲಿಂಗ ಗೆಣ್ಣೂರ ಹಾಗೂ ಅಥಣಿ ತಹಶೀಲ್ದಾರ್‌ ಎಂ.ಎನ್‌. ಬಳಿಗಾರ ರೈತರ ಮನವೊಲಿಸಿದ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರದ ಮನವೊಲಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಶೀಘ್ರ ಕೃಷ್ಣಾ ನದಿಗೆ ನೀರು ಹರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಆಶ್ವಾಸನೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.

ಎರಡು ತಿಂಗಳಿಂದ ಕೃಷ್ಣಾ ನದಿ ಬತ್ತಿ ಬರಿದಾಗಿದೆ. ಇದರಿಂದಾಗಿ ನದಿ ಪಾತ್ರದ ಜನ ಹಾಗೂ ತಾಲೂಕಿನ ಜನ ಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಇನ್ನು ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡುತ್ತೇವೆ. ಕೃಷ್ಣಾ ನದಿಗೆ ನೀರನ್ನು ಹರಿಸದೇ ಹೋದರೆ ರೈತ ಸಂಘದಿಂದ ಆಮರಣ ಉಪವಾಸ ಕೈಗೊಳ್ಳುವ ಮೂಲಕ ಅಥಣಿ ತಾಲೂಕು ಬಂದ್‌ ಕರೆ ನೀಡಲಾಗುವುದು ಎಂದು ರೈತ ಸಂಘಟನೆ ತಾಲೂಕು ಅಧ್ಯಕ್ಷ ಮಹಾದೇವ ಮಡಿವಾಳ ಎಚ್ಚರಿಸಿದರು.

ಈ ವೇಳೆ ಶಿವಬಸವ ಸ್ವಾಮೀಜಿ ಮಾತನಾಡಿ, ಹಸಿವನ್ನು ಬಲ್ಲವನೇ ಕಷ್ಟ ಏನೆಂದು ಅರಿತಿರುತ್ತಾನೆ. ಆದ್ದರಿಂದ ರಾಜಕಾರಣಿಗಳು ರೆಸಾರ್ಟ್‌ ರಾಜಕಾರಣ ಬಿಟ್ಟು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವಂತಾಗಬೇಕು. ಚುನಾವಣೆ ಬಂದಾಗ ಮಾತ್ರ ರೈತ ಹಾಗೂ ಜನಪರ ಮಾತು ಆಡುವುದನ್ನು ಬಿಟ್ಟು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದರು.

ಇದೇ ವೇಳೆ ಚಿಕ್ಕೋಡಿ ಜಿಲ್ಲಾ ಎ.ಸಿ. ಸೋಮಲಿಂಗ ಗೆಣ್ಣೂರ ಮಾತನಾಡಿ, ಈಗಾಗಲೇ ಕೊಯ್ನಾದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮೂರು ಬಾರಿ ಸರ್ಕಾರದ ಮಟ್ಟದಲ್ಲಿ ಮನವಿ ಸಲ್ಲಿಸಲಾಗಿದೆ. ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಇದ್ದ ಕಡೆ ಮೂರು ತಾಲೂಕಿನಲ್ಲಿ ಸುಮಾರು 64 ಗ್ರಾಮಗಳಿಗೆ 88 ಟ್ಯಾಂಕರ್‌ ಮೂಲಕ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮತ್ತು ದನಕರುಗಳಿಗೆ ಅಗತ್ಯಕ್ಕೆ ತಕ್ಕಂತೆ ಮೇವು ಬ್ಯಾಂಕ್‌ ತೆರೆಯಲಾಗಿದೆ ಎಂದರು.

ನೀರಿಗಾಗಿ ರೈತರು ರಾಜ್ಯ ಹೆದ್ದಾರಿಯನ್ನು ನಾಲ್ಕು ಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಿದ್ದರಿಂದ ಎರಡೂ ಬದಿಗೆ ಸುಮಾರು ನಾಲ್ಕು ಕಿ.ಮೀ. ವರೆಗೆ ವಾಹನಗಳು ನಿಂತು ಯಾತ್ರಿಕರು, ಗ್ರಾಮಸ್ಥರು ಹಾಗೂ ಮಹಿಳೆಯರು ತುಂಬ ಪರದಾಡುವಂತಾಯಿತು. ವಾಹನ ಚಾಲಕರು ಪ್ರಯಾಣಿಕರು ವಾಹನಗಳಿಂದ ಇಳಿದು ಬತ್ತಿದ ನದಿಯಲ್ಲಿ ಹಾಯ್ದು ಮುಂದಿನ ಪ್ರಯಾಣ ಬೆಳೆಸುವುದು ಸಾಮಾನ್ಯವಾಗಿತ್ತು.

ರೈತರು ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ನದಿಇಂಗಳಗಾಂವ ಸಿದ್ದಲಿಂಗ ಸ್ವಾಮೀಜಿ, ಶೆಟ್ಟರ ಮಠದ ಮರುಳಸಿದ್ದ ಸ್ವಾಮೀಜಿ, ಹಲ್ಲಾಳ ಶ್ರೀಗಳು ಬೆಂಬಲ ಸೂಚಿಸಿದರು. ನದಿ ಇಂಗಳಗಾಂವ ಹಾಗೂ ಹಲ್ಯಾಳ ಮಠದಿಂದ ಹೋರಾಟ ನಿರತ ರೈತರಿಗೆ ಅನ್ನ ದಾಸೋಹ ನೆರವೇರಿಸಲಾಯಿತು.

ಅಥಣಿ ತಹಶೀಲ್ದಾರ್‌ ಎಂ.ಎನ್‌. ಬಳಿಗಾರ, ಡಿವೈಎಸ್‌ಪಿ ಬಸರಗಿ, ಕುಮಾರ ಮಡಿವಾಳ, ಸತೀಶ ಕುಲಕರ್ಣಿ, ರವಿ ಗಾಣಗೇರ, ಜಗನಾಥ ಬಾಮನೆ, ಅಣ್ಣಾಸಾಬ ತೆಲಸಂಗ, ಮೋದಿನ ಮೋಳೆ ಇದ್ದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

police

Belgavi;ಗೋ ಸಾಗಾಟ ಲಾರಿ ತಡೆದ ಹಿಂದೂ ಕಾರ್ಯಕರ್ತರು: ಬಿಗುವಿನ ವಾತಾವರಣ

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.