ತಡರಾತ್ರಿ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ: ಮೂವರ ದುರ್ಮರಣ

Team Udayavani, Dec 8, 2019, 11:47 AM IST

ಬೆಳಗಾವಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಮೂವರು ​ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ನಂದಿಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಇಲ್ಲಿನ ಕೇದನೂರು ಗ್ರಾಮದ ಕಲ್ಮೇಶ್ವರ ಗಲ್ಲಿಯ ನಿವಾಸಿಗಳಾದ ಸಂಜು ರಾಜಾಯಿ (29) ಸಂಭಾಜಿಗಲ್ಲಿಯ ಪ್ರಕಾಶ ಚಡಣಿ (27) ಪ್ರಭುದೇವಗಲ್ಲಿಯ ಅಡಿವೆಪ್ಪಾ ಗುಜ್ಜನವರ (39) ಮೃತಪಟ್ಟವರು.

ಮೂವರು  ನಿನ್ನೆ ತಡರಾತ್ರಿ ಭತ್ತದ ಒಕ್ಕಲು ಮುಗಿಸಿ ಒಂದೇ ಬೈಕ್ ನಲ್ಲಿ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭರಡೆ ಡಾಬಾ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಂತಿತ್ತು. ಲಾರಿ ನಿಂತಿರುವುದು ಬೈಕ್​ ಸವಾರರಿಗೆ ಕಾಣಿಸದೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ