ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಅವಕಾಶ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

Team Udayavani, Nov 13, 2019, 1:26 PM IST

ಬೆಳಗಾವಿ:  ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದ್ದನ್ನು ಸ್ವಾಗತಿಸಿ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

ತೀರ್ಪು ಹೊರಬೀಳುತ್ತಿದ್ದಂತೆ ಗೋಕಾಕ್ ನಗರದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಅದೇ ರೀತಿ ಅಥಣಿ ಪಟ್ಟಣದಲ್ಲಿ ಮಹೇಶ್ ಕುಮಟಳ್ಳಿ ಅವರ ಬೆಂಬಲಿಗರು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ