
ಈಗಲೇ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಿಲ್ಲ: ಬಿ.ಸಿ.ನಾಗೇಶ್ ಸ್ಪಷ್ಟನೆ
Team Udayavani, Sep 17, 2022, 5:21 PM IST

ಬೆಳಗಾವಿ: ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್ ಹಾಗೂ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಧ್ಯ 276 ಕೆಪಿಎಸ್‌ಗಳಿವೆ. ಮತ್ತೆ ತ್ವರಿತವಾಗಿ ಕೆಪಿಎಸ್ ಹಾಗೂ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೆ, ಭಾಷಾ ಶಿಕ್ಷಕರ ಕೊರತೆ ಎದುರಾಗುತ್ತದೆ. ಅಂತಹ ಪ್ರಯತ್ನಕ್ಕೆ ಮಂದಾಗುವುದಿಲ್ಲ. ಬದಲಾಗಿ ಶೀಘ್ರ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ತರಗತಿ ಅವಧಿಯಲ್ಲಿ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
‘ರಾಜ್ಯದ ಬಹುತೇಕ ಶಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಕೆಯಾಗಿದೆ. ಶಿಕ್ಷಕರ ಹಾಜರಾತಿ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆದರೂ, ಕುಗ್ರಾಮ, ಬೆಟ್ಟ ಹಾಗೂ ತೋಟಪಟ್ಟಿಗಳಲ್ಲಿ ಇರುವ ಶಾಲೆಗಳಲ್ಲಿ ಶಿಕ್ಷಕರು ನಿಯಮಾನುಸಾರ ತರಗತಿಗೆ ಹಾಜರಾಗುತ್ತಿಲ್ಲ ಎಂಬ ದೂರು ಬರುತ್ತಿವೆ. ಶಿಕ್ಷಕರು ಇದನ್ನೇ ಮುಂದುವರಿಸಬಾರದು. ಶಾಲೆಗೆ ಬರಲು ಬಸ್ ಸೌಕರ್ಯದ ಕೊರತೆ ನೆಪ ಹೇಳಬಾರದು ಎಂದರು.
ಇದನ್ನೂ ಓದಿ:ಬಿಗ್ ಬಾಸ್ ಕನ್ನಡ ಓಟಿಟಿ : ಗಮನ ಸೆಳೆದ ಕರಾವಳಿಯ ನಟ ರೂಪೇಶ್ ಶೆಟ್ಟಿ
ಖಾನಾಪುರ ತಾಲ್ಲೂಕಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗಿಂತ ಮರಾಠಿ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪವನ್ನು ನಾಗೇಶ ಅಲ್ಲಗಳೆದ ನಾಗೇಶ, ‘ಮರಾಠಿ ಭಾಷಿಗರು ಕನ್ನಡ ಅಥವಾ ಆಂಗ್ಲ ಮಾಧ್ಯಮ ಶಿಕ್ಷಣದತ್ತ ಒಲವು ತೋರುತ್ತಿದ್ದಾರೆ. ಹೀಗಾಗಿ ಮರಾಠಿ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆಯಾಗಿದೆ’ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
