17ರಿಂದ ತಹಶೀಲ್ದಾರ್‌ ಕಚೇರಿವರೆಗೆ ಪಾದಯಾತ್ರೆ

ಯೋಜನೆ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.

Team Udayavani, Jan 14, 2022, 4:28 PM IST

17ರಿಂದ ತಹಶೀಲ್ದಾರ್‌ ಕಚೇರಿವರೆಗೆ ಪಾದಯಾತ್ರೆ

ಅಥಣಿ: ಬಸವೇಶ್ವರ ಏತ ನೀರಾವರಿ ಯೋಜನೆ ವಿಳಂಬದ ಬಗ್ಗೆ ಸಾಕಷ್ಟು ಬಾರಿ ನಿಗಮದ ಅಧಿ ಕಾರಿಗಳು, ನೀರಾವರಿ ಸಚಿವರು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ನಮ್ಮ ಮನವಿಗೆ ಯಾರೊಬ್ಬರೂ ಸ್ಪಂದಿಸಿಲ್ಲ. ಹೀಗಾಗಿ ಸುಮಾರು 6 ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ.

ಈ ವಿಳಂಬ ನೀತಿ ಖಂಡಿಸಿ ಜ.17ರಿಂದ ಖೀಳೇಗಾಂವ ಬಸವೇಶ್ವರ ದೇವಸ್ಥಾನದಿಂದ ಅಥಣಿ ತಹಶೀಲ್ದಾರ್‌ ಕಚೇರಿವರೆಗೆ ತಾಲೂಕಿನ ಉತ್ತರ ಭಾಗದ ಜನರ ಸಹಭಾಗಿತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಅಥಣಿ ನ್ಯಾಯವಾದಿಗಳ ಸಂಘದ ಸದಸ್ಯ ಎಸ್‌.ಎಸ್‌. ಪಾಟೀಲ ಆರೋಪಿಸಿದರು.

ಅಥಣಿ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖೀಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಟೆಂಡರ್‌ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ನೀರಾವರಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರಿಂದ ಕಿಕ್‌ ಬ್ಯಾಕ್‌ ಪಡೆದುಕೊಂಡಿದ್ದರಿಂದಲೇ ಯೋಜನೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ.

ಯೋಜನೆಗೆ 2017ರ ಮಾರ್ಚ್‌ ತಿಂಗಳಲ್ಲಿ ಚಾಲನೆ ನೀಡಿ 2020ರ ಮಾರ್ಚ್‌ ತಿಂಗಳಲ್ಲಿ ಪೂರ್ಣಗಳಿಸಬೇಕೆಂದು ಗುತ್ತಿಗೆದಾರರಿಗೆ ಸಮಯ ನಿಗದಿ ಮಾಡಲಾಗಿತ್ತು. ಆದರೆ ಇನ್ನೆರಡೇ ತಿಂಗಳಲ್ಲಿ ಸಮಯ ಮುಕ್ತಾಯಗೊಂಡು ಒಂದು ವರ್ಷವಾಗುತ್ತದೆ ಆದರೂ ಯೋಜನೆ ಅರ್ಧದಷ್ಟೂ ಕಾಮಗಾರಿ ಪೂರ್ಣಗೊಂಡಿಲ್ಲ. ಯೋಜನೆ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಗುತ್ತಿಗೆದಾರರಿಂದ ಕಿಕ್‌ ಬ್ಯಾಕ್‌ ಪಡೆದ
ಜನಪ್ರತಿನಿಧಿ  ಹಾಗೂ ಅಧಿ ಕಾರಿಗಳನ್ನು ತನಿಖೆಗೊಳಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ಎಸ್‌. ಹುಚಗೌಡರ ಮಾತನಾಡಿ, ಇತ್ತೀಚೆಗೆ 2017ರಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಯೋಜನೆ ವಿಳಂಬ ಧೋರಣೆಯಿಂದ ಜನರ ಉತ್ಸಾಹ ಕುಗ್ಗಿದೆ. ಯೋಜನೆಗೆ ಶೀಘ್ರ ಚಾಲನೆ ನೀಡಬೇಕು. ಇಲ್ಲದಿದ್ದಲ್ಲಿ ಪಾದಯಾತ್ರೆ ಸೇರಿದಂತೆ ಅನೇಕ ರೀತಿಯ ಉಗ್ರ ಹೋರಾಟಕ್ಕೆ ಅಣಿಯಾಗುವುದಾಗಿ ಎಚ್ಚರಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸನಗೌಡಾ ಪಾಟೀಲ ಮಾತನಾಡಿ, ಈ ಯೋಜನೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೇ ನೀರಾವರಿ ಇಲಾಖೆ ಸಚಿವರಾಗಿದ್ದು, ಯೋಜನೆಯಲ್ಲಿ ವಿಳಂಬ ಏಕೆ ಆಗುತ್ತಿದೆ? ಎನ್ನುವ ಮಾಹಿತಿ ಪಡೆಯಬಹುದಿತ್ತು. ಆದರೆ ಅವರ ಮೌನ ನಡೆ ಸರಿಯಲ್ಲ ಎಂದರು.

ಈ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಬಿ.ಟಿ. ಕಾಂಬಳೆ, ವಿಜಯ ಕಲಮಡಿ, ಭೀಮನಗೌಡರ, ಶಂಕರಗೌಡರ, ರೈತ ಸಂಘದ ತಾಲೂಕು ಅಧ್ಯಕ್ಷ ಮಹಾದೇವ ಮಡಿವಾಳ, ಅನಂತಪುರ ಗ್ರಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ, ಭೀಮನಗೌಡ ಪಾಟೀಲ, ಶಬ್ಬೀರ ಸಾತಬಚ್ಚೆ ಇತರರಿದ್ದರು.

ಶಾಸಕ ಶ್ರೀಮಂತ ಪಾಟೀಲ ಶೀಘ್ರ ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಆಶ್ವಾಸನೆ ನೀಡಿದರೂ ಅದು ಇನ್ನೂ ಈಡೇರಿಲ್ಲ. ಇವರ ನಿರ್ಲಕ್ಷವೇ ಇವತ್ತು ಕಾಮಗಾರಿ ಸ್ಥಗಿತಕ್ಕೆ ಕಾರಣವಾಗಿದೆ. 17ರಂದು ನಡೆಯುವ ಹೋರಾಟದಲ್ಲಿ ತಾಲೂಕಿನ ಚಿಂತಕರು, ಸಾಹಿತಿಗಳು, ಪತ್ರಕರ್ತರು, ಕನ್ನಡಪರ ಹೋರಾಟಗಾರರು, ನ್ಯಾಯವಾದಿಗಳು, ವ್ಯಾಪಾರಸ್ಥರು, ಗಣ್ಯ ನಾಗರಿಕರು ಸೇರಿದಂತೆ ಯೋಜನೆಯ ವ್ಯಾಪ್ತಿಯ 22 ಗ್ರಾಮಗಳ ಗ್ರಾಮಸ್ಥರು ಪಾಲ್ಗೊಳ್ಳಲ್ಲಿದ್ದು, ಈ ಹೋರಾಟ ಸಂಪೂರ್ಣ ಪಕ್ಷಾತೀತ.
ಎಸ್‌.ಎಸ್‌. ಪಾಟೀಲ,
ಅಥಣಿ ನ್ಯಾಯವಾದಿಗಳ ಸಂಘದ ಸದಸ್ಯ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.