ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ


Team Udayavani, Aug 10, 2022, 3:18 PM IST

tdy-10

ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ  ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು ಬೇರೆ ಕಡೆ ಇದ್ದಾಗಲೂ ಅಂತಹ ಖಾಲಿ ಮನೆಗಳು ಬಿದ್ದರೂ ಕೂಡ ಅಂತಹ ಕುಟುಂಬಗಳಿಗೂ ಮನೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದರು.

ವಿದ್ಯುತ್ ಸಂಪರ್ಕ ಕಡಿತಗೊಂಡರೆ ಕೂಡಲೇ ಸಂಪರ್ಕ ಕಲ್ಪಿಸಬೇಕು.  ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕುಟುಂಬಗಳು ಹೊಂದಿರುವ ಹಳೆಯ ನಳಗಳ ಸಂಪರ್ಕವನ್ನು ಮುಂದುವರಿಸಬೇಕು.  ಜಲಜೀವನ ಮಿಷನ್ ಯೋಜನೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕವೇ ಹಳೆಯ ಸಂಪರ್ಕ ತೆರವುಗೊಳಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಪ್ರವೀಣ್‌ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್‌ ಕುಮಾರ್‌

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಳ್ಳಾರಿ ನಾಲಾ ನಿರ್ವಹಣೆಯನ್ನು ಪಾಲಿಕೆ ಹಾಗೂ ಉಳಿದ ಕಡೆಗಳಲ್ಲಿ ನೀರಾವರಿ ಇಲಾಖೆಯ ವತಿಯಿಂದ ನಿರ್ವಹಿಸಬೇಕು ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ 35 ಕಿ.ಮೀ. ಹರಿವು ಇರುತ್ತದೆ. ಅದನ್ನು ನಿರ್ವಹಿಸಲು  ಪಾಲಿಕೆ ಕ್ರಮ ಕೈಗೊಳ್ಳಬೇಕು. ನಾಲಾ ಅಕ್ಕಪಕ್ಕದ ಮನೆಗಳಿಗೆ ಹಾಗೂ ಬೆಳೆಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.

ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಅನುಕೂಲವಾಗುವಂತೆ ಸಮಗ್ರ ಯೋಜನಾ ವರದಿ(ಡಿಪಿಆರ್) ರೂಪಿಸುವಂತೆ ಸೂಚನೆ ನೀಡಿದ ಅವರು, ನಾಲಾ ವ್ಯಾಪ್ತಿಯ ರೈತರನ್ನು ಭೇಟಿ ಮಾಡಿ ಅವರ ಮನವೊಲಿಸುವ ಮೂಲಕ ಬದುಗಳಲ್ಲಿ ನಿಲ್ಲುವ ನೀರು ನಾಲಾಕ್ಕೆ ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ 255 ಕೋಟಿ ಹಾನಿ: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಒಟ್ಟಾರೆ 255 ಕೋಟಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಹಾನಿಯ ಕುರಿತು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಆಗಸ್ಟ್ 12 ರಿಂದ 15 ರವರೆಗೆ ದೇಶದಾದ್ಯಂತ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕು ಎಂದು  ಹೇಳಿದ ಗೋವಿಂದ ಕಾರಜೋಳ

ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಬಹುತೇಕ ಮನೆಗಳ ಮೇಲೆ ನಾಗರಿಕರು ಸ್ವಯಂಪ್ರೇರಣೆಯಿಂದ ಧ್ವಜಾರೋಹಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ಸಹಕಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಶೇ.75 ರಷ್ಟು ಮನೆಗಳಿಗೆ ಧ್ವಜಗಳನ್ನು ಪೂರೈಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ   ಜಿಲ್ಲೆಯಲ್ಲಿ ಹತ್ತು ಲಕ್ಷ ಮನೆಗಳಿದ್ದು, ಅದರ ಶೇ.75 ರಷ್ಟು ಮನೆಗಳಿಗೆ ಧ್ವಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಗೆ 4.83  ಲಕ್ಷ ಧ್ವಜಗಳು ಈಗಾಗಲೇ ಬಂದಿರುತ್ತವೆ. ಅವುಗಳ ಪೈಕಿ 3.50 ಲಕ್ಷಕ್ಕೂ ಅಧಿಕ ಧ್ವಜಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ಹೇಳಿದರು.

ಬೆಳಗಾವಿ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ

ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.