ಕೋವಿಡ್ 19 ಕಷ್ಟದಲ್ಲೂ ವರವಾದ ಉದ್ಯೋಗ ಖಾತ್ರಿ


Team Udayavani, Apr 22, 2020, 4:54 PM IST

ಕೋವಿಡ್ 19 ಕಷ್ಟದಲ್ಲೂ  ವರವಾದ ಉದ್ಯೋಗ ಖಾತ್ರಿ

ಸಾಂದರ್ಭಿಕ ಚಿತ್ರ

ಬೆಳಗಾವಿ: ಕಳೆದ ಸುಮಾರು ಎರಡು ತಿಂಗಳಿಂದ ಎಲ್ಲ ಕಡೆ  ಕೋವಿಡ್ 19 ಮಾತು ಬಿಟ್ಟರೆ ಬೇರೆ ಚರ್ಚೆ, ಬೆಳವಣಿಗೆ ಇಲ್ಲವೇ ಇಲ್ಲ. ಮಹಾಮಾರಿಯಾಗಿ ಪರಿಣಮಿಸಿರುವ ಈ ವೈರಸ್‌ ಉದ್ಯೋಗ, ಶಿಕ್ಷಣ, ಕೈಗಾರಿಕೆ, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಉದ್ಯೋಗವಿಲ್ಲದೆ ಕೈಕಟ್ಟಿ ಕುಳಿತಿದ್ದಾರೆ. ಲಾಕ್‌ಡೌನ್‌ ಆದೇಶ ಎಲ್ಲವನ್ನೂ ಅಯೋಮಯ ಮಾಡಿದೆ.

ಮೊದಲು ನೆರೆ ಹಾವಳಿಯಿಂದ ಅಪಾರ ನಷ್ಟ ಅನುಭವಿಸಿದ್ದ ಜನರಿಗೆ ಈಗ ಕೋವಿಡ್ 19  ವೈರಸ್‌ ಶಾಪವಾಗಿ ಬಂದಿದೆ. ಎಲ್ಲ ಇದ್ದರೂ ಅನುಭವಿಸುವಂತಿಲ್ಲ. ಇದಕ್ಕೆ ಬೆಳಗಾವಿ ಜಿಲ್ಲೆ ಹೊರತಾಗಿಲ್ಲ. ಕೋವಿಡ್ 19 ವೈರಸ್‌ ಹಾವಳಿ ತಡೆಗಟ್ಟಲು ಸರ್ಕಾರ ಜಾರಿಗೆ ತಂದಿರುವ ಲಾಕ್‌ ಡೌನ್‌ ಆದೇಶ ಸಾಕಷ್ಟು ಸಮಸ್ಯೆ ಉಂಟು ಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ಕೈಯಲ್ಲಿ ಕೆಲಸವಿಲ್ಲದೆ ಕಂಗೆಟ್ಟ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬಹು ದೊಡ್ಡ ಆಸರೆಯಾಗಿದೆ. ಅನೇಕರ ಜೀವನದಲ್ಲಿ ಆಶಾಕಿರಣವಾಗಿ ಗೋಚರಿಸಿದೆ.

ಕೆಲಸ ಇಲ್ಲ ಎಂದು ಜನರು ಆತಂಕ ಪಡಬಾರದೆಂಬ ಉದ್ದೇಶದಿಂದ ಜಿಲ್ಲೆಯಲ್ಲಿ ಕಳೆದ ಏ.2ರಿಂದ ಉದ್ಯೋಗ ಖಾತ್ರಿ ಯೋಜನೆ ಕಾರ್ಯ ಆರಂಭಿಸಲಾಗಿದೆ. ಸೋಂಕು ಹರಡುವ ಭೀತಿ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ವೈಯಕ್ತಿಕ ಕೆಲಸಗಳಿಗೆ ಹೆಚ್ಚು ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಪ್ರತಿಜ್ಞಾವಿಧಿ ಬೋಧನೆ: ಲಾಕ್‌ಡೌನ್‌ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ವರದಾನವಾಗಿದೆ. ಕೆಲಸ ಆರಂಭಿಸುವ ಮೊದಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಸ್ಯಾನಿಟೈಸರ್‌ದಿಂದ ತೊಳೆದುಕೊಳ್ಳಬೇಕು ಎಂದು ತಿಳಿವಳಿಕೆ ಮೂಡಿಸಿ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ. ಸುರಕ್ಷತೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳುವಂತೆ ಗ್ರಾಪಂಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂಬುದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಕೆ.ವಿ ಹೇಳಿಕೆ.

ಈಗ ಬೇಡಿಕೆಗಳು ಇರುವ ಕಡೆ ಉದ್ಯೋಗ ಖಾತ್ರಿ ಯೋಜನೆ ಆರಂಭಿಸಲಾಗಿದೆ. ದಿನಕ್ಕೆ ನಿಗದಿಪಡಿಸಲಾಗಿದ್ದ ಕೂಲಿ ಹಣವನ್ನು 275 ರೂ. ಗಳಿಗೆ ಹೆಚ್ಚಿಸಲಾಗಿದೆ. ಕೆಲಸಕ್ಕೆ ಬರುವ ಎಲ್ಲ ಜನರಿಗೆ ಕೋವಿಡ್ 19  ವೈರಸ್‌ ಹರಡದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಾಗೂ ಮಾಸ್ಕ್ ಧರಿಸುವ ಬಗ್ಗೆ ನಿಗಾವಹಿಸಬೇಕು ಎಂದು ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಿಇಒ ರಾಜೇಂದ್ರ ಹೇಳಿದರು.

ಈ ಮೊದಲು ನಗರ ಪ್ರದೇಶಗಳಿಗೆ ಹೋಗಿದ್ದ ಗ್ರಾಮಗಳ ಬಹಳಷ್ಟು ಜನರು ಮರಳಿ ಊರಿಗೆ ಬಂದಿದ್ದಾರೆ. ಅವರಿಗೂ ಕೆಲಸದ ಅಗತ್ಯವಿದೆ. ಗ್ರಾಮಕ್ಕೆ ಬಂದವರಿಗೆ ಒಂದು ವೇಳೆ ಜಾಬ್‌ ಕಾರ್ಡ್‌ ಇಲ್ಲದಿದ್ದರೆ ಅವರು ಅದೇ ಊರಿನವರಾಗಿದ್ದರೆ ಹೊಸದಾಗಿ ಕಾರ್ಡ್‌ ವಿತರಿಸಲು ಕ್ರಮವಹಿಸಲಾಗಿದೆ. ಇದುವರೆಗೆ 548 ಜನರಿಗೆ ಹೊಸ ಜಾಬ್‌ ಕಾರ್ಡ್‌ ಕೊಡಲಾಗಿದೆ ಎಂಬುದು ಅಧಿಕಾರಿಗಳ ಹೇಳಿಕೆ.

ಖಾತ್ರಿ ಯೋಜನೆಯಡಿ ಈಗ ಜಿಲ್ಲೆಯಲ್ಲಿ ವೈಯಕ್ತಿಕ ಕಾಮಗಾರಿಗಳ ಜೊತೆಗೆ ಕೆರೆಗಳ ಹೂಳೆತ್ತುವುದು, ನಾಲಾಗಳ ಹೂಳೆತ್ತುವಿಕೆ. ಬದುವು-ಕೃಷಿ ಹೊಂಡಗಳ ನಿರ್ಮಾಣ, ಅರಣ್ಯ ಇಲಾಖೆಯಿಂದ ಸಸಿ ನೆಡಲು ಗುಂಡಿಗಳ ನಿರ್ಮಾಣ, ಕುರಿದೊಡ್ಡಿ, ದನದ ಕೊಟ್ಟಿಗೆಗಳನಿರ್ಮಾಣ, ತೋಟಗಾರಿಕೆ ಸಂಬಂಧಿಸಿದಂತೆ ರೈತರು ತಮ್ಮ ಹೊಲಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ನಡೆದಿರುವ ಎಲ್ಲ ಕಡೆ ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೆ 24980 ಜನರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಅವರೆಲ್ಲರಿಗೆ ಕೆಲಸದ ಆದೇಶ ನೀಡಲಾಗಿದೆ. ಇದುವರೆಗೆ 10194 ಕುಟುಂಬಗಳ 15283 ಜನರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಈ ಎಲ್ಲ ಕುಟುಂಬಗಳಿಗೆ ಪ್ರತಿ ದಿನ 275 ರೂ. ಕೂಲಿ ಮೊತ್ತದಂತೆ ಒಟ್ಟು 3.52 ಕೋಟಿ ರೂ. ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಇದುವರೆಗೆ 1,13,123 ಮಾನವ ದಿನ ಸೃಜಿಸಲಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ (ಅಭಿವೃದ್ಧಿ) ಎಸ್‌.ಬಿ. ಮುಳ್ಳಳ್ಳಿ ಹೇಳಿದರು.

ಕೆರೆಗಳ ಹೂಳೆತ್ತುವ ಸಂದರ್ಭದಲ್ಲಿ 4-5 ಜನರು ಮಾತ್ರ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ. ವೈಯಕ್ತಿಕ ಕಾಮಗಾರಿ, ಕೃಷಿ ಹೊಂಡ, ಬದುವು ನಿರ್ಮಾಣ, ನಾಲಾ ಹೂಳೆತ್ತುವ ಕಾಮಗಾರಿಗಳು ಆದ್ಯತೆ ಮೇಲೆ ನಡೆದಿವೆ. ಸದ್ಯ ಕೋವಿಡ್ 19  ವೈರಸ್‌ ಖಚಿತ ಪಟ್ಟಿರುವ ಪ್ರದೇಶಗಳ ಗ್ರಾಪಂ ವ್ಯಾಪ್ತಿಯಲ್ಲಿ ಮಾತ್ರ ಉದ್ಯೋಗ ಖಾತ್ರಿ ಕೆಲಸಗಳು ನಡೆದಿಲ್ಲ. –ರಾಜೇಂದ್ರ ಕೆ.ವಿ ಜಿಪಂ ಸಿಇಒ

 

-ಕೇಶವ ಆದಿ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.