ಕುಮಟಳ್ಳಿ ವಿರುದ್ಧ ಬೃಹತ್‌ ಪ್ರತಿಭಟನೆ

Team Udayavani, Jul 13, 2019, 10:23 AM IST

bg-tdy-3..

•ಶಾಸಕರ ನಿವಾಸದೆದುರು ಧರಣಿಗೆ ಅವಕಾಶ ನಿರಾಕರಣೆ•ರಾಜೀನಾಮೆ ಹಿಂಪಡೆಯಲು ಮನವಿ

ಅಥಣಿ: ಕಾಂಗ್ರೆಸ್‌ ಮೇಲೆ ವಿಶ್ವಾಸ ಇಟ್ಟು ಅಥಣಿ ಮತಕ್ಷೇತ್ರದ ಮತದಾರರು ವಿಧಾನ ಸಭಾ ಚುನಾವಣೆಯಲ್ಲಿ ನಿಮ್ಮನ್ನು ಬೆಂಬಲಿಸಿ ಶಾಸಕರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ್ದು, ಅವರ ಭಾವನೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ ಎಂದು ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಮನವಿ ಮಾಡಿದರು.

ಅಥಣಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಶಾಸಕ ಮಹೇಶ ಕುಮಟಳ್ಳಿ ನಿಲುವು ಹಾಗೂ ಆಪರೇಶನ್‌ ಕಮಲ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಕಳೆದ 15 ವರ್ಷಗಳ ಬಿಜೆಪಿ ಆಡಳಿತದಿಂದ ಬೇಸತ್ತ ಮತದಾರರು ಬದಲಾವಣೆ ಬಯಸಿ ಕಾಂಗ್ರೆಸ್‌ ಪಕ್ಷ ಬೆಂಬಲಿಸಿದ್ದಾರೆ. ಮತದಾರರು ತಿರಸ್ಕರಿಸಿದ್ದ ಬಿಜೆಪಿಯ ಆಪರೇಶನ್‌ಗೆ ಶಾಸಕರು ಬಲಿಯಾಗುತ್ತಿರುವುದು ಕ್ಷೇತ್ರದ ಮತದಾರರಿಗೆ ಮೋಸ ಮಾಡಿದಂತಾಗಿದೆ ಎಂದ ಅವರು, ಇನ್ನೂ ಸಮಯ ಮಿಂಚಿಲ್ಲ. ಇಂದೇ ನಿಮ್ಮ ತಪ್ಪಿನ ಅರಿವು ಮಾಡಿಕೊಂಡು ರಾಜಿನಾಮೆ ಹಿಂಪಡೆದು ಜನರ ಸೇವೆಗೆ ಮುಂದಾಗಿ ಎಂದು ಸಲಹೆ ನೀಡಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಮಾತನಾಡಿ, ಕಾಂಗ್ರೆಸ್‌ ಮೇಲೆ ವಿಶ್ವಾಸ ಇಟ್ಟು ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದುಡಿಯುವ ವರ್ಗದವರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದಾರೆ. ಇದರಿಂದ ಶಾಸಕರಾಗುವ ಸೌಭಾಗ್ಯ ಕೂಡ ದೇವರು ನಿಮಗೆ ದಯಪಾಲಿಸಿದ್ದಾನೆ. ಈ ಅವಕಾಶ ಸದುಪಯೋಗ ಮಾಡಿಕೊಂಡು ಜನರ ಸೇವೆಗೆ ಮುಂದಾಗಿ ಜನರ ಋಣ ತೀರಿಸಿ ಎಂದು ಸಲಹೆ ಮಾಡಿದ ಅವರು, ಕಾಂಗ್ರೆಸ್‌ ಪಕ್ಷದ ಅಥವಾ ಮೈತ್ರಿ ಸರಕಾರದ ಮೇಲೆ ಅಸಮಾಧಾನ ಇದ್ದಲ್ಲಿ ಅದನ್ನು ವರಿಷ್ಠರ ಗಮನಕ್ಕೆ ತಂದು ಬಗೆ ಹರಿಸಿಕೊಳ್ಳಿ ಆದರೆ ಇದನ್ನು ಬಿಟ್ಟು ರಾಜೀನಾಮೆಗೆ ಮುಂದಾಗಿರುವುದು ಖೇದಕರ ಸಂಗತಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಥಣಿ ಸಿ.ಪಿ.ಐ. ಎಚ್. ಶೇಖರಪ್ಪ ಅವರ ನೇತೃತ್ವದಲ್ಲಿ ಶಾಸಕ ಮಹೇಶ ಕುಮಟ‌ಳ್ಳಿ ಅವರ ನಿವಾಸಕ್ಕೆ ಹೋಗುವ ಮಾರ್ಗದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ಏರ್ಪಡಿಸಿದ್ದರು.

ಇದೇ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮ್ಮಣರಾವ ಚಿಂಗಳೆ, ಕಾಂಗ್ರೆಸ್‌ ಮುಖಂಡರಾದ ಗಜಾನನ ಮಂಗಸೂಳಿ, ಸತ್ಯಪ್ಪಾ ಬಾಗೆಣ್ಣವರ, ಸುನೀಲ ಸಂಕ, ಅರ್ಶದ ಗದ್ಯಾಳ, ಶ್ರೀಶೈಲ ಹಳ್ಳದಮಳ, ನಿಶಾಂತ ದಳವಾಯಿ, ಅನಿಲ ಸುಣಧೋಳಿ ಅಸ್ಲಂ ನಾಲಬಂದ, ಮಾಂತೇಶ ಬಾಡಗಿ, ಶಬ್ಬೀರ ಸಾಥಬಚ್ಚೆ, ಶಶಿ ಸಾಳವಿ ಸುಂದರ ಸೌಧಾಗರ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಶಾಸಕ ಮಹೇಶ ಕುಮಟಳ್ಳಿ ಮನೆ ಮುಂದೆ ಧರಣಿಗೆ ಪೊಲೀಸರು ಅವಕಾಶ ನಿರಾಕರಿಸಿದಾಗ ಅರ್ಧ ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತರು ಜೇವರ್ಗಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.