ಮೂಡಲಗಿ: ನಿಸ್ವಾರ್ಥದ್ದು ನಿಜವಾದ ಸಮಾಜ ಸೇವೆ: ಶೇಖ್‌

ಸಮಾಜದಲ್ಲಿ ಬೆರೆಯುವುದನ್ನು ಕಲಿಸಿಕೊಡುತ್ತದೆ

Team Udayavani, Jul 6, 2023, 11:40 AM IST

Udayavani Kannada Newspaper

ಮೂಡಲಗಿ: ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆ ನಿಜವಾದ ಸಮಾಜ ಸೇವೆ ಎಂದು ಕೆಸರಗೊಪ್ಪ ಸರ್ಕಾರಿ ಪಪೂ ಕಾಲೇಜು ಪ್ರಾಚಾರ್ಯ ಪ್ರೊ| ಎಸ್‌.ಎಂ. ಶೇಖ್‌ ಹೇಳಿದರು. ಇಲ್ಲಿಯ ಎಮ್‌.ಇ.ಎಸ್‌ ಕಲಾ ಹಾಗೂ ವಾಣಿಜ್ಯ
ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್‌ ಕ್ಲಬ್‌ ಮೂಡಲಗಿ ಪರಿವಾರದ 2023-24ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಮಾಡುವ ಸಮಾಜ ಸೇವೆಯು ಜನರಿಗೆ ಅಗತ್ಯವಾಗಿರಬೇಕು ಮತ್ತು ಜನರ ಹೃದಯದಲ್ಲಿ ಉಳಿಯುವಂತೆ ಇರಬೇಕು ಎಂದರು.

ದೇಶದಲ್ಲಿ ಕೇವಲ ಸಂವಿಧಾನದ ಹಕ್ಕುಗಳನ್ನು ಪಡೆಯುವುದಕ್ಕೆ ಬದ್ಧತೆ ಇರಬಾರದು. ದೇಶಕ್ಕಾಗಿ ಮಾಡಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಹ ಪ್ರಾಮಾಣಿಕವಾಗಿ ಮಾಡುವ ಮೂಲಕ ಸಮಾಜ ಮತ್ತು ದೇಶದ ಹಿತ ಕಾಯುವಂತಾಗಬೇಕು
ಎಂದರು.

ಲಯನ್ಸ್‌ ಕ್ಲಬ್‌ ನಿಸ್ವಾರ್ಥದಿಂದ ಸಮಾಜ ಸೇವೆ ಮಾಡುವ ಜಗತ್ತಿನ ಬಹುದೊಡ್ಡ ಸೇವಾ ಸಂಸ್ಥೆಯಾಗಿದೆ. ಮೂಡಲಗಿ ಲಯನ್ಸ್‌
ಪರಿವಾರದವರು ಕಳೆದ 8 ವರ್ಷಗಳಿಂದ ಸಮಾಜಕ್ಕಾಗಿ ಮಾಡಿರುವ ಕಾರ್ಯಗಳು ಶ್ಲಾಘನೀಯ ಎಂದರು.

ಜಮಖಂಡಿಯ ಡಾ| ರಂಗಣ್ಣ ಎನ್‌. ಸೋನವಾಲಕರ ಮಾತನಾಡಿ, ಜೀವನದಲ್ಲಿ ಕೇವಲ ಹಣ ಗಳಿಕೆ, ಅಧಿ ಕಾರ ಮುಖ್ಯವಲ್ಲ.
ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವ ಮೂಲಕ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ಲಯನ್ಸ್‌ ಕ್ಲಬ್‌ ಸಂಘಟನೆ, ಒಗ್ಗಟ್ಟು ಹಾಗೂ ಸಮಾಜದಲ್ಲಿ ಬೆರೆಯುವುದನ್ನು ಕಲಿಸಿಕೊಡುತ್ತದೆ ಎಂದರು.

2023-24ನೇ ಸಾಲಿಗೆ ಅಧ್ಯಕ್ಷರಾಗಿರುವ ಶ್ರೀಶೈಲ ಲೋಕನ್ನವರ, ಕಾರ್ಯದರ್ಶಿ ಸುಪ್ರೀತ ಸೋನವಾಲಕರ, ಖಜಾಂಚಿಯಾಗಿರುವ ಕೃಷ್ಣಾ ಕೆಂಪಸತ್ತಿ ಹಾಗೂ ಉಳಿದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ನಿರ್ಗಮಿತ ಅಧ್ಯಕ್ಷ ಡಾ| ಎಸ್‌.ಎಸ್‌. ಪಾಟೀಲ, ನಿಕಟಪೂರ್ವ ಅಧ್ಯಕ್ಷ ಬಾಲಶೇಖರ ಬಂದಿ, ಕಾರ್ಯದರ್ಶಿ ಸಂಗಮೇಶ ಕೌಜಲಗಿ, ಖಜಾಂಚಿ ಶಿವಬೋಧ ಯರಝರ್ವಿ ವೇದಿಕೆಯಲ್ಲಿದ್ದರು. ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅನ್ನದಾಸೋಹ ಸೇವೆಗೈದ ದಾನಿಗಳನ್ನು ಸನ್ಮಾನಿಸಲಾಯಿತು.

ಸಮಾರಂಭದ ಪೂರ್ವದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ವೆಂಕಟೇಶ ಸೋನವಾಲಕರ, ಡಾ| ಪ್ರಕಾಶ ನಿಡಗುಂದಿ, ಎನ್‌.ಟಿ. ಪಿರೋಜಿ, ಪುಲಕೇಶ ಸೋನವಾಲಕರ, ಸುರೇಂದ್ರ ಆದಪ್ಪಗೋಳ, ದುಂಡಪ್ಪ ಕಂಕಣವಾಡಿ, ಡಾ. ಮಲ್ಲಿಕಾರ್ಜುನ ಹಿರೇಮಠ, ವಿಶಾಲ ಶೀಲವಂತ, ಪ್ರಮೋದ ಪಾಟೀಲ, ಅಪ್ಪಣ್ಣ ಬಡಿಗೇರ, ಶಿವಬಸು ಈಟಿ, ಡಾ. ಸಚಿನ ಟಿ, ಡಾ. ಯಲ್ಲಾಲಿಂಗ ಮಳವಾಡ, ರಾಜಕುಮಾರ ವಾಲಿ, ವೀರಭದ್ರ ಜಕಾತಿ, ಮಹಾಂತೇಶ ಹೊಸೂರ, ಶಿವಾನಂದ ಗಾಡವಿ, ಗಿರೀಶ ಆಸಂಗಿ, ಸುರೇಶ ನಾವಿ, ಸಂದೀಪ ಸೋನವಾಲಕರ, ಇತರರಿದ್ದರು. ಪವಿತ್ರಾ
ಕೊಣ್ಣೂರ ಪ್ರಾರ್ಥಿಸಿದರು.

ಡಾ| ತಿಮ್ಮಣ್ಣ ಗಿರಡ್ಡಿ, ಡಾ| ಸಂಜಯ ಶಿಂದಿ ಹಟ್ಟಿ ಪರಿಚಯಿಸಿದರು. ಡಾ. ಎಸ್‌.ಎಸ್‌. ಪಾಟೀಲ ಸ್ವಾಗತಿಸಿದರು. ಶಿವಾನಂದ
ಕಿತ್ತೂರ, ಮಹಾವೀರ ಸಲ್ಲಾಗೋಳ, ಸೋಮಶೇಖರ ಹಿರೇಮಠ ನಿರೂಪಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.