ಒಂಬತ್ತು ಸಾವಿರಕ್ಕೂ ಹೆಚ್ಚು ಪಿಪಿಇ ಕಿಟ್‌ ಬಳಕೆ

ನಿತ್ಯ 150ಕ್ಕೂ ಹೆಚ್ಚು ಕಿಟ್‌ ಬಳಸುತ್ತಿರುವ ವೈದ್ಯರು

Team Udayavani, May 17, 2020, 10:02 AM IST

ಒಂಬತ್ತು ಸಾವಿರಕ್ಕೂ ಹೆಚ್ಚು ಪಿಪಿಇ ಕಿಟ್‌ ಬಳಕೆ

ಬೆಳಗಾವಿ: ದಿನದಿನಕ್ಕೂ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಸೋಂಕಿತರ ಚಿಕಿತ್ಸೆ ಹಾಗೂ ಆರೈಕೆ ಮಾಡುತ್ತಿರುವ ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿಗಳು ಪ್ರತಿ ದಿನ ಕನಿಷ್ಠ 150ಕ್ಕೂ ಹೆಚ್ಚು ವೈಯಕ್ತಿಕ ಸುರಕ್ಷತಾ ಕಿಟ್‌ (ಪಿಪಿಇ)ಗಳನ್ನು ಬಳಸುತ್ತಿದ್ದು, ಈವರೆಗೆ 9 ಸಾವಿರಕ್ಕೂ ಹೆಚ್ಚು ಪಿಪಿಇ ಕಿಟ್‌ ಗಳ ಬಳಕೆ ಆಗಿದೆ.

ಒಬ್ಬರಿಂದ ಒಬ್ಬರಿಗೆ ಹರಡುವ ಕೋವಿಡ್ ಮಹಾಮಾರಿ ರೋಗ ತಗುಲದಂತೆ ತಡೆಯಲು ಪಿಪಿಇ ಅತ್ಯವಶ್ಯಕವಾಗಿದೆ. ಸೋಂಕಿತರಿಗೆ ದಿನಾಲೂ ಚಿಕಿತ್ಸೆ ನೀಡಿ ಆರೈಕೆ ಮಾಡುತ್ತಿರುವ ವೈದ್ಯರು, ನರ್ಸ್‌ಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ವಾರ್ಡ್‌ ಬಾಯ್‌ ಸೇರಿದಂತೆ ಇತರರು ತಮ್ಮ ಸುರಕ್ಷತೆಗೆ ಪಿಪಿಇ ಕಿಟ್‌ಗಳನ್ನೇ ಅವಲಂಬಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮಾ.15ರಿಂದಲೇ ಕಿಟ್‌ ಬಳಕೆ ಆರಂಭಗೊಂಡಿದೆ. ಜಿಲ್ಲಾಸ್ಪತ್ರೆಯಲ್ಲಿ ಪಿಪಿಇ ಕಿಟ್‌ ಧರಿಸಿಕೊಂಡೇ ವೈದ್ಯರು ಹಾಗೂ ನರ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ದಿನನಿತ್ಯ ಸುಮಾರು ಏನಿಲ್ಲವೆಂದರೂ 150 ಪಿಪಿಇ ಕಿಟ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಎರಡು ತಿಂಗಳ ಅವಧಿಯಲ್ಲಿ ಸುಮಾರು 9 ಸಾವಿರಕ್ಕೂ ಹೆಚ್ಚು ಕಿಟ್‌ಗಳು ಬೆಳಗಾವಿ ಜಿಲ್ಲೆಯೊಂದರಲ್ಲಿಯೇ ಬಳಕೆ ಆಗಿರುವುದು ವಿಶೇಷವಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಬಳಕೆ: ಪಿಪಿಇ ಕಿಟ್‌ಗಳಿಲ್ಲದೇ ಯಾರೊಬ್ಬರೂ ಕೋವಿಡ್‌ -19 ವಾರ್ಡ್‌ ಪ್ರವೇಶಿಸುವಂತಿಲ್ಲ. ಕೋವಿಡ್‌-19 ವಾರ್ಡ್‌ ಪ್ರವೇಶಿಸುವ ವೈದ್ಯರು, ಶುಶ್ರೂಷಕಿಯರು, ವಾರ್ಡ್‌ ಬಾಯ್‌ಗಳು, ಬೇರೆ ಆಸ್ಪತ್ರೆಗಳಿಂದ ಬರುವ ವೈದ್ಯರು, ವಾರ್ಡ್‌ ಪರಿಶೀಲನೆಗೆ ಬರುವ ಅಧಿಕಾರಿಗಳು, ವಾರ್ಡ್‌ದಲ್ಲಿ ವಿದ್ಯುತ್‌ ಕೆಲಸ, ಪೈಪಿಂಗ್‌ ಕೆಲಸ, ಅಡುಗೆ ಪೂರೈಸಲು ಬರುವವರು ಕಡ್ಡಾಯವಾಗಿ ಪಿಪಿಇ ಕಿಟ್‌ಗಳನ್ನು ಬಳಸುತ್ತಿದ್ದಾರೆ. ಗರಿಷ್ಠ ಆರು ಗಂಟೆವರೆಗೂ ಒಬ್ಬ ವ್ಯಕ್ತಿ ಈ ಕಿಟ್‌ ಧರಿಸಬಹುದಾಗಿದೆ.

ನಿತ್ಯ ತ್ಯಾಜ್ಯ ವಿಲೇವಾರಿ: ಪಿಪಿಇ ಕಿಟ್‌ ಬಳಕೆಯಾದ ಬಳಿಕ ಅದು ತ್ಯಾಜ್ಯವಾಗಿ ಮಾರ್ಪಾಡಾಗುತ್ತದೆ. ಇದನ್ನು ವಿಲೇವಾರಿ ಮಾಡುವುದು ಸವಾಲಿನ ಕೆಲವಾಗಿದೆ. ಪಿಪಿಇ ಕಿಟ್‌ ತ್ಯಾಜ್ಯ ಹೊರತುಪಡಿಸಿ ಇತರೆ ತ್ಯಾಜ್ಯವೂ ಈ ಕೋವಿಡ್‌-19 ಆಸ್ಪತ್ರೆಯಿಂದ ಉತ್ಪತ್ತಿಯಾಗುತ್ತಿದೆ. ಇದಕ್ಕಾಗಿಯೇ ಪ್ರತ್ಯೇಕ ವಾಹನ, ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಬೆಳಗ್ಗೆ ಬಂದು ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡುವಲ್ಲಿ ನಿರತರಾಗುತ್ತಾರೆ. ಈ ಸಿಬ್ಬಂದಿಗಳೂ ಪಿಪಿಇ ಕಿಟ್‌ ಧರಿಸಿ ತ್ಯಾಜ್ಯ ವಿಲೇವಾರಿ ಮಾಡುತ್ತಾರೆ.

ಈ ತ್ಯಾಜ್ಯದಲ್ಲಿ ಪಿಪಿಇ ಕಿಟ್‌ಗಳು, ಮಾಸ್ಕ್, ರೋಗಿಗಳ ಡ್ರೆಸಿಂಗ್‌ಗೆ ಬಳಸಿದ ಹತ್ತಿ ಸೇರಿದೆ. ಜತೆಗೆ ಕೊರೊನಾ ರೋಗಿಗಳಗಂಟಲು ಸ್ರಾವ, ಕಫದ ಮಾದರಿಗಳನ್ನು ತೆಗೆಯಲು ಬಳಸಿದ ವಸ್ತುಗಳು, ಸಿರಿಂಜ್‌, ಮಾತ್ರೆ ಪಾಕೆಟ್‌ಗಳು, ಗ್ಲೂಕೋಸ್‌ ಬಾಟಲಿ ಸೇರಿದಂತೆ ಪ್ಲಾಸ್ಟಿಕ್‌ ವಸ್ತುಗಳನ್ನೂ ವಿಲೇವಾರಿ ಮಾಡಲಾಗುತ್ತದೆ. ರೋಗಿಗಳ ಸಂಖ್ಯೆ ಹೆಚ್ಚಾದಂತೆ ಪಿಪಿಇ ಕಿಟ್‌ಗಳ ಬಳಕೆ ಹೆಚ್ಚುತ್ತಿದೆ. ಇದರಿಂದಲೇ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯವೂ ಸಂಗ್ರಹವಾಗುತ್ತಿದೆ. ಕೋವಿಡ್ ಕಸವನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ಪ್ಯಾಕ್‌ ಮಾಡಿ ಕೋವಿಡ್‌ ತ್ಯಾಜ್ಯ ಎಂದು ಬರೆದು ವಿಲೇವಾರಿ ಮಾಡುವ ವ್ಯವಸ್ಥೆ ಇಲ್ಲಿದೆ.

ಸೋಂಕಿತ ಮಕ್ಕಳನ್ನು ದೂರದಿಂದಲೇ ನೋಡಿ ಕಣ್ಣೀರು ಸುರಿಸಿದ ತಾಯಿ! :  ಬೆಳಗಾವಿಯ ಕೋವಿಡ್‌ ಆಸ್ಪತ್ರೆಯಲ್ಲಿ 18 ವರ್ಷದೊಳಗಿನ 17 ಮಕ್ಕಳು ದಾಖಲಾಗಿದ್ದಾರೆ. ಈ ಎಲ್ಲರಿಗೂ ಕೋವಿಡ್ ಪಾಸಿಟಿವ್‌ ದೃಢವಾಗಿದೆ. ಇಂಥ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಆರೈಕೆ ಮಾಡಲಾಗುತ್ತಿದೆ. ಈ ಮಕ್ಕಳ ಪೋಷಕರು ಭೇಟಿಯಾಗಲು ಅವಕಾಶ ಇಲ್ಲ. ಬೇರೆ ವಾರ್ಡ್‌ದಲ್ಲಿ ನಿಂತು ದೂರದಿಂದಲೇ ಮಕ್ಕಳನ್ನು ನೋಡಬಹುದಾಗಿದೆ. ನಿತ್ಯ ತಮ್ಮ ಮಕ್ಕಳನ್ನು ನೋಡಿ ತಾಯಂದಿರರು ಕಣ್ಣೀರು ಸುರಿಸುತ್ತಿರುವ ದೃಶ್ಯ ಮನಕಲಕುವಂತಿದೆ. ತಾಯಂದಿರಿಗೂ ಪಿಪಿಇ ಕಿಟ್‌ಗಳನ್ನು ನೀಡಲಾಗುತ್ತದೆ.

­ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.