ದೇಶದ ಚಿತ್ರಣ ಬದಲಿಸಿದ ಮೋದಿ

Team Udayavani, Apr 9, 2019, 12:39 PM IST

bel-2
ಚಿಕ್ಕೋಡಿ: ಪ್ರಧಾನಿ ಮೋದಿಯವರು ತಮ್ಮ ಆಡಳಿತಾವಧಿ ಯಲ್ಲಿ ಇಡಿ ದೇಶದ ಚಿತ್ರಣವನ್ನೆ ಬದಲಾಯಿಸಿದ್ದಾರೆ. ಅಲ್ಲದೇ ಭ್ರಷ್ಟಾಚಾರರಹಿತ ಆಡಳಿತ ನಡೆಸಿದ್ದಾರೆ. ಆದ್ದರಿಂದ ಮತದಾರರು ದೇಶ ಅಭಿವೃದ್ಧಿಗೆ ಮೋದಿ ಕೈ ಬಲ ಪಡಿಸಬೇಕು ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪ್ರಚಾರಾರ್ಥವಾಗಿ ನಿಪ್ಪಾಣಿ ನಿಸಿಪಲ್‌ ಪ್ರೌಢಶಾಲೆಯ ಮೈದಾನದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯಸಭೆ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ಕಳೆದ ಐದು ವರ್ಷಗಳಿಂದ ಒಂದು ದಿನ ರಜೆ ಪಡೆಯದೆ, ದಿನದಲ್ಲಿ 18 ಗಂಟೆ ಅವಿರತವಾಗಿ ದೇಶದ ಸೇವೆಗೈಯುತ್ತಿರುವ ಏಕಮೇವ ಪ್ರಧಾನಿ ನರೇಂದ್ರ ಮೋದಿಯವರು ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿಯಾಗಿದ್ದಾರೆ.
ಅವರು ಜಾರಿಗೆ ತಂದ ಯೋಜನೆಗಳಲ್ಲಿ ಉಜ್ವಲಾ ಗ್ಯಾಸ್‌ ಯೋಜನೆಯಡಿಯಲ್ಲಿ ಕೇವಲ ಸ್ಥಳೀಯ ಕ್ಷೇತ್ರ ಸುಮಾರು 6 ಸಾವಿರಕ್ಕೂ ಅಧಿಕ ಬಡ ಮಹಿಳೆಯರಿಗೆ ಪ್ರಯೋಜನವಾಗಿದೆ. ಅವರ ಎಲ್ಲ ಯೋಜನೆಗಳು ಜನಪರವಾಗಿವೆ. ಮತದಾರರು ಅಣ್ಣಾಸಾಹೇಬ ಜೊಲ್ಲೆಗೆ ಬಹುಮತಗಳಿಂದ ಗೆಲ್ಲಿಸಿ ನರೇಂದ್ರ ಮೋದಿಯವರನ್ನು
ಮತ್ತೂಮ್ಮೆ ಪ್ರಧಾನಿಯಾಗಲು ಎಲ್ಲರೂ ಪರಿಶ್ರಮ ವಹಿಸಬೇಕು ಎಂದರು.
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಯಾವುದೇ ಕ್ಷೇತ್ರವಾಗಲಿ, ಯಾವುದೇ ವಿಷಯವಾಗಲಿ ಅದನ್ನು ನಿಭಾಯಿಸಿಕೊಂಡು ಹೋಗುವ ಕಲೆ ಜೊಲ್ಲೆ ದಂಪತಿಯಲ್ಲಿದೆ. ಅವರನ್ನು ಬಹುಮತಗಳಿಂದ ಗೆಲ್ಲಿಸಿ ಪ್ರಧಾನಿ ಮೋದಿಜಿಯವರ ಕೈ ಬಲಪಡಿಸೋಣ ಎಂದರು.
ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರಮನ್‌ ಚಂದ್ರಕಾಂತ ಕೋಠಿವಾಲೆ, ಶಾಸಕ ಪಿ. ರಾಜೀವ್‌, ದುರ್ಯೋಧನ ಐಹೊಳೆ, ಬಿಜೆಪಿ ಗ್ರಾಮೀಣ ಅಧ್ಯಕ್ಷ ನ್ಯಾಯವಾದಿ ಸಂಜಯ ಶಿಂತ್ರೆ, ಬಾಳಾಸಾಹೇಬ ಪವಾರ, ಆನಂದ ಯಾದವ, ನಗರಸಭೆ ಸದಸ್ಯೆ ಸೋನಲ್‌ ಕೋಠಡಿಯಾ, ರಾಜ ಪಠಾಣ, ಮೊದಲಾದವರು ಮಾತನಾಡಿದರು.
ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಶಿಕಾಂತ ನಾಯಿಕ, ಮಾಜಿ ಶಾಸಕ ಬಾಳಾಸಾಹೇಬ ವಡ್ಡರ, ಎಂ.ಪಿ. ಪಾಟೀಲ, ಪಪ್ಪು ಪಾಟೀಲ, ಅವಿನಾಶ ಪಾಟೀಲ, ಸುಮಿತ್ರಾ ಉಗಳೆ, ಮತ್ತಿತರರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ, ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.