3 ಕಾಲೇಜಿಗೆ ಹೊಸ ಪರೀಕ್ಷಾ ಕೇಂದ್ರ ಅನುಮತಿ

Team Udayavani, Nov 24, 2019, 12:06 PM IST

bg-tdy-1

ಬೆಳಗಾವಿ: ಮೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಬೆಳಗಾವಿ ಜಿಲ್ಲೆಯ ಮೂರು ಕಾಲೇಜುಗಳಿಗೆ ಹೊಸದಾಗಿ ಪರೀಕ್ಷಾ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ ಎಂದು ಕುಲಪತಿ ಪ್ರೊ| ಎಂ. ರಾಮಚಂದ್ರಗೌಡ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆ ಚಿಕ್ಕೋಡಿ ತಾಲೂಕಿನ ಅಂಕಲಿ, ಜೊಲ್ಲೆ ಶಿಕ್ಷಣ ಸಂಸ್ಥೆಯ ನಿಪ್ಪಾಣಿ ಹಾಗೂ ಗೋಕಾಕದ ಎನ್‌ಎಸ್‌ಎಫ್‌ನ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಹೊಸದಾಗಿ ಪರೀಕ್ಷಾ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ ಎಂದರು. ಕಾಲೇಜಿನ ಪ್ರಾಚಾರ್ಯರು ಹಾಗೂ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಪರೀಕ್ಷೆಗಳಲ್ಲಿ ನಕಲು ಮಾಡುವ ವಿವಿ ವ್ಯಾಪ್ತಿಯಲ್ಲಿನ 40ಕ್ಕೂ ಅಧಿಕ ಕಾಲೇಜುಗಳನ್ನು ಈಗಾಗಲೇ ಗುರುತಿಸಿದ್ದಾರೆ. ಇದಲ್ಲದೆ ಐದಾರು ಕಾಲೇಜುಗಳಿಗೆ ತಾವು ಹಾಗೂ ಕುಲಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡಲು ಸಹಕರಿಸುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿವಿಗೆ ಶಾಶ್ವತ ಜಾಗದ ಸಮಸ್ಯೆ: ಒಂದು ವಿಶ್ವವಿದ್ಯಾಲಯವು ಸಮರ್ಥವಾಗಿ ಕಾರ್ಯನಿರ್ವಹಿಸಲು ಕನಿಷ್ಠ 500 ಎಕರೆ ಜಾಗಬೇಕು. ಆದರೆ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿವಿಗೆ 100 ಎಕರೆ ಮಾತ್ರ ಜಾಗವಿದೆ. ಅದೂ ಸಹ ಕೇಂದ್ರ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ವಿವಿಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಯಾವುದೇ ಒಂದು ಕಾಮಗಾರಿ ಆರಂಭಿಸಲು ಅರಣ್ಯ ಇಲಾಖೆಯ ಅನುಮತಿ ಬೇಕು. ಈ ಹಿನ್ನೆಲೆಯಲ್ಲಿ ಬೇರೆ ಕಡೆಗೆ ವಿವಿಗೆ ಭೂಮಿ ಗುರುತಿಸಲಾಗಿದೆ.  ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಬಳಿ 127 ಸರ್ಕಾರಿ ಭೂಮಿ ಇದೆ. ಇದಲ್ಲದೆ ಅಲ್ಲಿನ ರೈತರು 90 ಎಕರೆ ಭೂಮಿ ನೀಡಲು ಮುಚ್ಚಳಿಕೆ ಪತ್ರ ನೀಡಿದ್ದಾರೆ ಎಂದು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಜಾಗದ ಕೊರತೆಯಿಂದ ಸದ್ಯ 19 ವಿವಿಧ ವಿಭಾಗಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. 50ಕ್ಕೂ ಅಧಿಕ ವಿವಿಧ ವಿಷಯಗಳ ಕುರಿತು ವಿಭಾಗಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದರು.

ವಿವಿ ಸ್ಥಳಾಂತರದ ಬಗ್ಗೆ ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಲಪತಿಗಳು, ವಿವಿ ಸ್ಥಳಾಂತರ ವಿಚಾರವಾಗಿ ಜಿಲ್ಲಾಧಿಕಾರಿಗಳು ಸ್ಥಳ ಗುರುತಿಸುವಂತೆ ಹೇಳಿದ್ದರು. ಅದರಂತೆ ನಾವು ಜಾಗ ಗುರುತಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದೇವೆ. ಸರ್ಕಾರಕ್ಕೆ ಜಾಗದ ಕುರಿತು ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ರೈತರ ಜಮೀನು ಪಡೆದ ಬಳಿಕ ಅವರಿಗೆ ವಿವಿಯಿಂದ ಹಣ ನೀಡಬೇಕಾಗುತ್ತದೆ. ಈ ಬಗ್ಗೆ ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಕುಲಸಚಿವ ಪ್ರೊ| ಬಸವರಾಜ ಪದ್ಮಶಾಲಿ, ಪ್ರೊ| ಎಸ್‌.ಎಂ. ಗಂಗಾಧರಯ್ಯ, ಡಾ| ಶೋಭಾ ನಾಯಕ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.