8ರಿಂದ ಮೋಟಗಿಮಠದ ಶರಣ ಸಂಸ್ಕೃತಿ ಉತ್ಸವ

Team Udayavani, Dec 23, 2019, 12:09 PM IST

bg-tdy-3

ಅಥಣಿ: ಲಿಂ. ಚನ್ನಬಸವ ಶಿವಯೋಗಿಗಳ 95ನೇ ಸ್ಮರಣೋತ್ಸವ ಅಂಗವಾಗಿ ಮೋಟಗಿ ಮಠದಿಂದ ಶರಣ ಸಂಸ್ಕೃತಿ ಉತ್ಸವ ಜ.8ರಿಂದ 10ರ ವರೆಗೆ ಆಚರಿಸಲಾಗುವುದು ಎಂದು ಮೋಟಗಿ ಮಠದ ಪೀಠಾಧ್ಯಕ್ಷ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದರು.

ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ ಆವರಣದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಬಸವಭೂಷಣ ಪ್ರಶಸ್ತಿಯನ್ನು ಕೊಡಲಿದ್ದು, ಕಳೆದ ವರ್ಷ ಕೊಡಬೇಕಾಗಿದ್ದ ಪ್ರಶಸ್ತಿಯನ್ನು ಸಿದ್ಧಗಂಗಾ ಸ್ವಾಮೀಜಿ ನಿಧನದ ಹಿನ್ನೆಲೆ ಕೊಡಲಾಗಿರಲಿಲ್ಲ. ಅದಕ್ಕಾಗಿ 2019ರ ಬಸವಭೂಷಣ ಪ್ರಶಸ್ತಿಯನ್ನು ಶಿವಾನಂದ ಜಮಾದಾರ ಅವರಿಗೆ ಹಾಗೂ ಈ ಸಾಲಿನ ಬಸವಭೂಷಣ ಪ್ರಶಸ್ತಿಯನ್ನು ಭಾಲ್ಕಿಯ ಡಾ| ಬಸವಲಿಂಗ ಪಟ್ಟದೇವರಿಗೆ ನೀಡಲಿದ್ದೇವೆ ಎಂದರು.

8ರಂದು ಮುಕ್ತಾಯಿ ಮಹಿಳಾ ಸಮಾವೇಶ ಬೆಳಗ್ಗೆ 11ಗಂಟೆಗೆ ಜರುಗುವುದು. ಈ ಸಮಾವೇಶವನ್ನು ಶಾಸಕರಾದ ಮಹೇಶ ಕುಮಟಳ್ಳಿ ಉದ್ಘಾಟಿಸುವರು. ಸಭೆಯ ನೇತೃತ್ವನ್ನು ಮಾಜಿ ಸಚಿವೆ ಲೀಲಾದೇವಿಪ್ರಸಾದ, ಡಾ| ಅಕ್ಕಗಂಗಾಂಬಿಕಾ ತಾಯಿ ಬಸವ ಕಲ್ಯಾಣ ವಹಿಸುವರು. ಮಹಿಳೆಯರನ್ನು ಕುರಿತು ಡಾ| ಮೈತ್ರೇಯಿಣಿ ಗದ್ದಿಗೆಪ್ಪಗೌಡರ ಮಾತನಾಡಲಿದ್ದಾರೆ. ಸಮಾರಂಭದ ಸಾನ್ನಿಧ್ಯವನ್ನು ಶಿವಾನಂದ ಸ್ವಾಮೀಜಿ, ಡಾ| ಅಲ್ಲಮ್ಮಪ್ರಭು ಸ್ವಾಮೀಜಿ ಅಧ್ಯಕ್ಷತೆ ವಹಿಸುವರು ಎಂದರು.

9ರಂದು ಬೆಳಗ್ಗೆ 11ಗಂಟೆಗೆ ಗುರುಬಸವೇಶ್ವರ ವಿದ್ಯಾ ವಿಕಾಸ ಸಂಸ್ಥೆಯ ಪ್ರೌಢಶಾಲೆಗೆ ಮಾತ್ರೋಶ್ರೀ ಶಿವಗಂಗಮ್ಮ ಗುರಮೂರ್ತಯ್ಯ ಹಿರೇಮಠ ಇವರ ನಾಮಕರಣ ಮಾಡಲಾಗುವುದು. ಡಿಸಿಎಂ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸುವರು. ನಾಮಫಲಕ ಅನಾವರಣವನ್ನು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

10ರಂದು ಬೆಳಗ್ಗೆ ವಚನ ಪಲ್ಲಕ್ಕಿ ಉತ್ಸವ. ಸಂಜೆ 6 ಗಂಟೆಗೆ ಗುರುಗಳ ಸಂಸ್ಮರಣೆ, ಮತ್ತು ಭಾವೈಕ್ಯ ಬೆಳದಿಂಗಳೂ, ಕಾರ್ಯಕ್ರಮ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಸೋಮಲಿಂಗಗೌಡಾ ಪಾಟೀಲ, ಪ್ರಕಾಶ ಮಹಾಜನ, ರಮೇಶಗೌಡಾ ಪಾಟೀಲ, ಪ್ರಕಾಶ ಪಾಟೀಲ (ಹುಲಗಬಾಳಿ), ಎಲ್‌.ವಿ. ಕುಲಕರ್ಣಿ , ಅನಿಲ ಸುಣದೋಳಿ ಉಪಸ್ಥಿತಿರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.