ಬೆಳಗಾವಿಯಲ್ಲಿ ಎರಡನೇ ದಿನವೂ 500ರ ಗಡಿ ದಾಟಿದ ಪಾಸಿಟಿವ್ ಪ್ರಕರಣ
Team Udayavani, Apr 30, 2021, 8:23 PM IST
ಬೆಳಗಾವಿ: ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದ್ದು, ಒಟ್ಟು 514 ಮಂದಿಗೆ ಸೋಂಕು ತಗುಲಿದ ವರದಿಯಾಗಿದೆ.
ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದ್ದು, ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿ ಆಗುತ್ತಿವೆ. ಗುರುವಾರವೂ 500ಕ್ಕಿಂತಲೂ ಹೆಚ್ಚು ಜನರಿಗೆ ಸೋಂಕು ತಗುಲಿತ್ತು. ಶುಕ್ರವಾರವೂ ಹೆಚ್ಚು ಪಾಸಿಟಿವ್ ವರದಿ ಬಂದಿದ್ದರಿಂದ ಸಕ್ರಿಯ ಪ್ರಕರಣದಲ್ಲಿ ಏರಿಕೆ ಆಗಿದೆ.
ಬೆಳಗಾವಿ ನಗರದವೊಂದರಲ್ಲಿಯೇ ಶುಕ್ರವಾರ 273 ಮಂದಿಗೆ ಸೋಂಕು ತಗುಲಿದೆ. ಅಥಣಿ 28, ಬೈಲಹೊಂಗಲ 57, ಚಿಕ್ಕೋಡಿ 21, ಗೋಕಾಕ 40, ಹುಕ್ಕೇರಿ 24, ಖಾನಾಪುರ 11, ರಾಮದುರ್ಗ 10, ರಾಯಬಾಗ 15, ಸವದತ್ತಿ 23 ಸೇರಿ ಒಟ್ಟು 514 ಜನರಿಗೆ ಸೋಂಕು ತಗುಲಿದಂತಾಗಿದೆ.
ಜಿಲ್ಲೆಯಲ್ಲಿ ಈವರೆಗೆ 32495 ಜನರಿಗೆ ಸೋಂಕು ತಗುಲಿದಂತಾಗಿದೆ. ಈಗ 3054 ಸಕ್ರಿಯ ಪ್ರಕರಣಗಳು ಇವೆ. ಇನ್ನೂ 7558 ಜನರ ವರದಿ ಬರುವುದು ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
ವೇತನ ಹೆಚ್ಚಳ ಬೇಡಿಕೆ; ಮಾರ್ಚ್ 24ರ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ